Home ಪಹಣಿ ತಿದ್ದುಪಡಿ ಸಮಸ್ಯೆ ನಿವಾರಣೆಗೆ ರೈತರ ಪರದಾಟ
Home

ಪಹಣಿ ತಿದ್ದುಪಡಿ ಸಮಸ್ಯೆ ನಿವಾರಣೆಗೆ ರೈತರ ಪರದಾಟ

Share
Share

ಚಿಕ್ಕಮಗಳೂರು: ಕಾಫಿನಾಡಿನ ರೈತರಿಗೆ ಒಂದೆಡೆ ಯೂರಿಯಾ ಗೊಬ್ಬರದ ಸಮಸ್ಯೆಯಾದರೆ ಮತ್ತೊಂದೆಡೆ ಪಹಣಿ ತಿದ್ದುಪಡಿ ಸಮಸ್ಯೆಯಿಂದಾಗಿ ಈ ಬಾರಿ ಕೃಷಿ ಚಟುವಟಿಕೆಗಳನ್ನು ನಡೆಸಲು ಹರಸಾಹಸ ಪಡುವಂತಾಗಿದೆ.

ತಲೆಮಾರುಗಳಿಂದ ಸಾಗುವಳಿ ಮಾಡುತ್ತಿದ್ದ ಜಮೀನಿನ ಪಹಣಿಯಲ್ಲಿ ರೈತರ ಹೆಸರನ್ನು ತೆಗೆದು ‘ಸರ್ಕಾರಿ’ ಎಂದು ನಮೂದಿಸಿರುವುದು ರೈತರ ಜೀವನೋಪಾಯಕ್ಕೆ ದೊಡ್ಡ ಹೊಡೆತ ನೀಡಿದೆ.

ಪ್ರಮುಖವಾಗಿ, ಮೂಡಿಗೆರೆ ಹಾಗೂ ಕಡೂರು ತಾಲೂಕಿನ ಸಾವಿರಾರು ರೈತರ ಪಹಣಿಯಲ್ಲಿ ಫೂಟ್ ಐಡಿ (Fruit ID) ಇಲ್ಲದ ಕಾರಣ ರೈತರಿಗೆ ಆನ್‌ಲೈನ್ ಮೂಲಕ ರಸಗೊಬ್ಬರ ಪಡೆಯಲು ಸಾಧ್ಯವಾಗುತ್ತಿಲ್ಲ.
ಮಳೆಗಾಲ ಆರಂಭವಾಗಿರುವ ಈ ಸಂದರ್ಭದಲ್ಲಿ ಭತ್ತ, ಕಾಫಿ, ಜೋಳ ಹಾಗೂ ರಾಗಿ ಬೆಳೆಗಳಿಗೆ ಗೊಬ್ಬರ ಹಾಕುವುದು ಅತ್ಯಗತ್ಯವಾಗಿದೆ. ಆದರೆ ಅಧಿಕಾರಿಗಳ ಈ ಕ್ರಮದಿಂದಾಗಿ ಖಾಸಗಿ ಅಥವಾ ಸಹಕಾರಿ ಸಂಘಗಳ ಗೊಬ್ಬರದ ಅಂಗಡಿಗಳಲ್ಲಿ ರೈತರಿಗೆ ಗೊಬ್ಬರ ನೀಡಲಾಗುತ್ತಿಲ್ಲ.

ತಂಬ್ ಇಂಪ್ರೆಶನ್ ನೀಡಿದರೂ ಪಹಣಿಯಲ್ಲಿ ಹೆಸರಿಲ್ಲದ ಕಾರಣ ತಾಂತ್ರಿಕವಾಗಿ ಗೊಬ್ಬರ ವಿತರಣೆ ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಇದರಿಂದಾಗಿ ಬೆಳೆಗಳಿಗೆ ಸರಿಯಾದ ಸಮಯಕ್ಕೆ ಪೋಷಕಾಂಶ ನೀಡಲು ಸಾಧ್ಯವಾಗದೆ ಇಳುವರಿ ಕುಂಠಿತವಾಗುವ ಭೀತಿ ಎದುರಾಗಿದೆ.

ನ್ಯಾಯಾಲಯವು ಈ ವಿಚಾರದಲ್ಲಿ ಸ್ಪಷ್ಟವಾಗಿ ತಡೆಯಾಜ್ಞೆ ನೀಡಿದ್ದರೂ ಸಹ, ಜಿಲ್ಲಾಡಳಿತವು ಪಹಣಿಯಲ್ಲಿ ಹಳೆಯ ಸ್ಥಿತಿಯನ್ನು ಮರುಸ್ಥಾಪಿಸದ ಕಾರಣ ರೈತರು ಕೃಷಿ ಸವಲತ್ತುಗಳಿಂದ ವಂಚಿತರಾಗುತ್ತಿದ್ದಾರೆ.
ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಿ ರೈತರಿಗೆ ಸುಲಭವಾಗಿ ರಸಗೊಬ್ಬರ ಹಾಗೂ ಇತರ ಕೃಷಿ ಸೌಲಭ್ಯಗಳು ಸಿಗುವಂತೆ ಮಾಡಬೇಕು ಎಂದು ರೈತ ಹಿತರಕ್ಷಣಾ ವೇದಿಕೆಯು ಒತ್ತಾಯಿಸಿದೆ.

Farmers’ scramble to resolve land title amendment issue

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...