Home namma chikmagalur chikamagalur ಚಿಕ್ಕಮಗಳೂರು ಮೋಟಾರು ವಾಹನ ನಿರೀಕ್ಷಕ ವಿರುದ್ಧ ಎಫ್‌ಐಆರ್
chikamagalurCrime NewsHomeLatest Newsnamma chikmagalur

ಚಿಕ್ಕಮಗಳೂರು ಮೋಟಾರು ವಾಹನ ನಿರೀಕ್ಷಕ ವಿರುದ್ಧ ಎಫ್‌ಐಆರ್

Share
Share

ಚಿಕ್ಕಮಗಳೂರು: ವಾಹನಗಳನ್ನು ಭೌತಿಕವಾಗಿ ಪರಿಶೀಲಿಸದೇ ಫಿಟ್‌ನೆಸ್ ಸರ್ಟಿಫಿಕೇಟ್‌ (FC) ನೀಡಿರುವ ಆರೋಪ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಕೇಳಿಬಂದಿದೆ. 2023ರಿಂದ 2025ರವರೆಗೆ 13,600ಕ್ಕೂ ಹೆಚ್ಚು ವಾಹನಗಳಿಗೆ ನಿಯಮ ಉಲ್ಲಂಘಿಸಿ ಎಫ್‌ಸಿ ನೀಡಲಾಗಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಮೋಟಾರು ವಾಹನ ನಿರೀಕ್ಷಕ ಜಗದೀಶ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಚಿಕ್ಕಮಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿ (ಪ್ರಭಾರ) ರಾಕೇಶ್ ಕುಮಾರ್ ನೀಡಿದ ದೂರಿನ ಆಧಾರದಲ್ಲಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೋವಾ, ಮಹಾರಾಷ್ಟ್ರ, ಹರಿಯಾಣ ಮತ್ತು ಪಂಜಾಬ್ ಸೇರಿದಂತೆ ಹೊರರಾಜ್ಯಗಳಲ್ಲಿ ನೋಂದಣಿಯಾಗಿರುವ ವಾಹನಗಳಿಗೆ ಸೂಕ್ತ ಪರಿಶೀಲನೆ ನಡೆಸದೆ ಎಫ್‌ಸಿ ನೀಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ದೂರಿನ ಪ್ರಕಾರ, ಜಗದೀಶ್ ಅವರು 2023ರ ಏಪ್ರಿಲ್ 1ರಿಂದ 2025ರ ಜುಲೈ 5ರವರೆಗೆ ಚಿಕ್ಕಮಗಳೂರು ಆರ್‌ಟಿಒ ಕಚೇರಿಯಲ್ಲಿ ಮೋಟಾರು ವಾಹನ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಈ ಅವಧಿಯಲ್ಲಿ ಹೊರರಾಜ್ಯಗಳ ವಾಹನಗಳು ಮಾತ್ರವಲ್ಲದೆ, ಕರ್ನಾಟಕದ ವಿವಿಧ ಸಾರಿಗೆ ಕಚೇರಿಗಳಲ್ಲಿ ನೋಂದಣಿಯಾದ ವಾಹನಗಳು ಮತ್ತು ಬಸ್‌ಗಳಿಗೂ ಭೌತಿಕ ತಪಾಸಣೆ ನಡೆಸದೆ ಅರ್ಹತಾ ಪ್ರಮಾಣಪತ್ರ ನವೀಕರಿಸಲಾಗಿದೆ ಎಂದು ಆರೋಪಿಸಲಾಗಿದೆ.

ಎರಡೇ ದಿನಗಳಲ್ಲಿ 4,000ಕ್ಕೂ ಹೆಚ್ಚು ಹೊರರಾಜ್ಯದ ವಾಹನಗಳಿಗೆ ಎಫ್‌ಸಿ ನೀಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಒಂದೇ ಲಾಗಿನ್ ಬಳಸಿ ಹೆಚ್ಚಿನ ಸಂಖ್ಯೆಯ ವಾಹನಗಳಿಗೆ ಪ್ರಮಾಣಪತ್ರ ನೀಡಿರುವ ಕುರಿತು ಅನುಮಾನ ವ್ಯಕ್ತವಾಗಿದೆ. ಈ ಪ್ರಕರಣದಲ್ಲಿ ಒಟ್ಟು 13,600ಕ್ಕೂ ಹೆಚ್ಚು ವಾಹನಗಳಿಗೆ ನಿಯಮಬಾಹಿರವಾಗಿ ಎಫ್‌ಸಿ ನೀಡಿರುವ ಆರೋಪದ ಬಗ್ಗೆ ತನಿಖೆ ನಡೆಯಬೇಕಿದೆ.

ಈ ಅಕ್ರಮದ ಕುರಿತು ಲೋಕಾಯುಕ್ತದಲ್ಲಿ ದೂರು ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ. ಇದರ ಬೆನ್ನಲ್ಲೇ ಚಿಕ್ಕಮಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಕೇಶ್ ಕುಮಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್‌ 336(2), 336(3) ಮತ್ತು 340(2) ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಪ್ರಕರಣದಲ್ಲಿ ವಾಹನಗಳ ತಪಾಸಣೆ, ಎಫ್‌ಸಿ ನವೀಕರಣ ಮತ್ತು ಪ್ರಮಾಣಪತ್ರ ನೀಡುವ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆಯಾಗಿದೆಯೇ ಎಂಬುದನ್ನು ತನಿಖೆಯಿಂದ ಸ್ಪಷ್ಟಪಡಿಸಬೇಕಿದೆ.

FIR against Chikkamagaluru Motor Vehicle Inspector

Share

Leave a comment

Leave a Reply

Your email address will not be published. Required fields are marked *

Don't Miss

12 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಜಿಲ್ಲೆಯ 12 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಸಂಘಟನ್ ಸೃಜನ್ ಅಭಿಯಾನ–2 ಅಡಿ ಪ್ರಕ್ರಿಯೆ ಆರಂಭವಾಗಿದೆ. ಬ್ಲಾಕ್...

ಕಳಸದಲ್ಲಿ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ

ಕಳಸ : ಮನೆಯಂಗಳದಲ್ಲೇ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿ ಸ್ಥಳೀಯರನ್ನು ಬೆಚ್ಚಿಬೀಳಿಸಿದ ಘಟನೆ ಕಳಸ ತಾಲೂಕಿನ ಕಾರ್ಗದ್ದೆ ಗ್ರಾಮದಲ್ಲಿ ನಡೆದಿದೆ. ಸುಮಾರು 14 ಅಡಿ ಉದ್ದದ ಈ ಕಾಳಿಂಗ ಸರ್ಪವು ನಾಗರಹಾವನ್ನೇ...

Related Articles

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಚಿಕ್ಕಮಗಳೂರು: ಪೊಲೀಸ್ ಸಬ್-ಇನ್‌ಸ್ಪೆಕ್ಟರ್ ಹುದ್ದೆಯ ಕನಸು ಹೊತ್ತು ಕಠಿಣ ಅಭ್ಯಾಸದಲ್ಲಿ ತೊಡಗಿದ್ದ 24 ವರ್ಷದ ಯುವಕನೊಬ್ಬ...

ಮೂರು ಪ್ರತ್ಯೇಕ ಅಪಘಾತ ಪ್ರಕರಣ ದಾಖಲು; ಹಲವರಿಗೆ ಗಾಯ

ಚಿಕ್ಕಮಗಳೂರು: ಚಿಕ್ಕಮಗಳೂರು, ಲಿಂಗದಹಳ್ಳಿ ಹಾಗೂ ಯಗಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ರಸ್ತೆ...

ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ೧೫ ಸಾವಿರ ಮಾಸಿಕ ಗೌರವಧನ ನೀಡುವುದು ಸೇರಿದಂತೆ ವಿವಿಧ ನ್ಯಾಯಯುತ...

ಜಿಲ್ಲಾಧಿಕಾರಿಯಿಂದ ಮಳಲೂರು ಏತನೀರಾವರಿ ಸ್ಥಳ ಪರಿಶೀಲನೆ

ಚಿಕ್ಕಮಗಳೂರು:  ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ತಾಲೂಕಿನ ಮಳಲೂರು ಏತನೀರಾವರಿ ಯೋಜನೆಯ ಕಾಮಗಾರಿಗಳನ್ನು ಸಮಗ್ರವಾಗಿ ಪೂರ್ಣಗೊಳಿಸಲು...