Home ಸಚಿವರ ಆದೇಶ ಅನುಷ್ಠಾನಕ್ಕೆ ರೈತ ಹೋರಾಟ ಸಮಿತಿ ಆಗ್ರಹ
HomechikamagalurLatest Newsnamma chikmagalur

ಸಚಿವರ ಆದೇಶ ಅನುಷ್ಠಾನಕ್ಕೆ ರೈತ ಹೋರಾಟ ಸಮಿತಿ ಆಗ್ರಹ

Share
Share

ಚಿಕ್ಕಮಗಳೂರು:  ಸಚಿವರಾದ ಈಶ್ವರಖಂಡ್ರೆ ಮತ್ತು ಕೃಷ್ಣಬೈರೇಗೌಡ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಅರಣ್ಯ ಮತ್ತು ಕಂದಾಯ ಭೂಮಿ ಸಮಸ್ಯೆಗಳಿಗೆ ಪರಿಹಾರ ಸಿಗುವ ನಿಟ್ಟಿನಲ್ಲಿ ಚರ್ಚೆಯಾಗಿದ್ದು, ಅಧಿಕಾರಿಗಳು ಸಚಿವರ ಆದೇಶವನ್ನು ಅನುಷ್ಠಾನ ಮಾಡಬೇಕು ಎಂದು ಜಿಲ್ಲಾ ನಾಗರೀಕ ಮತ್ತು ರೈತ ಹೋರಾಟ ಸಮಿತಿಯ ಅಧ್ಯಕ್ಷ ಎಸ್.ವಿಜಯ್‌ಕುಮಾರ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಧಾನಸೌಧದಲ್ಲಿ ಜು.೩ ರಂದು ನಡೆದ ಸಭೆಯಲ್ಲಿ ಇಬ್ಬರು ಸಚಿವರೊಂದಿಗೆ ಜಿಲ್ಲಾ ಸಚಿವರಾದ ಕೆ.ಜೆ. ಜಾರ್ಜ್ ಮತ್ತು ಜಿಲ್ಲೆಯ ಐವರು ಶಾಸಕರು, ಕಂದಾಯ ಇಲಾಖೆ ಕಾರ್ಯದರ್ಶಿ, ಎಡಿಸಿ, ಜಿಲ್ಲೆಯ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ನಾಗರೀಕ ಮತ್ತು ರೈತ ಹೋರಾಟ ಸಮಿತಿ ಮುಖಂಡರು ಭಾಗವಹಿಸಿದ್ದೆವು. ಅಲ್ಲಿ ಜಿಲ್ಲೆಯ ಮೂಲ ಸಮಸ್ಯೆಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು ಎಂದು ಹೇಳಿದರು.

ಎಮ್ಮೆದೊಡ್ಡಿ, ಚುರ್ಚೆಗುಡ್ಡ, ಕಾಮೇನಹಳ್ಳಿ ರೈತರ ಸಮಸ್ಯೆ, ಸೊಪ್ಪಿನಬೆಟ್ಟ, ಭದ್ರಾ ಮುಳಗಡೆ ರೈತರ ಸಮಸ್ಯೆ, ಜಿಲ್ಲೆಯ ನಮೂನೆ, ೫೦-೫೩, ೫೭ ರ ಜತೆಗೆ ಜಿಲ್ಲೆ ನಿವೇಶನ ರಹಿತರ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಒಟ್ಟಾರೆ ರಾಜ್ಯದಲ್ಲಿ ಇದ್ದ ಸುಮಾರು ೯ ಲಕ್ಷ ಹೆಕ್ಟೇರ್ ಡೀಮ್ಡ್ ಅರಣ್ಯ ಪರಿಷ್ಕರಿಸಿ ಸುಮಾರು ೩.೪೦ ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಮಿತಿಗೊಳಿಸಲಾಗಿದೆ. ಈ ಭೂಮಿಯು ಪೂರ್ಣ ಕಂದಾಯ ಭೂಮಿಯಾಗಿದೆ.

ಈಗಾಗಲೆ ರಾಜ್ಯದಲ್ಲಿ ೪(೧) ಸೇರಿದಂತೆ ಅರಣ್ಯ ಸಮಸ್ಯೆಯಲ್ಲಿರುವ ಸುಮಾರು ೪೦ ಸಾವಿರ ಹೆಕ್ಟೇರ್ ಪ್ರದೇಶವನ್ನು ರೈತರಿಗೆ ಮತ್ತು ಗ್ರಾಮ, ಜನವಸತಿ ಪ್ರದೇಶಗಳನ್ನು ಬಿಟ್ಟು ಇದಕ್ಕೆ ಬದಲಿಯಾಗಿ ಸುಮಾರು ೩.೪೦ ಲಕ್ಷ ಹೆಕ್ಟೇರ್ ಕಂದಾಯ ಭೂಮಿಯನ್ನು ಡೀಮ್ಡ್ ಫಾರೆಸ್ಟ್‌ಗಾಗಿ ಮುಂದುವರಿಸಲು ಮುಂದಿನ ನವೆಂಬರ್ ತಿಂಗಳೊಳಗೆ ಸುಪ್ರೀಂಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಚಿವ ಈಶ್ವರಖಂಡ್ರೆ ಅವರು ಸಭೆಗೆ ಮತ್ತು ಸಭೆಯಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಹೇಳಿದರು.

ಡಿಮ್ಡ್ ಫಾರೆಸ್ಟ್ ಅಫಿಡವಿಟ್ ಸಲ್ಲಿಸುವ ಕಾಲಮಿತಿಯೊಳಗೆ ಈಗಾಗಲೆ ಘೋಷಿತವಾಗಿರುವ ಸೆಕ್ಷನ್೪(೧) ಅಧಿಸೂಚನೆಯಲ್ಲಿರುವ ರೈತರ ಸಾಗುವಳಿಯ ನಿಖರ ವಿಸ್ತೀರ್ಣ ಮತ್ತು ಗ್ರಾಮದ ಅಭಿವೃದ್ಧಿ ಮತ್ತಿತರೆ ಉಪಯೋಗಕ್ಕೆ ಅವಶ್ಯಕತೆ ಇರುವ ವಿಸ್ತೀರ್ಣವನ್ನು ಗುರುತಿಸಿ ಸೆಕ್ಷನ್ ೧೭ ಅಂತಿಮ ಅಧಿಸೂಚನೆ ಮಾಡಲು ಎಫ್‌ಎಸ್‌ಒಗಳಿಗೆ ಸಚಿವರು ಸೂಚಿಸಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿಗಳು ಎಫ್‌ಎಸ್‌ಒ ಅವರೊಂದಿಗೆ ಕಂದಾಯ ಅಗತ್ಯತೆಯ ಭೂಮಿಯನ್ನು ಗುರುತಿಸಲು ಎಲ್ಲ ಗ್ರಾಮಲೆಕ್ಕಿಗರು ಮತ್ತು ರಾಜಸ್ವ ನಿರೀಕ್ಷಕರುಗಳಿಗೆ ಸೂಚನೆ ನೀಡಬೇಕು. ಅರಣ್ಯ ೪(೧), ರೈತರ ಸಾಗುವಳಿ ಮಾಹಿತಿಯ ಪಟ್ಟಿಯನ್ನು ಸಲ್ಲಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಸಂಚಾಲಕರಾದ ಕೆ.ಕೆ.ರಘು, ವೀರಭದ್ರಪ್ಪ, ರವಿಕುಮಾರ್, ಈಶ್ವರ್, ಡಿ.ರವಿ ಮತ್ತಿತರರಿದ್ದರು

Farmers’ Struggle Committee demands implementation of Minister’s order

Share

Leave a comment

Leave a Reply

Your email address will not be published. Required fields are marked *

Don't Miss

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ. ಮಧ್ಯರಾತ್ರಿ...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು....

Related Articles

‘ನಮ್ಮೂರಿಗೆ ರಸ್ತೆ ಅಭಿವೃದ್ಧಿ ಬೇಡ’ ಎಂದು ಗ್ರಾಮಸ್ಥರು….?

ಚಿಕ್ಕಮಗಳೂರು: ಸಾಮಾನ್ಯವಾಗಿ ಗ್ರಾಮಗಳಿಗೆ ರಸ್ತೆ ಬೇಕು, ಕುಡಿಯುವ ನೀರು ಬೇಕು, ವಿದ್ಯುತ್ ಬೇಕು ಎಂದು ಜನ...

ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು

ಚಿಕ್ಕಮಗಳೂರು: ಬೀರೂರು ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು,...

ಮಲೆನಾಡಿನಲ್ಲಿ ಮತ್ತೆ ಅಪಾಯಕಾರಿ ಕಾಲುಸಂಕಗಳನ್ನೇ ಆಶ್ರಯ ಪಡೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಸ್ತಬ್ಧವಾಗುತ್ತಿದ್ದಂತೆ ಸರ್ಕಾರ ಅಲ್ಲಿನ ಕುಗ್ರಾಮಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ...

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್...