Home namma chikmagalur ಶಾರ್ಟ್ ಸರ್ಕ್ಯೂಟ್‌ ಗೆ ರಾಮ್‌ದೇವ್ ಎಲೆಕ್ಟ್ರಾನಿಕ್ ಅಂಗಡಿಗೆ ಬೆಂಕಿ
namma chikmagalurchikamagalurHomeLatest News

ಶಾರ್ಟ್ ಸರ್ಕ್ಯೂಟ್‌ ಗೆ ರಾಮ್‌ದೇವ್ ಎಲೆಕ್ಟ್ರಾನಿಕ್ ಅಂಗಡಿಗೆ ಬೆಂಕಿ

Share
Share

ತರೀಕೆರೆ: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ರಾಮ್‌ದೇವ್ ಎಲೆಕ್ಟ್ರಾನಿಕ್ ಹಾಗೂ ಹಾರ್ಡ್‌ವೇರ್ ಅಂಗಡಿ ಬೆಂಕಿಗಾಹುತಿಯಾಗಿದೆ. ಈ ದುರ್ಘಟನೆಯಲ್ಲಿ ಸುಮಾರು ೫೦ ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ನಾಶವಾಗಿವೆ ಎಂದು ಅಂದಾಜಿಸಲಾಗಿದೆ.

ಪಟ್ಟಣದ ಬಿ.ಹೆಚ್. ರಸ್ತೆಯಲ್ಲಿರುವ ಈ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಲೇ ಅಂಗಡಿಯಲ್ಲಿದ್ದ ಎಲೆಕ್ಟ್ರಾನಿಕ್ ಮತ್ತು ಹಾರ್ಡ್‌ವೇರ್ ವಸ್ತುಗಳು ಧಗಧಗಿಸಿ ಉರಿಯತೊಡಗಿದವು. ಸ್ಥಳೀಯರು ಬೆಂಕಿಯನ್ನು ಗಮನಿಸಿ ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಲವು ಗಂಟೆಗಳ ಕಾಲ ಶ್ರಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು. ಈ ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವಾದರೂ, ಅಂಗಡಿ ಮಾಲೀಕರಿಗೆ ಭಾರಿ ಆರ್ಥಿಕ ನಷ್ಟ ಉಂಟಾಗಿದೆ.

ಇತ್ತೀಚಿನ ದಿನಗಳಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಂಗಡಿಗಳು ಹಾಗೂ ಮನೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Fire breaks out at Ramdev’s electronics shop due to short circuit

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...