Home namma chikmagalur chikamagalur ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು
chikamagalurCrime NewsHomeLatest Newsnamma chikmagalur

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

Share
Share

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ ಘಟನೆ ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಳದಾಳ್ ಪಾಳ್ಯದಲ್ಲಿ ನಡೆದಿದೆ.

ತ್ಯಾಗರಾಜ್ ಗೌಡ ಎಂಬುವವರ ಮಾಲೀಕತ್ವದ ಬಿಲ್ಲೇಶ್ವರ ಕಾಫಿ ತೋಟದಲ್ಲಿ ಮರಗಸಿ (ಕೊಂಬೆ ಕಡಿಯುವ) ಕೆಲಸ ಮಾಡುತ್ತಿದ್ದ ತಮಿಳುನಾಡು ಮೂಲದ ಚಿನ್ನರಾಜು ಎಂಬುವವರು ಮರದಿಂದ ಬಿದ್ದು ಮೃತಪಟ್ಟಿದ್ದಾರೆ.

ಕಳೆದ 25 ದಿನಗಳಿಂದ ಈ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು, ಘಟನೆ ನಡೆದ ದಿನದಂದು ತಮಗೆ ಸುರಕ್ಷತಾ ಪರಿಕರಗಳಾದ ಹೆಲೈಟ್. ಗ್ರಿಪ್ಪರ್, ಸೊಂಟಕ್ಕೆ ಕಟ್ಟುವ ಹಗ್ಗ ಮತ್ತು ಏಣಿಯನ್ನು ನೀಡುವಂತೆ ಮಾಲೀಕರು ಹಾಗೂ ಮೇಸ್ತ್ರಿ ಪರುವತನ್ ಅವರಿಗೆ ಮನವಿ ಮಾಡಿದ್ದರು. ಆದರೆ, ಯಾವುದೂ ಆಗುವುದಿಲ್ಲ ಎಂದು ನಿರ್ಲಕ್ಷ್ಯ ತೋರಿದ ಮಾಲೀಕರು ಬಲವಂತವಾಗಿ ಮರ ಹತ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಗರ್ಗೆ ಮರವನ್ನೇರಿ ಕೊಂಬೆ ಕಡಿಯುತ್ತಿದ್ದಾಗ ಆಕಸ್ಮಿಕವಾಗಿ ಕೊಂಬೆ ಮುರಿದು ಚಿನ್ನರಾಜು ಅವರು ಕೆಳಕ್ಕೆ ಬಿದ್ದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಚಿಕ್ಕಮಗಳೂರಿನ ಎಂ.ಜಿ. ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಮೃತರ ಮಗ ಅಜಿತ್ ಕುಮಾರ್ ನೀಡಿದ ದೂರಿನ ಮೇರೆಗೆ ತೋಟದ ಮಾಲೀಕರು, ರೈಟರ್ ಮತ್ತು ಮೇಸ್ತ್ರಿ ವಿರುದ್ಧ ಮಲ್ಲಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Fire in coffee plantation – death of worker

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಎಮ್ಮೆದೊಡ್ಡಿ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ವೃದ್ಧನ ಸಾವು

ಕಡೂರು: ತಾಲ್ಲೂಕಿನ ಎಮ್ಮೆದೊಡ್ಡಿ ರಸ್ತೆಯ ಕರಿಯಮ್ಮ ದೇವಸ್ಥಾನದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವೃದ್ಧರೊಬ್ಬರು ಮೃತಪಟ್ಟ...