ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ (KA18EM9510) ತೆರಳುತ್ತಿದ್ದ ಮೆಹಬೂಬ್ ಬಿ ಅಲಿಯಾಸ್ ಸಿಬ್ರಾನ್ ಎಂಬ ಯುವತಿಗೆ, ಎದುರಿನಿಂದ ತಪ್ಪು ದಿಕ್ಕಿನಲ್ಲಿ (ರಾಂಗ್ ಸೈಡ್) ಅತಿ ವೇಗ ಮತ್ತು ನಿರ್ಲಕ್ಷ್ಯದಿಂದ ಬಂದ ಕಾರು (KA18P2669) ನಿಯಂತ್ರಣ ತಪ್ಪಿ ಭೀಕರವಾಗಿ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಯುವತಿಯ ಯಕೃತ್ತಿಗೆ ಗಂಭೀರ ಹಾನಿಯಾಗಿದ್ದು (Grade IV Liver Injury), ದೇಹದ ಒಳಗೆ ತೀವ್ರ ರಕ್ತಸ್ರಾವ ಉಂಟಾಗಿದೆ. ಸದ್ಯ ಸಂತ್ರಸ್ತೆ ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಅಪಘಾತ ಎಸಗಿದ ಕಾರು ಚಾಲಕಿಯನ್ನು ಎಐಟಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರಾಧ್ಯಾಪಕಿ ಎಂದು ಗುರುತಿಸಲಾಗಿದೆ. ಈಕೆ ಅಪಘಾತ ನಡೆದ ತಕ್ಷಣ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು, ಸಾರ್ವಜನಿಕರು ಮತ್ತು ಯುವತಿಯ ಸ್ನೇಹಿತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಆಸ್ಪತ್ರೆಗೆ ಬಂದ ನಂತರವೂ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿತೆ, ಸಂತ್ರಸ್ತೆಯ ಕುಟುಂಬಕ್ಕೆ ಯಾವುದೇ ರೀತಿಯ ವೈದ್ಯಕೀಯ ನೆರವು ನೀಡದೆ ಬೇಜವಾಬ್ದಾರಿತನ ಪ್ರದರ್ಶಿಸಿದ್ದಾರೆ. ಈ ಸಂಬಂಧ ಶಾವುಲ್ ಅಮೀದ್ ನೀಡಿದ ದೂರಿನ ಮೇರೆಗೆ ಚಿಕ್ಕಮಗಳೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಮೋಟಾರು ವಾಹನಗಳ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Fatal road accident near AIT Circle
Leave a comment