Home namma chikmagalur chikamagalur ಚಾರ್ಮಾಡಿ ಘಾಟಿಯ ಅರಣ್ಯ ಪ್ರದೇಶದಲ್ಲಿ ಬೆಂಕಿ
chikamagalurHomeLatest Newsnamma chikmagalur

ಚಾರ್ಮಾಡಿ ಘಾಟಿಯ ಅರಣ್ಯ ಪ್ರದೇಶದಲ್ಲಿ ಬೆಂಕಿ

Share
Share

ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಮೂಡಿಗೆರೆ ಅರಣ್ಯ ವಿಭಾಗದ ಬಿದ್ರುತಳ ಭಾಗದಲ್ಲಿ ರವಿವಾರ ರಾತ್ರಿ ಅರಣ್ಯ ಅಗ್ನಿ ಅವಘಡ ಸಂಭವಿಸಿದೆ.

ರಸ್ತೆಯಿಂದ ಸುಮಾರು ಒಂದುರಿಂದ ಎರಡು ಕಿಲೋಮೀಟರ್ ದೂರದ ದಟ್ಟ ಅರಣ್ಯ ಪ್ರದೇಶದಲ್ಲಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಅರಣ್ಯದಲ್ಲಿ ಹೊತ್ತಿಕೊಂಡ ಅಗ್ನಿಯ ಜ್ವಾಲೆಗಳು ದೂರದಿಂದಲೇ ಕಾಣಿಸಿಕೊಂಡಿದ್ದು, ಇದರಿಂದಾಗಿ ಪ್ರದೇಶದಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬೆಂಕಿ ಉಂಟಾಗಲು ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ.

ಘಟನೆಯ ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಅರಣ್ಯ ಸಂಪತ್ತು ಹಾಗೂ ವನ್ಯಜೀವಿಗಳಿಗೆ ಹಾನಿಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅಗ್ನಿ ನಂದಿಸುವ ಸಲುವಾಗಿ ಅಗ್ನಿಶಾಮಕ ದಳವನ್ನು ಕರೆಸಿ ತುರ್ತು ಕಾರ್ಯಾಚರಣೆ ಕೈಗೊಳ್ಳಲಾಗಿದೆ.

Fire in the forest area of ​​Charmadi Ghat

Share

Leave a comment

Leave a Reply

Your email address will not be published. Required fields are marked *

Don't Miss

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕು ತಿದ್ದುವ ಚಿಕಿತ್ಸಕ ಶಕ್ತಿಗಳು

ಚಿಕ್ಕಮಗಳೂರು: ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿಯಾಗಿವೆ ಎಂದು ಭಾರತ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ...

ರಸ್ತೆ ಅಪಘಾತದಲ್ಲಿ ಬೈಕ್ ಸಾವಾರನ ಸಾವು

ಎನ್. ಆರ್ ಪುರ: ಬಾಳೆಹೊನ್ನೂರು ಸಮೀಪದ ಮಸೀದಿಕೆರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೃತರನ್ನು 21 ವರ್ಷದ ಗೋಕುಲ್ ಎಂದು...

Related Articles

ನಯನ ಔಟ್ -ಇಕ್ಕಟ್ಟಿನಲ್ಲಿ ತಮ್ಮಯ್ಯ ? ರಾಜೇಗೌಡ-ಆನಂದ್ ಸೇಫ್-ಶ್ರೀನಿವಾಸ್ ಗೆ ತ್ರೀ ಶಂಕು ಸ್ಥಿತಿ ?

ಚಿಕ್ಕಮಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಮೂರು ಬಣವಾಗಿರುವುದು ಸ್ಪಷ್ಟವಾಗಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಬಣ ,ಇನ್ನೊಂದು...

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಕಾಡಾನೆಗಳು ಚಿಕ್ಕಮಗಳೂರು ನಗರದಿಂದ ಕೇವಲ 5 ಕಿಮೀ ದೂರದ...

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ...

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ...