Home namma chikmagalur ajjampura ಮಗಳನ್ನು ವೈಶ್ಯಾವಾಟಿಕೆ ಅಡ್ಡೆಗೆ ನೂಕಿರುವ ತಂದೆ
ajjampurachikamagalurCrime NewsHomeLatest Newsnamma chikmagalur

ಮಗಳನ್ನು ವೈಶ್ಯಾವಾಟಿಕೆ ಅಡ್ಡೆಗೆ ನೂಕಿರುವ ತಂದೆ

Share
Share

ಚಿಕ್ಕಮಗಳೂರು:  ಹೆತ್ತ ತಂದೆಯೇ ರಕ್ಷಕನಾಗುವ ಬದಲು ಭಕ್ಷಕನಾದ ಘೋರ ಘಟನೆಯೊಂದು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಹೋಬಳಿಯ ಗ್ರಾಮವೊಂದರಲ್ಲಿ ನಡೆದಿದೆ. ಹಣದ ಹಪಾಹಪಿಗೆ ಬಿದ್ದ ತಂದೆ ಮತ್ತು ಅಜ್ಜಿ ಸೇರಿ, ತಾಯಿ ಇಲ್ಲದ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ವೇಶ್ಯಾವಾಟಿಕೆ ಅಡ್ಡೆಗೆ ನೂಕಿರುವ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ.

ಘಟನೆಯ ಹಿನ್ನೆಲೆ: ಬಾಲಕಿಯ ತಾಯಿ ಮೃತಪಟ್ಟಿದ್ದರಿಂದ ಆಕೆ ತಂದೆ ಗಿರೀಶ್ ಹಾಗೂ ಅಜ್ಜಿ ನಾಗರತ್ನ ಅವರ ಆಶ್ರಯದಲ್ಲಿದ್ದಳು. ಆದರೆ, ಈ ಪಾಪಿಗಳು ಹಣಕ್ಕಾಗಿ ಬಾಲಕಿಯನ್ನು ಭರತ್ ಶೆಟ್ಟಿ ಎಂಬುವವನ ಜೊತೆ ಮಂಗಳೂರಿಗೆ ಕಳುಹಿಸಿಕೊಟ್ಟಿದ್ದಾರೆ. ಮಂಗಳೂರಿನಲ್ಲಿ ಕಳೆದ 6 ದಿನಗಳಲ್ಲಿ 10ಕ್ಕೂ ಹೆಚ್ಚು ಕಾಮುಕರು ಬಾಲಕಿಯ ಮೇಲೆ ಸತತವಾಗಿ ಅತ್ಯಾ*ಚಾರ ಎಸಗಿದ್ದಾರೆ. ಇನ್ನು ಬಾಲಕಿಗೆ ಪಿರಿಯಡ್ಸ್ ಸಮಯವಿದ್ದರೂ ಆಕೆಯನ್ನು ಬಿಡದೇ ಹುರಿದು ಮುಕ್ಕಿದ್ದಾರೆ. ಈ ಬಗ್ಗೆ ನೊಂದ ಬಾಲಕಿ ನೀಡಿರುವ ಮಾಹಿತಿ ಪ್ರಕಾರ, ಆಕೆ ಋತುಸ್ರಾವದ (Periods) ಸಮಯದಲ್ಲಿದ್ದರೂ ಸಹ ಕಿಂಚಿತ್ತೂ ಕರುಣೆ ತೋರದ ಕಾಮುಕರು ಆಕೆಯ ಮೇಲೆ ನಿರಂತರವಾಗಿ ದೌರ್ಜನ್ಯ ಎಸಗಿದ್ದಾರೆ. ಸತತ ಆರು ದಿನಗಳ ಕಾಲ ನರಕಯಾತನೆ ಅನುಭವಿಸಿದ ಬಾಲಕಿ, ಹೇಗೋ ಅವರಿಂದ ತಪ್ಪಿಸಿಕೊಂಡು ವಾಪಸ್ ಊರಿಗೆ ಬಂದಿದ್ದಾಳೆ.

ಬೆಳಕಿಗೆ ಬಂದಿದ್ದು ಹೇಗೆ?: ಕಾಮುಕರ ಗುಂಪಿನಿಂದ ತಪ್ಪಿಸಿಕೊಂಡು ಊರಿಗೆ ಬಂದ ನಂತರ ಬಾಲಕಿ ತನ್ನ ಚಿಕ್ಕಪ್ಪ ಮತ್ತು ಅತ್ತೆಯ ಬಳಿ ತನಗೆ ತಂದೆ ಮತ್ತು ಅಜ್ಜಿಯಿಂದ ಆದ ಅನ್ಯಾಯ ಹಾಗೂ ಮಂಗಳೂರಿನಲ್ಲಿ ನಡೆದ ಭೀಕರ ಘಟನೆಯನ್ನು ವಿವರಿಸಿದ್ದಾಳೆ. ಕೂಡಲೇ ಎಚ್ಚೆತ್ತ ಬಾಲಕಿಯ ಚಿಕ್ಕಪ್ಪ ಬೀರೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಬೀರೂರು ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ತಂದೆ ಗಿರೀಶ್, ಅಜ್ಜಿ ನಾಗರತ್ನ ಮತ್ತು ದಲ್ಲಾಳಿ ಭರತ್ ಶೆಟ್ಟಿ ಸೇರಿದಂತೆ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 12 ಮಂದಿ ಆರೋಪಿಗಳ ವಿರುದ್ಧ ಪೋಕೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಜಾಲ ಬೀಸಿದ್ದಾರೆ. ಹಣದ ಆಸೆಗಾಗಿ ಸ್ವಂತ ರಕ್ತವನ್ನೇ ಮಾರಾಟಕ್ಕಿಟ್ಟ ಈ ಘಟನೆ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ.

Father pushes daughter into prostitution

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...