Home namma chikmagalur ಚಿಕ್ಕಮಗಳೂರು ಜನಪ್ರತಿನಿಧಿಗಳೊಂದಿಗೆ ಅರಣ್ಯ ಸಚಿವರ ಸಭೆ
namma chikmagalurchikamagalurHomeLatest News

ಚಿಕ್ಕಮಗಳೂರು ಜನಪ್ರತಿನಿಧಿಗಳೊಂದಿಗೆ ಅರಣ್ಯ ಸಚಿವರ ಸಭೆ

Share
Share

ಬೆಂಗಳೂರು: ಅರಣ್ಯ ಕಾಯಿದೆ 1963ರ ಸೆಕ್ಷನ್ 4ರಡಿ ಅಧಿಸೂಚನೆ ಆಗುವ ಮುನ್ನ ಮಂಜೂರಾಗಿರುವ ಭೂಮಿಯನ್ನು ಅರಣ್ಯದಿಂದ ಕೈಬಿಡಲು ಸರ್ಕಾರಕ್ಕೆ ಅವಕಾಶವಿದ್ದು, ಅಧಿಸೂಚನೆಯ ನಂತರ 30-40 ವರ್ಷಗಳಿಂದ ಮನೆಕಟ್ಟಿರುವ, ಉಳಿಮೆ ಮಾಡುತ್ತಿರುವ ಜನರಿಗೆ ನ್ಯಾಯ ಕೊಡಿಸಲು ಕೇಂದ್ರ ಹಾಗೂ ಸುಪ್ರೀಂಕೋರ್ಟ್ ಗೆ ವಿಶೇಷ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿಂದು ಚಿಕ್ಕಮಗಳೂರು ಜಿಲ್ಲೆಯ ಶಾಸಕರುಗಳು ಮತ್ತು ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ವಸತಿ ಪ್ರದೇಶ, ಪಟ್ಟಾಭೂಮಿ ಇತ್ಯಾದಿ ಇರುವ ಪರಿಭಾವಿತ ಅರಣ್ಯ ಹಾಗೂ ಸೆಕ್ಷನ್ 4 ಅಧಿಸೂಚನೆ ನಂತರ ಮಂಜೂರಾಗಿರುವ ಜಮೀನಿಗೆ ಪರ್ಯಾಯವಾಗಿ ಬೇರೆಡೆ ಲಭ್ಯವಿರುವ ಅರಣ್ಯೇತರ ಭೂಮಿ ನೀಡಿ ಈ ಜಮೀನನ್ನು ಅರಣ್ಯ ವ್ಯಾಪ್ತಿಯಿಂದ ಕೈಬಿಡುವಂತೆ ಸುಪ್ರೀಂಕೋರ್ಟ್ ಮತ್ತು ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಹಲವು ಪ್ರಕರಣಗಳಲ್ಲಿ ಸೆಕ್ಷನ್ 4 ಅಧಿಸೂಚನೆ ಆಗಿ 60-70 ವರ್ಷವಾಗಿದ್ದರೂ ಇನ್ನೂ ಸೆಕ್ಷನ್ 17 ಆಗಿರುವುದಿಲ್ಲ. 1980ರ ಅರಣ್ಯ ಸಂರಕ್ಷಣಾ ಕಾಯಿದೆ ಜಾರಿ ಬಳಿಕ ಈಗ ಅಂತಹ ಅರಣ್ಯ ಕೈಬಿಡುವುದು ಕಷ್ಟಸಾಧ್ಯವಾಗಿದೆ. ಹೀಗಾಗಿ ಕೇಂದ್ರ ಹಾಗೂ ಸುಪ್ರೀಂಕೋರ್ಟ್ ಗೆ ಮನವಿ ಮಾಡುವುದು ಅನಿವಾರ್ಯ ಎಂದು ತಿಳಿಸಿದರು.

ಚಿಕ್ಕಮಗಳೂರು ಜಿಲ್ಲೆ ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿದ್ದು, ಇಲ್ಲಿ ಸಮೃದ್ಧ ಕಾನನ ಪ್ರದೇಶವಿದೆ. ಇಲ್ಲಿ ಒಂದೇ ಸರ್ವೆ ನಂಬರ್ ನಲ್ಲಿ 300-400 ಎಕರೆ ಜಮೀನಿದ್ದು, ಜಂಟಿ ಸರ್ವೆ ಆಗದ ಕಾರಣ ಗೊಂದಲ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಮತ್ತು ಕಂದಾಯ ಜಮೀನಿನ ಜಂಟಿ ಸರ್ವೆ ಮಾಡಿ ಸಮಸ್ಯೆಯನ್ನು ಶೀಘ್ರ ಇತ್ಯರ್ಥ ಪಡಿಸಲು ಪ್ರಯತ್ನಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಪರಿಭಾವಿತ ಅರಣ್ಯ (ಡೀಮ್ಡ್) ಎಂದು ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿರುವ ಸರ್ವೆ ನಂಬರ್ ನಲ್ಲಿ ಕೂಡ ಮನೆಗಳು, ಸರ್ಕಾರಿ ಶಾಲೆಗಳು, ಸರ್ಕಾರಿ ಕಟ್ಟಡ, ಪಟ್ಟಾಭೂಮಿ ಇದೆ. ಈಗ ಅಂತಿಮವಾಗಿ ಸುಪ್ರೀಂಕೋರ್ಟ್ ಗೆ ವರದಿ ಸಲ್ಲಿಸುವ ಅವಕಾಶ ದೊರೆತಿದ್ದು, ಸಮರ್ಪಕವಾಗಿ ಸರ್ವೆ ನಡೆಸಿ ಕೈಬಿಡಲು ಅರ್ಹವಾದ ಜಮೀನಿನ ಪ್ರಮಾಣ ನಿರ್ಧರಿಸಿ, ಅದಕ್ಕೆ ಪರ್ಯಾಯವಾಗಿ ಬೇರೆ ಕಡೆ ಕಂದಾಯ ಭೂಮಿ ನೀಡುವುದಾಗಿ ಮತ್ತು ಅಲ್ಲಿ ಅರಣ್ಯ ಬೆಳೆಸುವುದಾಗಿ ತಿಳಿಸಿ ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಬಹುದಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಈಗಾಗಲೇ 2022ರಲ್ಲಿ ಸುಪ್ರೀಂಕೋರ್ಟ್ ಗೆ ಸಲ್ಲಿಸಲಾಗಿರುವ ಡೀಮ್ಡ್ ಅರಣ್ಯ ಕುರಿತ ಪ್ರಮಾಣಪತ್ರ ಸಾರ್ವಜನಿಕರಿಗೆ ಲಭ್ಯವಾಗುವಂತೆ ಇಲಾಖೆಯ ಅಧಿಕೃತ ಅಂತರ್ಜಾಲ ತಾಣದಲ್ಲಿ ಅಪ್ ಲೋಡ್ ಮಾಡುವಂತೆ ಸಹ ಅರಣ್ಯ ಸಚಿವರು ಸೂಚನೆ ನೀಡಿದರು.
ಹಾಸನ ಜಿಲ್ಲೆಯ ಅರಸೀಕೆರೆ ವ್ಯಾಪ್ತಿಯಲ್ಲಿನ ಕರಡಿ ಧಾಮದ ಸುತ್ತ ಪ್ರಸ್ತುತ 10 ಕಿ.ಮೀ. ಬಫರ್ ವಲಯ ಎಂದು ಘೋಷಿಸಲಾಗಿರುವ ಕಾರಣ ಗಡಿ ಭಾಗದ ಚಿಕ್ಕಮಗಳೂರು ರೈತರೂ ಸಂಕಷ್ಟ ಎದುರಿಸುವಂತಾಗಿದೆ ಎಂಬ ಶಾಸಕರ ಮನವಿಗೆ ಸ್ಪಂದಿಸಿದ ಸಚಿವರು, ಈ ಮಿತಿಯನ್ನು 1 ಕಿ.ಮೀ.ಗೆ ಇಳಿಕೆ ಮಾಡಲು ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಶೀಘ್ರವೇ ಈ ಸಮಸ್ಯೆ ಬಗೆಹರಿಯುತ್ತದೆ ಎಂದು ಭರವಸೆ ನೀಡಿದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಅರಣ್ಯ ಕಾಯಿದೆ ಸೆಕ್ಷನ್ 4 ಹಾಗೂ ಪರಿಭಾವಿತ ಅರಣ್ಯ ಅಧಿಸೂಚನೆಯಿಂದ ಜನ ಸಾಮಾನ್ಯರಿಗೆ ಆಗುತ್ತಿರುವ ತೊಂದರೆ ಕುರಿತಂತೆ ಸಭೆ ಕರೆದು ಚರ್ಚಿಸಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರಿಗೆ ಸಭೆಯಲ್ಲಿ ಭಾಗಿಯಾಗಿದ್ದ ಶಾಸಕರುಗಳಾದ ರಾಜೇಗೌಡ, ತಮ್ಮಣ್ಣ, ನಯನ ಮೋಟಮ್ಮ, ಶ್ರೀನಿವಾಸ್ ಮತ್ತು ಆನಂದ್ ಧನ್ಯವಾದ ಅರ್ಪಿಸಿದರು.

ಸಭೆಯಲ್ಲಿ ಅರಣ್ಯಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಸುಭಾಷ್ ಮಾಲ್ಕಡೆ, ಪಿಸಿಸಿಎಫ್ ಬಿ.ಪಿ. ರವಿ, ಬಿಸ್ವಜಿತ್ ಮಿಶ್ರಾ, ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮತ್ತಿತರರು ಪಾಲ್ಗೊಂಡಿದ್ದರು.

Forest Minister’s meeting with Chikmagalur people’s representatives

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...