Home namma chikmagalur chikamagalur ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು
chikamagalurCrime NewsHomeLatest Newsnamma chikmagalur

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

Share
Share

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಲ್ಲೂರು ಪೊಲೀಸರು ಕೊನೆಗೂ ಎಫ್‌ಐಆರ್ (FIR) ದಾಖಲಿಸಿದ್ದಾರೆ.

ಮಾರ್ಚ್ 15ರಂದು ಆತ್ಮಹತ್ಯೆ ಮಾಡಿಕೊಂಡಿದ್ದ ರಮೇಶ್ ಅವರು ಬರೆದಿಟ್ಟಿದ್ದ ಡೆತ್ ನೋಟ್ ಆಧಾರದ ಮೇಲೆ ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಚುರುಕುಗೊಂಡಿದೆ.

ಅಣೂರು ಗ್ರಾಮ ಪಂಚಾಯಿತಿಯ ಪಿಡಿಒ (PDO), ಮಾಜಿ ಅಧ್ಯಕ್ಷ ಹಾಗೂ ನಾಲ್ವರು ಸದಸ್ಯರು ಸೇರಿದಂತೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಹೆಸರನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ತಮಗೆ ಕಳೆದ 11 ತಿಂಗಳಿಂದ ಸಂಬಳ ನೀಡಿಲ್ಲ ಮತ್ತು ಪಂಚಾಯಿತಿಯ ಮಾಜಿ ಅಧ್ಯಕ್ಷ ದಿನೇಶ್ ಸೇರಿದಂತೆ ಸತೀಶ್, ಜಗದೀಶ್, ಪ್ರವೀಣ್ ಹಾಗೂ ಭಾಸ್ಕರ್ ಎಂಬುವವರು ಕೆಲಸ ಮಾಡುವಾಗ ತೀವ್ರ ಕಿರುಕುಳ ನೀಡುತ್ತಿದ್ದರು ಎಂದು ರಮೇಶ್ ತಮ್ಮ ಡೆತ್ ನೋಟ್‌ನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

ಸಂಬಳ ಬಾರದ ಕಾರಣ ಮೈಕ್ರೋ ಫೈನಾನ್ಸ್ ಸಾಲ ಮರುಪಾವತಿ ಮಾಡಲು ಸಾಧ್ಯವಾಗದಿದ್ದಾಗ, ಆರ್.ಬಿ.ಎಲ್.ಎಸ್.ಕೆ.ಎಸ್ RBLSKS) ಮತ್ತು ಮುತ್ತೂಟ್ ಫೈನಾನ್ಸ್ ಸಿಬ್ಬಂದಿಗಳು ಮನೆಗೆ ಬಂದು ಕಿರುಕುಳ ನೀಡುತ್ತಿದ್ದರು ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.

( ಆರಂಭದಲ್ಲಿ ಪೊಲೀಸರು ಇದನ್ನು ಕೇವಲ ಯುಡಿಆ‌ರ್ (UDR ಅಸಹಜ ಸಾವು) ಪ್ರಕರಣ ಎಂದು ದಾಖಲಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಪಂಚಾಯತ್ ರಾಜ್ ಆಯುಕ್ತರಾದ ಅರುಂಧತಿ ಚಂದ್ರಶೇಖರ್ ಅವರು ಮಾಧ್ಯಮ ಪ್ರಕಟಣೆ ನೀಡಿ, 11 ತಿಂಗಳ ಸಂಬಳ ಬಾಕಿ ಇರುವ ಬಗ್ಗೆ ಡೆತ್ ನೋಟ್‌ನಲ್ಲಿ ಉಲ್ಲೇಖವಾಗಿಲ್ಲ ಮತ್ತು ಸಂಬಳ ನೀಡಲಾಗಿದೆ ಎಂದು ತಿಳಿಸಿದ್ದರು.

ಜಿಲ್ಲಾ ಪಂಚಾಯಿತಿ ಸಿಬ್ಬಂದಿಗಳು ಸಹ ಹಿರಿಯ ಅಧಿಕಾರಿಗಳಿಗೆ ಡೆತ್ ನೋಟ್ ಬಗ್ಗೆ ಪೂರ್ಣ ಮಾಹಿತಿ ನೀಡದೆ ದಾರಿ ತಪ್ಪಿಸಲು ಯತ್ನಿಸಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಸದ್ಯ ಭಾರತೀಯ ನ್ಯಾಯ ಸಂಹಿತೆ (BNS) ಅಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

FIR registered in Neeruganti suicide case

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....