Home namma chikmagalur chikamagalur ಮರದ ದಾಸ್ತಾನು ಮಾಡಿದ್ದ ಅಂಗಡಿಗೆ ಬೆಂಕಿ
chikamagalurCrime NewsHomeLatest Newsnamma chikmagalur

ಮರದ ದಾಸ್ತಾನು ಮಾಡಿದ್ದ ಅಂಗಡಿಗೆ ಬೆಂಕಿ

Share
Share

ಚಿಕ್ಕಮಗಳೂರು: ಮರದ ದಾಸ್ತಾನು ಮಾಡಿದ್ದ ಅಂಗಡಿಯೊಂದರಲ್ಲಿ ಬುಧವಾರ ಮಧ್ಯರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಮರಮುಟ್ಟುಗಳು ಅಗ್ನಿಗೆ ಆಹುತಿಯಾಗಿರುವ ಘಟನೆ ನಗರದ ಹೃದಯಭಾಗದಲ್ಲಿರುವ ಅಂಬೇಡ್ಕ‌ರ್ ರಸ್ತೆಯಲ್ಲಿ ಬುಧವಾರ ರಾತ್ರಿ ಸುಮಾರು ಎರಡು ಗಂಟೆಯ ವೇಳೆಗೆ ಹೊತ್ತಿದ ಬೆಂಕಿ ಕೆಲವೇ ಕ್ಷಣಗಳಲ್ಲಿ ಇಡೀ ಮಳಿಗೆಯನ್ನು ಆವರಿಸಿಕೊಂಡಿದ್ದು, ಮರದ ಸಾಮಾನುಗಳು ಧಗಧಗನೆ ಹೊತ್ತಿ ಉರಿದಿವೆ.

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ನಾಲ್ಕು ವಾಹನಗಳ ಸಹಾಯದೊಂದಿಗೆ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಬೆಂಕಿಯ ತೀವ್ರತೆ ಎಷ್ಟಿತ್ತೆಂದರೆ ವಾಹನಗಳಲ್ಲಿದ್ದ ನೀರು ಸಾಕಾಗದೆ ಸಿಬ್ಬಂದಿಗಳು ಮತ್ತೆ ಕಚೇರಿಗೆ ತೆರಳಿ ನೀರು ತುಂಬಿಸಿಕೊಂಡು ಬಂದು ಕಾರ್ಯಾಚರಣೆ ಮುಂದುವರಿಸಬೇಕಾಯಿತು.

ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯ ಸಾರ್ವಜನಿಕರ ಸತತ ಶ್ರಮದ ಫಲವಾಗಿ ಬೆಳಗಿನ ಜಾವದ ಹೊತ್ತಿಗೆ ಬೆಂಕಿಯನ್ನು ಸಂಪೂರ್ಣವಾಗಿ ಆರಿಸಲು ಯಶಸ್ವಿಯಾಗಿದ್ದಾರೆ.

ಈ ಭೀಕರ ಅವಘಡದಲ್ಲಿ ಮಳಿಗೆಯಲ್ಲಿದ್ದ ಬೆಲೆಬಾಳುವ ಮರಗಳು ಹಾಗೂ ತಯಾರಾದ ಪೀಠೋಪಕರಣಗಳು ಸುಟ್ಟು ಕರಕಲಾಗಿದ್ದು, ಮಾಲೀಕರಿಗೆ ಭಾರಿ ನಷ್ಟ ಸಂಭವಿಸಿದೆ. ಅದೃಷ್ಟವಶಾತ್ ಬೆಂಕಿ ಅಕ್ಕಪಕ್ಕದ ಕಟ್ಟಡಗಳಿಗೆ ಹರಡುವುದು ತಪ್ಪಿದ್ದರಿಂದ ದೊಡ್ಡ ಮಟ್ಟದ ದುರಂತವೊಂದು ತಪ್ಪಿದಂತಾಗಿದೆ.

ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲವಾಗಿದ್ದು, ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Fire breaks out at wood storage shop

Share

Leave a comment

Leave a Reply

Your email address will not be published. Required fields are marked *

Don't Miss

ಪ್ರಚೋದಕಾರಿ ಹೇಳಿಕೆ ನೀಡಿದ ಎಐಸಿಸಿ ಅಧ್ಯಕ್ಷರ ಬಂಧನಕ್ಕೆ ಮನವಿ

ಚಿಕ್ಕಮಗಳೂರು: ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಂಘಟನೆ ಬಗ್ಗೆ ಪ್ರಚೋದಕಾರಿ ಹೇಳಿಕೆ ನೀಡಿರುವ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಕಾನೂನು ಕ್ರಮ ಕೈಗೊಂಡು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡರುಗಳು...

ಕೃತಕಬುದ್ದಿ ಮತ್ತೆ ಮನುಷ್ಯನಿಗೆ ದೊಡ್ಡ ಸವಾಲಾಗಿದೆ

ಚಿಕ್ಕಮಗಳೂರು: ಆಧುನಿಕ ಜೀವನ ಪದ್ಧತಿಯಲ್ಲಿ ಕೃತಕಬುದ್ದಿ ಮತ್ತೆ ಮನುಷ್ಯನಿಗೆ ದೊ ಡ್ಡ ಸವಾಲಾಗಿ ಪರಿಣಾಮಿಸಿದೆ. ಪ್ರಸ್ತುತ ಕಾಲಕ್ಕೆ ಬೇಡವಾದರೂ, ಜನಿಸಿದ ನಂತರ ಅನುಸರಿಸಿಕೊಂಡು ಸೂ ಕ್ತ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು ಎಂದು ಶ್ರೀ...

Related Articles

ಮಿಥುನ್ ವಿರುದ್ಧ ಸಮಗ್ರ ತನಿಖೆ ಆಗ್ರಹ

ಚಿಕ್ಕಮಗಳೂರು : ಔಷಧ ಖರೀದಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಎಂದು ಹೇಳಿಕೊಂಡು ಸ್ಥಳೀಯ ಮೆಡಿಕಲ್...

ಜಿಲ್ಲಾ ಆಸ್ಪತ್ರೆ ರಾಷ್ಟ್ರೀಯ ವಾಹಕ ಆಶ್ರಿತ ರೋಗಗಳ ನಿಯಂತ್ರಣ ಸಮಿತಿ ಭೇಟಿ

ಚಿಕ್ಕಮಗಳೂರು:  ಕೇಂದ್ರ ಸರ್ಕಾರದ ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಡಿ ಅನುಷ್ಠಾನಗೊಳಿಸಲಾಗುತ್ತಿರುವ ವಾಹಕ ಆಶ್ರಿತ ರೋಗಗಳ ನಿರ್ಮೂಲನಾ...

ಚಿಕ್ಕಮಗಳೂರು ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆ ಇಲಾಖೆಯು ಚಿಕ್ಕಮಗಳೂರು ಮತ್ತು ಯಶವಂತಪುರ ನಡುವೆ ಸಂಚರಿಸುವ ರೈಲುಗಳ ವೇಳಾಪಟ್ಟಿಯಲ್ಲಿ ಮಹತ್ವದ...

ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿ ದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಭದ್ರಾ ಅಭಯಾರಣ್ಯದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ದೈತ್ಯಾಕಾರದ ಹುಲಿಯೊಂದು ದರ್ಶನ ನೀಡುವ ಮೂಲಕ...