ತರೀಕೆರೆ: ತಾಲೂಕಿನ ಎಂ.ಸಿ.ಹಳ್ಳಿಯ ಶ್ರೀ ಲಕ್ಷ್ಮಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು 17ರ ವಯೋಮಾನದ ಜಿಲ್ಲಾಮಟ್ಟದ ಗುಂಪು ಆಟಗಳ ಕ್ರೀಡಾಕೂಟದಲ್ಲಿ ಥ್ರೋಬಾಲ್‌ನಲ್ಲಿ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ 17ರ ವಯೋಮಾನದ ಬಾಲಕಿಯರ ಗುಂಪು ಆಟಗಳ ಜಿಲ್ಲಾಮಟ್ಟದ ಕ್ರೀಡಾಕೂಟವು ಅ.3ರಂದು ಕಡೂರಿನ ಬಿಜಿಎಸ್ ಹೆರಿಟೇಜ್ ಶಾಲೆಯಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಎಂ.ಸಿ.ಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಅತ್ಯುತ್ತಮ ಪ್ರದರ್ಶನ ನೀಡಿ ಥ್ರೋಬಾಲ್‌ನಲ್ಲಿ ಪ್ರಥಮ ಸ್ಥಾನ ಗಳಿಸಿದರು. ಈ ಮೂಲಕ ಸತತವಾಗಿ ನಾಲ್ಕನೇ ಬಾರಿಗೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ.
ತಂಡದ ಸಾಧಕ ವಿದ್ಯಾರ್ಥಿನಿಯರಾದ ಷಂಷಾದ್, ಅನುಶ್ರೀ, ಆತ್ಮೀಕ, ಭೂಮಿಕಾ, ಭೂಮಿಕಾ ಎನ್., ಅರ್ಪಿತಾ ಲಕ್ಷ್ಮೀ, ಅಭಿನಯ, ಪ್ರಿಯಾಂಕ, ಯಶಸ್ವಿನಿ, ಪುಷ್ಪಾ ಮತ್ತು ಮಧುರ ಅವರನ್ನು ಶಾಲಾ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.
ವಿದ್ಯಾರ್ಥಿನಿಯರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಬಿ.ಪಿ. ಕುಮಾರಸ್ವಾಮಿ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರು, ಹಾಗೂ ಜಿ.ಎಚ್.ಎಸ್. ಹಳಿಯೂರಿನ ದೈಹಿಕ ಶಿಕ್ಷಕರಾದ ಜಿ. ಪರಮೇಶ್ವರಪ್ಪ ತರಬೇತಿ ನೀಡಿದ್ದಾರೆ.
ವಿದ್ಯಾರ್ಥಿನಿಯರ ಸಾಧನೆಯನ್ನು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಹೇಶ್ ಜಿ., ದೈಹಿಕ ಶಿಕ್ಷಣ ಪರಿವೀಕ್ಷಕರಾದ ಪ್ರಸಾದ್ ಆರ್.ಕೆ., ಎಸ್‌ಡಿಎಂಸಿ ಅಧ್ಯಕ್ಷ ಮಹಿನುದ್ದೀನ್, ಸದಸ್ಯರಾದ ಧನಂಜಯ, ಏಳುಮಲೆ, ಕಾರ್ತಿಕ್, ಸುಶೀಲಮ್ಮ, ರಾಮಚಂದ್ರ, ಕುಮಾರ್ ಸೇರಿದಂತೆ ಹಲವರು ಅಭಿನಂದಿಸಿದ್ದಾರೆ.
ಶಾಲಾ ಸ್ಥಾಪನಾ ಸಮಿತಿ ಅಧ್ಯಕ್ಷ ರಾಮೇಗೌಡ ಎನ್., ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ಮಾಜಿ ಸದಸ್ಯರು, ಎಂ.ಸಿ.ಹಳ್ಳಿ ಗ್ರಾಮ ಪಂಚಾಯಿತಿ, ಶಾಲೆಯ ಮುಖ್ಯ ಶಿಕ್ಷಕಿ ಬಿ.ಎಂ. ವೀಣಾಬಾಯಿ, ಸಹ ಶಿಕ್ಷಕರಾದ ಅಶೋಕ್ ಕುಮಾರ್, ಅನಿತಾ, ಮೂಡಲಗಿರಿಯಪ್ಪ, ಸುರೇಶ್, ರಾಜಶೇಖರ್, ಸೌಮ್ಯ, ನಂದಿನಿ, ಮುಕುಂದಮ್ಮ, ಬೀಬಿ ಫಾತಿಮಾ, ಅಡುಗೆ ಸಿಬ್ಬಂದಿ, ಹಳೆ ವಿದ್ಯಾರ್ಥಿಗಳು, ಗ್ರಾಮಸ್ಥರು ಹಾಗೂ ಪೋಷಕರು ವಿದ್ಯಾರ್ಥಿನಿಯರ ಸಾಧನೆಗೆ ಹರ್ಷ ವ್ಯಕ್ತಪಡಿಸಿ ಶುಭಾಶಯ ಕೋರಿದ್ದಾರೆ.
First in Throwball: M.C. Halli Government School Girls Advance to Mysuru Divisional Level
Leave a comment