Home namma chikmagalur chikamagalur ಕಾಫಿನಾಡಿನಲ್ಲಿ ಐವರು ಅಕ್ರಮ ಬಾಂಗ್ಲಾದೇಶದ ಪ್ರಜೆಗಳ ಬಂಧನ
chikamagalurHomeLatest Newsnamma chikmagalur

ಕಾಫಿನಾಡಿನಲ್ಲಿ ಐವರು ಅಕ್ರಮ ಬಾಂಗ್ಲಾದೇಶದ ಪ್ರಜೆಗಳ ಬಂಧನ

Share
Share

ಚಿಕ್ಕಮಗಳೂರು: ಕಾಫಿನಾಡಿನ ಕಾಫಿ ತೋಟಗಳು, ಹೋಂಸ್ಟೇಗಳು ಹಾಗೂ ರೆಸಾರ್ಟ್‌ಗಳಲ್ಲಿ ಅಕ್ರಮವಾಗಿ ಬಾಂಗ್ಲಾದೇಶದ ಪ್ರಜೆಗಳು ನೆಲೆಸಿದ್ದಾರೆ ಎಂಬ ಆರೋಪ ಹಲವು ವರ್ಷಗಳಿಂದ ಕೇಳಿಬರುತ್ತಿದ್ದ ಬೆನ್ನಲ್ಲೇ, ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿಯ ಆಧಾರದ ಮೇಲೆ ನಡೆಸಿದ ಕಾರ್ಯಾಚರಣೆಯಲ್ಲಿ ಐವರು ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬೆಳವಣಿಗೆ ಜಿಲ್ಲೆಯಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಬಂಧಿತರನ್ನು ಜಹಾಂಗೀರ್, ಫೈಸುದ್ದಿನ್, ನುಮನ್ ಬಶೀರ್, ಮಹಮದ್ ಹುಮೈನ್ ಹಾಗೂ ಮಹಮದ್ ಹಸೀಬುಲ್ ಎಂದು ಗುರುತಿಸಲಾಗಿದೆ. ಇವರು ಕಾಫಿ ತೋಟಗಳು, ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ದಿನಗೂಲಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು ಎನ್ನಲಾಗಿದೆ. ಬಂಧಿತರ ಬಳಿಯಿಂದ ಬಾಂಗ್ಲಾದೇಶದ ಗುರುತಿನ ಚೀಟಿಗಳು ಕೂಡ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಎರಡು ತಿಂಗಳಿಂದ ಜಿಲ್ಲೆಗೆ ಹೊರರಾಜ್ಯ ಹಾಗೂ ಹೊರಜಿಲ್ಲೆಗಳಿಂದ ಆಗಮಿಸುತ್ತಿರುವ ಕಾರ್ಮಿಕರ ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ಪೊಲೀಸ್ ಇಲಾಖೆ ಕೈಗೊಂಡಿತ್ತು. ಇದೇ ವೇಳೆ ಕೇಂದ್ರ ಗುಪ್ತಚರ ಇಲಾಖೆಯಿಂದ ದೊರೆತ ಮಾಹಿತಿಯ ಮೇರೆಗೆ ಬಣಕಲ್ ಸಮೀಪ ಪರಿಶೀಲನೆ ನಡೆಸಿದಾಗ ಈ ಐವರು ಪತ್ತೆಯಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರನ್ನು ಜಿಲ್ಲೆಗೆ ಯಾರು ಕರೆತಂದರು, ಕೆಲಸಕ್ಕೆ ಹೇಗೆ ಸೇರಿಸಿದರು, ಸಂಪರ್ಕ ಸಾಧಿಸಿದ ಏಜೆಂಟ್‌ಗಳು ಯಾರು, ಇವರೊಂದಿಗೆ ಇನ್ನೂ ಎಷ್ಟು ಮಂದಿ ಸಂಪರ್ಕದಲ್ಲಿದ್ದಾರೆ ಎಂಬ ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ. ಕೆಲವರು ಒಬ್ಬರೇ ಜಿಲ್ಲೆಗೆ ಬಂದಿದ್ದರೆ, ಇನ್ನೂ ಕೆಲವರು ಕುಟುಂಬ ಸಮೇತರಾಗಿ ಬಂದಿರುವ ಮಾಹಿತಿ ವಿಚಾರಣೆಯಲ್ಲಿ ಲಭ್ಯವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೀತೇಂದ್ರ ಕುಮಾರ್ ದಯಾಮಾ, ಪ್ರಕರಣದ ಸಮಗ್ರ ತನಿಖೆ ನಡೆಯುತ್ತಿದ್ದು, ಕಾನೂನು ಪ್ರಕಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಹೊರರಾಜ್ಯ ಹಾಗೂ ಹೊರಜಿಲ್ಲೆಯ ಕಾರ್ಮಿಕರ ಮಾಹಿತಿ ಸಂಗ್ರಹಿಸುವ ಕಾರ್ಯವೂ ಮುಂದುವರಿದಿದೆ ಎಂದು ಅವರು ಹೇಳಿದರು.

ಇತ್ತೀಚಿನ ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಇತರ ರಾಜ್ಯಗಳಲ್ಲಿಯೂ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನೂ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಮುಂದಿನ ತನಿಖೆಯಲ್ಲಿ ಇನ್ನಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

ಇದೀಗ ಕಾಫಿನಾಡಿನಲ್ಲಿ ಐವರು ಅಕ್ರಮ ಬಾಂಗ್ಲಾದೇಶದ ಪ್ರಜೆಗಳು ಪತ್ತೆಯಾಗಿರುವ ಘಟನೆ ಭದ್ರತೆ ಹಾಗೂ ಕಾರ್ಮಿಕರ ನೋಂದಣಿ ವ್ಯವಸ್ಥೆ ಕುರಿತು ಹೊಸ ಚರ್ಚೆಗೆ ಕಾರಣವಾಗಿದೆ. ಮಲೆನಾಡು ಭಾಗದಲ್ಲಿ ಅಕ್ರಮ ವಲಸಿಗರ ಸಂಖ್ಯೆ ಕುರಿತು ವಿವಿಧ ಸಂಘಟನೆಗಳು ವ್ಯಕ್ತಪಡಿಸಿರುವ ಶಂಕೆಗಳ ನಡುವೆಯೇ, ವಾಸ್ತವ ಸ್ಥಿತಿ ಪೊಲೀಸರ ತನಿಖೆ ಪೂರ್ಣಗೊಂಡ ಬಳಿಕವೇ ಸ್ಪಷ್ಟವಾಗಲಿದೆ.

Five illegal Bangladeshi nationals arrested in Coffee Country

Share

Leave a comment

Leave a Reply

Your email address will not be published. Required fields are marked *

Don't Miss

ಮರು ಮತ ಎಣಿಕೆಯಲ್ಲಿ ಗಾಯತ್ರಿ ಶಾಂತೇಗೌಡಗೆ 9 ಮತಗಳ ಗೆಲವು

ಚಿಕ್ಕಮಗಳೂರು:  ಚಿಕ್ಕಮಗಳೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದ ಮಹತ್ವದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದೆ. ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಅವರಿದ್ದ ಏಕಸದಸ್ಯ...

ಎನ್‌ಆರ್‌ಪುರ, ಶೃಂಗೇರಿ – ಕೊಪ್ಪ ತಾಲ್ಲೂಕಿನ ಶಾಲೆಗಳಿಗೆ ಇಂದು ರಜೆ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ, ಪ್ರವಾಹ ಹಾಗೂ ಭೂಕುಸಿತದ ಆತಂಕದ ಹಿನ್ನೆಲೆಯಲ್ಲಿ ಜಿಲ್ಲೆಯ ನರಸಿಂಹರಾಜಪುರ, ಶೃಂಗೇರಿ ಮತ್ತು ಕೊಪ್ಪ ತಾಲ್ಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು,...

Related Articles

ಪೆಟ್ರೋಲ್ ಬಂಕ್ ಅಳತೆಯಲ್ಲಿ ಮೋಸ ಮಾಡುತ್ತಿರುವ ಆರೋಪ

ಚಿಕ್ಕಮಗಳೂರು: ಪೆಟ್ರೋಲ್ ಬಂಕ್‌ನಲ್ಲಿ ಗ್ರಾಹಕರಿಗೆ ಅಳತೆಯಲ್ಲಿ ಮೋಸ ಮಾಡುತ್ತಿರುವ ಆರೋಪ ಚಿಕ್ಕಮಗಳೂರು ಕೆಎಸ್‌ಆರ್‌ಟಿಸಿ (KSRTC) ಬಸ್...

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಸಂಭಾವ್ಯ ಪಟ್ಟಿ ಪ್ರಕಟ

ಚಿಕ್ಕಮಗಳೂರು: ಜಿಲ್ಲಾಡಳಿತ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯವು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ...

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ...