Home Crime News ಸಿ.ಟಿ ರವಿ ಸ್ವಾಗತ ವೇಳೆ ಆಂಬುಲೆನ್ಸ್ ದುರ್ಬಳಕೆ : ಎಫ್ಐಆರ್‌ ದಾಖಲು
Crime News

ಸಿ.ಟಿ ರವಿ ಸ್ವಾಗತ ವೇಳೆ ಆಂಬುಲೆನ್ಸ್ ದುರ್ಬಳಕೆ : ಎಫ್ಐಆರ್‌ ದಾಖಲು

Share
Share

ಚಿಕ್ಕಮಗಳೂರು : ಕಳೆದ ರಾತ್ರಿ ಸಿ.ಟಿ ರವಿ ಚಿಕ್ಕಮಗಳೂರು ನಗರಕ್ಕೆ ಆಗಮಿಸಿದ ವೇಳೆ ಅದ್ದೂರಿ ಸ್ವಾಗತ ಮಾಡಿದ ಕಾರ್ಯಕರ್ತರು ಯಡವಟ್ಟು ಮಾಡಿಕೊಂಡಿದ್ದಾರೆ ಮೆರವಣಿಗೆ ವೇಳೆ ಆಂಬುಲೆನ್ಸ್ ಗಳ ದುರ್ಬಳಕೆ ಮಾಡಿದ ಪರಿಣಾಮಕೃಷ್ಣ ಗ್ರೂಪ್ ನ 7 ಆಂಬುಲೆನ್ಸ್ ಗಳ ಚಾಲಕರು ಮಾಲೀಕರು ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ

ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಕಳೆದ ರಾತ್ರಿ ಚಿಕ್ಕಮಗಳೂರು ನಗರದಲ್ಲಿ ನಡೆದಿದ್ದ ಭರ್ಜರಿ ಮೆರವಣಿಗೆ ವೇಳೆ ಈ ಅಚಾತುರ್ಯ ನಡೆದಿದೆ. ಮೆರವಣಿಗೆ ಸಾಗಿ ಬರುತ್ತಿದ್ದ ಮಾರ್ಗದಲ್ಲಿ ಆಂಬುಲೆನ್ಸ್ ಗಳ ಟಾಪ್ ಲೈಟ್ ಆನ್ ಮಾಡಿ ಸಂಚಾರ ನಿಯಮ ಉಲ್ಲಂಘನೆ ಮಾಡಲಾಗಿದೆ. ಆಂಬುಲೆನ್ಸ್ ನಲ್ಲಿ
ರೋಗಿಗಳಿಲ್ಲದಿದ್ದರೂ ಕರ್ಕಶ ಹಾರ್ನ್ ಹಾಕಿ ಜನರಿಗೆ ಭೀತಿ ಹುಟ್ಟಿಸಿದ ಆರೋಪ ಇದೀಗ ಕೇಳಿ ಬಂದಿದೆ. ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದು ಮೋಟಾರು ವಾಹನ ಕಾಯ್ದೆ ಉಲ್ಲಂಘನೆ ಸಾರ್ವಜನಿಕರಿಗೆ ಭಯ ಹುಟ್ಟಿಸಿದ ಆರೋಪ ಇದೀಗ ಆಂಬುಲೆನ್ಸ್ ಗಳ ಮೇಲೆ ದಾಖಲಾಗಿದೆ. ಸಿ.ಟಿ ರವಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡವರಿಗೆ ಸೇರಿದ ಕೃಷ್ಣ ಆಂಬುಲೆನ್ಸ್ ಮಾಲೀಕ ಬಿಜೆಪಿ ಮುಖಂಡ ಎಂದು ತಿಳಿದು ಬಂದಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...