Home namma chikmagalur chikamagalur ಡಿ.ಎನ್. ಜೀವರಾಜ್ ಸೇರಿದಂತೆ ಮೂವರ ವಿರುದ್ಧ ಎಫ್.ಐ.ಆರ್
chikamagalurHomeLatest Newsnamma chikmagalur

ಡಿ.ಎನ್. ಜೀವರಾಜ್ ಸೇರಿದಂತೆ ಮೂವರ ವಿರುದ್ಧ ಎಫ್.ಐ.ಆರ್

Share
Share

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಮೂವರ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್, ಅಂದಿನ ಚುನಾವಣಾಧಿಕಾರಿ ವೇದಾಮೂರ್ತಿ ಮತ್ತು ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾ‌ರ್ ಅವರ ಮೇಲೆ ಎಫ್‌ಐಆರ್ ದಾಖಲಿಸುವ ಮೂಲಕ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಅಂಚೆ ಮತ ಎಣಿಕೆ ಟೇಬಲ್ ಏಜೆಂಟ್ ಆಗಿದ್ದ ಸುಧೀರ್ ಕುಮಾರ್ ಮುರೋಳಿ ಅವರು ನೀಡಿದ ದೂರಿನ ಅನ್ವಯ ಈ ಕ್ರಮ ಜರುಗಿಸಲಾಗಿದೆ. ಮತಪತ್ರಗಳನ್ನು ಇರಿಸಲಾಗಿದ್ದ ಸ್ಟ್ರಾಂಗ್ ರೂಂ ಸೀಲ್ ಆಗಿರಲಿಲ್ಲ ಮತ್ತು ಟ್ರಂಕ್‌ಗಳ ಲಾಕ್ ಕಟ್ ಆಗಿತ್ತು ಎಂದು ದೂರುದಾರರು ಗಂಭೀರ ಆರೋಪ ಮಾಡಿದ್ದಾರೆ.

ಮತ ಪತ್ರಗಳನ್ನು ಟ್ಯಾಂಪರಿಂಗ್ ಮಾಡಲಾಗಿದೆ ಎಂಬ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ವಂಚನೆ, ಕ್ರಿಮಿನಲ್‌ ಪಿತೂರಿ ಹಾಗೂ ಫೋರ್ಜರಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಈ ಪ್ರಕರಣದಲ್ಲಿ ಅಂದಿನ ಚುನಾವಣಾಧಿಕಾರಿ ವೇದಾಮೂರ್ತಿ ಅವರನ್ನು ಮೊದಲ ಆರೋಪಿ (A1), ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರನ್ನು ಎರಡನೇ ಆರೋಪಿ (A2) ಮತ್ತು ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾರ್ ಅವರನ್ನು ಮೂರನೇ ಆರೋಪಿಯನ್ನಾಗಿ (A3) ಹೆಸರಿಸಲಾಗಿದೆ.

FIR against three people including D.N. Jeevaraj

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...