Home Latest News ಶಾಸಕ ಟಿ.ಡಿ.ರಾಜೇಗೌಡ, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್‌
Latest NewschikamagalurHomenamma chikmagalur

ಶಾಸಕ ಟಿ.ಡಿ.ರಾಜೇಗೌಡ, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್‌

Share
Share

ಚಿಕ್ಕಮಗಳೂರು: ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಅವರ ಕುಟುಂಬದವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಇಲ್ಲಿನ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಕೊಪ್ಪ ನಿವಾಸಿ ದಿನೇಶ್ ಎಚ್.ಕೆ. ಸಲ್ಲಿಸಿದ್ದ ಖಾಸಗಿ ದೂರು ಆಧರಿಸಿ ಜನಪ್ರತಿನಿಧಿ ಗಳ ವಿಶೇಷ ನ್ಯಾಯಾಲಯ ನೀಡಿರುವ ಆದೇಶದಂತೆ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

‘ಟಿ.ಡಿ. ರಾಜೇಗೌಡ ಅವರು ಭ್ರಷ್ಟಾಚಾರ, ಅಧಿಕಾರ ದುರುಪಯೋಗ, ಸರ್ಕಾರಕ್ಕೆ ಮತ್ತು ಆದಾಯ ತೆರಿಗೆ ಇಲಾಖೆಗೆ ವಂಚನೆ ಮಾಡಿದ್ದಾರೆ. ಅವರ ವಿರುದ್ಧ ಸಮಗ್ರ ತನಿಖೆ ನಡೆಸಬೇಕು’ ಎಂದು ದಿನೇಶ್ ಎಚ್.ಕೆ. ದೂರಿನಲ್ಲಿ ಮನವಿ ಮಾಡಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಸೆ.16ರಂದು ಆದೇಶ ನೀಡಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಸೂಚಿಸಿತ್ತು.

‘ರಾಜೇಗೌಡ ಅವರ ಕುಟುಂಬ ಸದಸ್ಯರು ತಮ್ಮ ಆದಾಯ ಮೂಲಗಳಿಗೆ ತಾಳೆಯಾಗದಷ್ಟು ಆಸ್ತಿ ಸಂಪಾದಿಸಿದ್ದಾರೆ. ಅವರ ಪಾಲುದಾರಿಕೆ ಸಂಸ್ಥೆಯಾದ ಮೆ.ಶಬಾನಾ ರಂಜಾನ್‌ನ ವ್ಯವಹಾರಗಳು ಸಾಕ್ಷಿ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

1984ರಲ್ಲಿ ಸ್ಥಾಪಿತವಾದ ಈ ಸಂಸ್ಥೆಯಲ್ಲಿ ಪ್ರಾಥಮಿಕವಾಗಿ ಹಾಜಿ ಔರಂಗಜೇಬ್ ಮತ್ತು ಇತರರು ಪಾಲುದಾರರಾಗಿದ್ದರು. ನಂತರ 1992ರಲ್ಲಿ ಎಸ್.ವಿ. ಗಂಗಯ್ಯ ಹೆಗ್ಡೆ, ವಿ.ಜಿ. ಸಿದ್ಧಾರ್ಥ ಹಾಗೂ ಮಾಳವಿಕಾ ಹೆಗ್ಡೆ ಸಂಸ್ಥೆಗೆ ಪಾಲುದಾರರಾದರು. ಈ ಸಂಸ್ಥೆಯ ಮೂಲಕ ಅವರು 266 ಎಕರೆ ಕಾಫಿ ತೋಟ ಖರೀದಿಸಿದ್ದರು. 1993ರಲ್ಲಿ ಮೂಲ ಪಾಲುದಾರರು ಸಂಸ್ಥೆಯಿಂದ ಹಿಂದೆ ಸರಿದರು. ನಂತರ, ಕಂಪನಿಯು ತೋಟ ಅಡಮಾನವಿಟ್ಟು ಬ್ಯಾಂಕ್‌ಗಳಿಂದ ಸಾಲ ಪಡೆದುಕೊಂಡಿತ್ತು.

2019ರಲ್ಲಿ ಸಿದ್ಧಾರ್ಥ ಹಾಗೂ ಗಂಗಯ್ಯ ಹೆಗ್ಡೆ ಅವರ ಮರಣದ ನಂತರ, ಶಾಸಕ ರಾಜೇಗೌಡರ ಪತ್ನಿ ಡಿ.ಕೆ. ಪುಷ್ಪಾ ಅವರನ್ನು ಶೇ 48ರಷ್ಟು ಪಾಲುದಾರರನ್ನಾಗಿ ಸೇರಿಸಲಾಯಿತು. ಕೆಲವು ತಿಂಗಳ ನಂತರ ಶಾಸಕರ ಪುತ್ರ ರಾಜ್‌ದೇವ್ ಟಿ.ಆರ್. ಸಹ ಪಾಲುದಾರರಾದರು. ‌

‘ಸ್ಟ್ಯಾಂಡರ್ಡ್ ಚಾರ್ಟರ್ಡ್ ಬ್ಯಾಂಕ್‌ಗೆ ₹55.75 ಕೋಟಿ, ಬ್ಯಾಂಕ್ ಆಫ್ ಬರೋಡಾಗೆ ₹66 ಕೋಟಿ ಹಾಗೂ ಕರ್ನಾಟಕ ಬ್ಯಾಂಕ್‌ಗೆ ₹81.95 ಲಕ್ಷ ಪಾವತಿಸಲಾಗಿದೆ. ಆದರೆ, ಲೋಕಾಯುಕ್ತಕ್ಕೆ ರಾಜೇಗೌಡರು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ವಾರ್ಷಿಕ ಆದಾಯ ಕೇವಲ ₹40 ಲಕ್ಷ ಎಂದು ಘೋಷಿಸಿದ್ದಾರೆ’ ಎಂಬುದು ದೂರುದಾರರ ವಾದ.

ಈ ದಾಖಲೆಗಳನ್ನು ಲೋಕಾಯುಕ್ತರಿಗೆ ಸಲ್ಲಿಸಿದ್ದ ದಿನೇಶ್ ಅವರು, ತನಿಖೆ ನಡೆಸುವಂತೆ ಈ ಹಿಂದೆಯೇ ದೂರು ಸಲ್ಲಿಸಿದ್ದರು. ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಆರೋಪ ಗಳು ನಿರಾಧಾರ ಎಂದು 2023ರಲ್ಲಿ ವರದಿ ನೀಡಿದ್ದರು. ದೂರುದಾರರು ಇದನ್ನು ಪ್ರಶ್ನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು.

FIR against MLA TD Rajegowda wife, son

Share

Leave a comment

Leave a Reply

Your email address will not be published. Required fields are marked *

Don't Miss

ದೊಣ್ಣೆಯಿಂದ ಹಲ್ಲೆಯಾದ ಭಿಕ್ಷುಕನ ಸಾವು

ತರೀಕೆರೆ: ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಸುಮಾರು 65 ವರ್ಷದ ವ್ಯಕ್ತಿಯೊಬ್ಬರನ್ನು ದೊಣ್ಣೆಯಿಂದ ಹೊಡೆದು, ಕಾಲಿನಿಂದ ತುಳಿದು ಕೊಲೆ ಮಾಡಿರುವ ಆರೋಪದಡಿ ದಂಪತಿ ವಿರುದ್ಧ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

Related Articles

ಕೆರೆಗೆ ಈಜಲು ತೆರಳಿದ್ದ ಮೂವರು ಬಾಲಕರ ಸಾವು

ಚಿಕ್ಕಮಗಳೂರು: ಶಾಲೆಗೆ ರಜೆ ಇದ್ದ ಕಾರಣ ಈಜಲು ಕೆರೆಗೆ ತೆರಳಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿ...

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...