Home namma chikmagalur chikamagalur ಪರಿಹಾರ ನೀಡಲು ಅರಣ್ಯ ಇಲಾಖೆಯ ಅಧಿಕಾರಿಯಿಂದ ಲಂಚಕ್ಕಾಗಿ ಬೇಡಿಕೆ
chikamagalurHomeLatest Newsnamma chikmagalur

ಪರಿಹಾರ ನೀಡಲು ಅರಣ್ಯ ಇಲಾಖೆಯ ಅಧಿಕಾರಿಯಿಂದ ಲಂಚಕ್ಕಾಗಿ ಬೇಡಿಕೆ

Share
Share

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆ ಹಾವಳಿಯಿಂದ ಕಂಗೆಟ್ಟಿರುವ ರೈತರಿಗೆ ಸಾಂತ್ವನ ಹೇಳಬೇಕಾದ ಅರಣ್ಯ ಇಲಾಖೆಯ ಅಧಿಕಾರಿಯೇ ಈಗ ಲಂಚಕ್ಕಾಗಿ ಪೀಡಿಸಿರುವುದು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗಿದೆ.

ತಾಲೂಕಿನ ಕಣತಿ ಗ್ರಾಮದ ರೈತರೊಬ್ಬರು ಕಾಡಾನೆ ದಾಳಿಯಿಂದಾಗಿ ಸುಮಾರು 65 ಅಡಿಕೆ ಮರಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದರು. ಈ ನಷ್ಟದ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಿ ಪರಿಹಾರ ಕೊಡಿಸಬೇಕಾದ ಕಣತಿ ಬೀಟ್‌ನ ಡಿ.ಆ‌ರ್.ಎಫ್.ಓ ವೀರಭದ್ರ ನಾಯಕ್ ಎಂಬ ಅಧಿಕಾರಿ, ನೇರವಾಗಿಯೇ ರೈತನ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ.

“ಖರ್ಚಿಗೆ ಏನಾದ್ರೂ ಕೊಡ್ತೀನಿ ಅಂದ್ರೆ ಜಾಸ್ತಿ ಬರೀತೀನಿ, ಇಲ್ಲಾಂದ್ರೆ 65 ಅಡಿಕೆ ಅಂತಲೇ ಬರೀತೀನಿ” ಎಂದು ರೈತನಿಗೆ ಅಧಿಕಾರಿ ಆಮಿಷವೊಡ್ಡಿದ್ದಾರೆ. ಅಂದರೆ ಹಣ ನೀಡಿದರೆ ನಷ್ಟದ ಪ್ರಮಾಣವನ್ನು ಹೆಚ್ಚಿಸಿ ಬರೆದು ಹೆಚ್ಚಿನ ಪರಿಹಾರ ಕೊಡಿಸುವುದಾಗಿ, ಇಲ್ಲವಾದಲ್ಲಿ ಕೇವಲ ನೈಜ ನಷ್ಟವನ್ನಷ್ಟೇ ದಾಖಲಿಸುವುದಾಗಿ ಹೇಳಿದ್ದಾರೆ.

ರೈತರಿಂದ ಹಣ ಸಿಗಬಹುದು ಎಂದು ಸುಮಾರು ಹತ್ತು ಸೆಕೆಂಡುಗಳ ಕಾಲ ಕಾದು ನೋಡಿದ ಅಧಿಕಾರಿ, ಲಂಚ ನೀಡಲು ರೈತ ಒಪ್ಪದಿದ್ದಾಗ ಕೊನೆಗೆ 65 ಮರಗಳ ನಷ್ಟವೆಂದೇ ದಾಖಲಿಸಿದ್ದಾರೆ. ಕಾಡಾನೆ ದಾಳಿಯಿಂದ ಬದುಕು ಕಳೆದುಕೊಳ್ಳುತ್ತಿರುವ ಮಲೆನಾಡಿನ ರೈತರ ಅಸಹಾಯಕತೆಯನ್ನು ಬಂಡವಾಳ ಮಾಡಿಕೊಳ್ಳಲು ಯತ್ನಿಸಿದ ಅಧಿಕಾರಿಯ ನಡೆ ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ.

Forest Department official demands bribe to provide compensation

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....