ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ ವಲಯದ ಮಾಣಿಕ್ಯಬೆಟ್ಡ, ವಾಲೀಕುಂಜಗಿರಿ ಸಾಲಿನ 25ಕ್ಕೂ ಹೆಚ್ಚು ಕಡೆಗಳಲ್ಲಿ ಬೆಂಕಿ (Wildfire) ಕಾಣಿಸಿಕೊಂಡಿದೆ.
ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಬಿದ್ದಿರುವುದರಿಂದ ನೆಲದಲ್ಲಿ ಗೂಡುಕಟ್ಟುವ ಪಕ್ಷಿಗಳು, ಪ್ರಾಣಿಗಳು, ಅಪರೂಪದ ಸಸ್ಯಸಂಪತ್ತು ಸುಟ್ಟು ಹೋಗಿವೆ. ಈ ಅವಘಡಕ್ಕೆ ಅರಣ್ಯ ಇಲಾಖೆಯ ನಿರ್ಲಕ್ಷ್ಯ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
Leave a comment