Home namma chikmagalur ajjampura ಅಜ್ಜಂಪುರದ‌ಲ್ಲಿ ಇಂದು ನೂತನ ರಸ್ತೆ ಮೇಲ್ವೇತುವೆಯ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ
ajjampuraHomeLatest Newsnamma chikmagalur

ಅಜ್ಜಂಪುರದ‌ಲ್ಲಿ ಇಂದು ನೂತನ ರಸ್ತೆ ಮೇಲ್ವೇತುವೆಯ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ

Share
Share

ಚಿಕ್ಕಮಗಳೂರು: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ಸಚಿವರಾದ ವಿ.ಸೋಮಣ್ಣ ಅವರು ಮೇ 31 ರಂದು (ನಾಳೆ ಭಾನುವಾರ) ಚಿಕ್ಕಮಗಳೂರು ಜಿಲ್ಲೆಯ ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆ 11.30 ಕ್ಕೆ ಅಜ್ಜಂಪುರಕ್ಕೆ ಆಗಮಿಸಲಿರುವ ಅವರು, ಅಲ್ಲಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 138 ರ ಬದಲಾಗಿ ನಿರ್ಮಿಸಲು ಉದ್ದೇಶಿಸಿರುವ ನೂತನ ರಸ್ತೆ ಮೇಲ್ವೇತುವೆಯ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಇದಾದ ನಂತರ ಮಧ್ಯಾಹ್ನ 12.30 ಕ್ಕೆ ಬೀರೂರಿಗೆ ಭೇಟಿ ನೀಡಲಿರುವ ಸಚಿವರು, ಅಲ್ಲಿನ ಲೆವೆಲ್ ಕ್ರಾಸಿಂಗ್‌ಗೆ ಪರ್ಯಾಯವಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಲಾಗುವ ಪಾದಚಾರಿ ಸುರಂಗಮಾರ್ಗ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಿದ್ದಾರೆ. ಈ ಎರಡೂ ಪ್ರಮುಖ ಯೋಜನೆಗಳು ಸ್ಥಳೀಯ ಸಾರ್ವಜನಿಕರ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಮಹತ್ವದ ಕೊಡುಗೆಯನ್ನು ನೀಡಲಿವೆ.

ಶಿಲಾನ್ಯಾಸ ಕಾರ್ಯಕ್ರಮಗಳ ಮುಕ್ತಾಯದ ಬಳಿಕ ಮಧ್ಯಾಹ್ನ 1 ಗಂಟೆಗೆ ಬೀರೂರಿನಲ್ಲಿ ಆಯೋಜಿಸಲಾಗಿರುವ ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿರುವ ಸಚಿವರು, ನಂತರ ಮಧ್ಯಾಹ್ನ 3 ಗಂಟೆಗೆ ಅಲ್ಲಿಂದ ಪ್ರಯಾಣ ಬೆಳೆಸಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ರೈಲು ನಿಲ್ದಾಣಕ್ಕೆ ತೆರಳಲಿದ್ದಾರೆ ಎಂದು ಮೈಸೂರು ರೈಲ್ವೆ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿಗಳು ತಮ್ಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Foundation stone laid for construction of new road overpass in Ajjampura today

Share

Leave a comment

Leave a Reply

Your email address will not be published. Required fields are marked *

Don't Miss

ಟಿಪ್ಪು ಸುಲ್ತಾನ್ ಕಟೌಟ್ ಗೆ ದೇಶದ್ರೋಹಿ ಹಾಡು-7 ಜನ ಪೊಲೀಸರ ವಶಕ್ಕೆ

ಚಿಕ್ಕಮಗಳೂರು: ಕಾಫಿನಾಡಲ್ಲಿ ಪಾಕ್ ಪ್ರೇಮಿಗಳು ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಈದ್ ಮಿಲಾದ್ ಆಚರಣೆಗೆ ಟಿಪ್ಪು ಸುಲ್ತಾನ್ ಕಟೌಟ್ ಹಾಕಿರುವ ಯುವಕರು, ಕಟೌಟ್ ಬ್ಯಾಕ್ ಗ್ರೌಂಡ್ ಗೆ ದೇಶದ್ರೋಹಿ ಸಾಂಗ್ ಹಾಕಿ ವಿವಾದ...

ಕಾಫಿಕಿಂಗ್ ಸಿದ್ಧಾರ್ಥಹೆಗ್ಗಡೆ ಹೆಸರು ಶಾಶ್ವತವಾಗಿ ಉಳಿಸುವ ಕಾರ್ಯ ಮಾಡಬೇಕಿದೆ

ಮೂಡಿಗೆರೆ: ಕಾಫಿ ಡೇ ಮಾಲೀಕ ದಿವಂಗತ ವಿ.ಜಿ.ಸಿದ್ಧಾರ್ಥ ಹೆಗ್ಗಡೆ ಅವರು ತಮ್ಮ ಸಂಪೂರ್ಣ ಜೀವನವನ್ನು ಕಾಫಿ ಬೆಳೆಗಾರರ ಮತ್ತು ಕಾರ್ಮಿಕರ ಹಿತಕ್ಕಾಗಿ ಸವಿಸಿದ್ದಾರೆಂದು ಮಾಜಿ ಸಚಿವ ಬಿ.ಬಿ.ನಿಂಗಯ್ಯ ಹೇಳಿದರು. ಅವರು ಭಾನುವಾರ...

Related Articles

ಅಜ್ಜಂಪುರ ಸುತ್ತಮುತ್ತ ಕರಡಿ ಹಾವಳಿ

ಅಜ್ಜಂಪುರ: ಅಜ್ಜಂಪುರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕರಡಿ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಗಲು-ರಾತ್ರಿ...

ಚಿಕ್ಕಮಗಳೂರಿನಲ್ಲಿ 30 ಕೆ.ಜಿಗೂ ಅಧಿಕ ನಕಲಿ ನಾಟಿ ತುಪ್ಪ ಪತ್ತೆ

ಚಿಕ್ಕಮಗಳೂರು: ನಗರದ ಮಾರ್ಕೆಟ್ ರಸ್ತೆಯಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು...

ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ಯವಕ ಸಾವು

ಚಿಕ್ಕಮಗಳೂರು: ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ತಲೆ ಬಂಡೆಗೆ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ...

ಮನ್ ಕಿ ಬಾತ್‌ನಲ್ಲಿ ಚಿಕ್ಕಮಗಳೂರು ರೈತರ ಕೃಷಿ ವೈವಿಧ್ಯತೆಗೆ ಪ್ರಧಾನಿ ಮೋದಿ ಮೆಚ್ಚುಗೆ

ಚಿಕ್ಕಮಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ 137ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರಿನ ರೈತರ...