Home namma chikmagalur chikamagalur ಅಜ್ಜಂಪುರದಲ್ಲಿ ತಡರಾತ್ರಿ ಅಂಗಡಿಗಳಿಗೆ ಬೆಂಕಿ – ಅಪಾರ ನಷ್ಟ
chikamagalurCrime NewsHomeLatest Newsnamma chikmagalur

ಅಜ್ಜಂಪುರದಲ್ಲಿ ತಡರಾತ್ರಿ ಅಂಗಡಿಗಳಿಗೆ ಬೆಂಕಿ – ಅಪಾರ ನಷ್ಟ

Share
Share

ಅಜ್ಜಂಪುರ : ಪಟ್ಟಣದ ಗಾಂಧಿ ಸರ್ಕಲ್ ಸಮೀಪದ ಬೀರೂರು ರಸ್ತೆಯಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಎರಡು ಅಂಗಡಿಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ.

ಮೆಕಾನಿಕ್ ಆನಂದ ಅವರ ವರ್ಕ್‌ಶಾಪ್ ಹಾಗೂ ಪಕ್ಕದಲ್ಲಿದ್ದ ಚಪ್ಪಲಿ ಗೂಡಂಗಡಿ ಅಂಗಡಿಗೆ ಬೆಂಕಿ ತಗುಲಿ, ಅಂಗಡಿಗಳಲ್ಲಿದ್ದ ಸಾಮಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನೆಯ ಪರಿಣಾಮವಾಗಿ ವ್ಯಾಪಾರಿಗಳಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ, ಶಾರ್ಟ್ ಸರ್ಕ್ಯೂಟ್ ಅಥವಾ ಇತರೆ ಕಾರಣಗಳ ಬಗ್ಗೆ ತನಿಖೆ ನಡೆಯುತ್ತಿದೆ.

ಈ ಘಟನೆ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದ್ದು, ಹೆಚ್ಚಿನ ನಷ್ಟ ತಪ್ಪಿಸಲು ಸಮಯಕ್ಕೆ ಸರಿಯಾಗಿ ಅಗ್ನಿಶಾಮಕ ದಳ ಸ್ಪಂದಿಸಿದುದು ಗಮನಾರ್ಹವಾಗಿದೆ.

Fire breaks out at shops in Ajjampura late at night – huge loss

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...