Home namma chikmagalur chikamagalur ಹಳೇ ವೈಷಮ್ಯದ ಹಿನ್ನೆಲೆ ವ್ಯಕ್ತಿಯ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ
chikamagalurHomeLatest Newsnamma chikmagalur

ಹಳೇ ವೈಷಮ್ಯದ ಹಿನ್ನೆಲೆ ವ್ಯಕ್ತಿಯ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ

Share
Share

ಚಿಕ್ಕಮಗಳೂರು: ಹಳೇ ವೈಷಮ್ಯದ ಹಿನ್ನೆಲೆ ವ್ಯಕ್ತಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಸಮೀಪದ ಹವ್ವಳ್ಳಿ ಗ್ರಾಮದಲ್ಲಿ ನಡೆದಿದೆ.

ಸುಧಾಕರ್ ಎಂಬುವವರೇ ಮಚ್ಚಿನ ದಾಳಿಗೆ ಒಳಗಾದ ವ್ಯಕ್ತಿಯಾಗಿದ್ದು, ಅದೇ ಗ್ರಾಮದ ಮೋಹನ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಈ ಇಬ್ಬರ ನಡುವೆ ಕಳೆದ ಕೆಲವು ಸಮಯದಿಂದ ದ್ವೇಷ ಹೊಗೆಯಾಡುತ್ತಿದ್ದು. ಈ ಹಿಂದೆ ನಡೆದಿದ್ದ ಘಟನೆಗೆ ಪ್ರತೀಕಾರವಾಗಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ಸುಮಾರು ಎರಡು ತಿಂಗಳ ಹಿಂದೆ ಸುಧಾಕರ್ ಅವರು ಮೋಹನ್ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದರು ಎನ್ನಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಧಾಕರ್ ಅವರು ಒಂದು ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿ ಇತ್ತೀಚೆಗಷ್ಟೇ ಹೊರಬಂದಿದ್ದರು.

ಜೈಲಿನಿಂದ ಬಂದಿದ್ದ ಸುಧಾಕ‌ರ್ ಅವರನ್ನು ಗುರಿಯಾಗಿಸಿಕೊಂಡಿದ್ದ ಮೋಹನ್, ಹಳೇ ದ್ವೇಷವನ್ನು ತೀರಿಸಿಕೊಳ್ಳುವ ಉದ್ದೇಶದಿಂದ ಸುಧಾಕ‌ರ್ ಮೇಲೆ ಮಚ್ಚಿನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ.

ದಾಳಿಯ ತೀವ್ರತೆಗೆ ಸುಧಾಕರ್ ಅವರ ಕೈ ಮತ್ತು ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಸುಧಾಕ‌ರ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಅಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Fatal attack with machete on man over old enmity

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...