Home namma chikmagalur chikamagalur ಮಣ್ಣುಮುಕ್ಕ ಹಾವು ಮಾರಾಟಕ್ಕೆ ಯತ್ನ: ಐವರು ಬಂಧನ
chikamagalurCrime NewsHomeLatest Newsnamma chikmagalur

ಮಣ್ಣುಮುಕ್ಕ ಹಾವು ಮಾರಾಟಕ್ಕೆ ಯತ್ನ: ಐವರು ಬಂಧನ

Share
Share

ಚಿಕ್ಕಮಗಳೂರು: ಅಪರೂಪದ ವನ್ಯಜೀವಿಯಾದ ಮಣ್ಣುಮುಕ್ಕ ಹಾವು (Red Sand Boa) ಮಾರಾಟಕ್ಕೆ ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ನಗರದ ವಾಜಪೇಯಿ ಬಡಾವಣೆಯ ಜೋಡು ರಸ್ತೆಯ ಬಳಿ ಮಣ್ಣುಮುಕ್ಕ ಹಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸರಿಗೆ ದೊರಕಿತ್ತು. ಮಾಹಿತಿ ಆಧರಿಸಿ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು, ನೀಲಿ ಬಣ್ಣದ ಸ್ವಿಫ್ಟ್ ಕಾರು ಹಾಗೂ ಬಿಳಿ ಬಣ್ಣದ ವ್ಯಾಗನ್‌ಆರ್ ಕಾರಿನಲ್ಲಿ ಇದ್ದ ಐವರು ಆರೋಪಿಗಳನ್ನು ಬಂಧಿಸಿದರು.

ಬಂಧಿತರಿಂದ ಒಂದು ಮಣ್ಣುಮುಕ್ಕ ಹಾವು (Red Sand Boa) ವಶಪಡಿಸಿಕೊಳ್ಳಲಾಗಿದ್ದು, ಸುಮಾರು ₹5 ಲಕ್ಷ ಮೌಲ್ಯದ ಸ್ವಿಫ್ಟ್ ಕಾರು ಹಾಗೂ ₹3.5 ಲಕ್ಷ ಮೌಲ್ಯದ ವ್ಯಾಗನ್‌ಆರ್ ಕಾರನ್ನು ಸಹ ಜಪ್ತಿ ಮಾಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಂಧಿತರನ್ನು ಯತೀಶ (32), ವಂಶಿ ಕೃಷ್ಣ (42), ಆರಿಫ್ ಬಾಷಾ, ಷಫಿ (32) ಹಾಗೂ ನವಾಜ್ ಪಾಷಾ (38) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗ, ದಾವಣಗೆರೆ, ತುಮಕೂರು ಹಾಗೂ ಆಂಧ್ರ ಪ್ರದೇಶದ ಅನಂತಪುರ ಮೂಲದವರಾಗಿದ್ದಾರೆ.

ಈ ಕಾರ್ಯಾಚರಣೆ ಮಾನ್ಯ ಪೊಲೀಸ್ ಉಪ ಮಹಾನಿರೀಕ್ಷಕರಾದ ಶ್ರೀಮತಿ ಸಂಗೀತಾ ಜಿ, ಸಿಐಡಿ ಅರಣ್ಯ ಘಟಕ, ಬೆಂಗಳೂರು ಹಾಗೂ ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕರಾದ ಶ್ರೀ ಪವನ್ ನೆಟ್ಟೂರು, ಐಪಿಎಸ್ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಉಪನಿರೀಕ್ಷಕರಾದ ಬಾಬುದ್ದೀನ್ ಹಾಗೂ ಸಿಬ್ಬಂದಿಗಳಾದ ದೇವರಾಜ್, ಕೃಷ್ಣರಾಜ್ ಅರಸ್, ದಿಲೀಪ್, ನಟರಾಜ್, ಹಾಲೇಶ್ ಮತ್ತು ಚಾಲಕ ತಿಮ್ಮಶೆಟ್ಟಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಅರಣ್ಯ ಕಾಯ್ದೆ ಹಾಗೂ ವನ್ಯಜೀವಿ ಸಂರಕ್ಷಣಾ ಕಾಯ್ದೆಗೆ ಸಂಬಂಧಿಸಿದ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ದೊರೆತಲ್ಲಿ ಸಾರ್ವಜನಿಕರು ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕರ ಕಚೇರಿ (9480800220) ಹಾಗೂ ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಕಚೇರಿ (8277949809)ಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Five arrested for attempting to sell a snake covered in mud

Share

Leave a comment

Leave a Reply

Your email address will not be published. Required fields are marked *

Don't Miss

ಲಕ್ಯಾ-ಸಖರಾಯಪಟ್ಟಣ ಹೋಬಳಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಇಂಧನ ಸಚಿವ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಅವರು...

ಬಿರಂಜಿ ಹೊಳೆಯಿಂದ ರೈತಾಪಿ ವರ್ಗದ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು:  ಜಾವಣಿಗೆ ನಾಡಿನ ರೈತರ ಜಮೀನುಗಳಿಗೆ ನೀರು ಹರಿಸುವಲ್ಲಿ ವಿಫಲಗೊ ಂಡಿರುವ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಮಂಗಳವಾರ ರೈತ ಸಂಘ- ಹಸಿರುಸೇನೆ ತಾಲ್ಲೂಕು ಘಟ ಕ ಕರೆ ನೀಡಿದ್ಧ ಪ್ರತಿಭಟನೆಯಲ್ಲಿ...

Related Articles

ದೊಣ್ಣೆಯಿಂದ ಹಲ್ಲೆಯಾದ ಭಿಕ್ಷುಕನ ಸಾವು

ತರೀಕೆರೆ: ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಸುಮಾರು 65 ವರ್ಷದ ವ್ಯಕ್ತಿಯೊಬ್ಬರನ್ನು ದೊಣ್ಣೆಯಿಂದ ಹೊಡೆದು, ಕಾಲಿನಿಂದ...

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು...

ಜ್ಞಾನೇಶ್ ಕುಮಾರ್ ವಜಾಗೊಳಿಸಿ ಬಂಧಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ಚಿಕ್ಕಮಗಳೂರು: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಜೊತೆಗೆ ಬಿಜೆಪಿ...