Home Crime News ಸೀತಾಪುರದಲ್ಲಿ ಅಕ್ರಮ ಇಸ್ಪೀಟ್ ಜೂಜಾಟದಲ್ಲಿ ನಾಲ್ವರ ಬಂಧನ
Crime NewsHomeKadurLatest Newsnamma chikmagalur

ಸೀತಾಪುರದಲ್ಲಿ ಅಕ್ರಮ ಇಸ್ಪೀಟ್ ಜೂಜಾಟದಲ್ಲಿ ನಾಲ್ವರ ಬಂಧನ

Share
Share

ಕಡೂರು: ತಾಲೂಕಿನ ಯಗಟಿ ಪೊಲೀಸ್ ಠಾಣಾ ವ್ಯಾಪ್ತಿಯ ಸೀತಾಪುರ ಗ್ರಾಮದ ಶಿವಗನಾಯ್ಕ ಅವರ ತೋಟದಲ್ಲಿ ಅಕ್ರಮವಾಗಿ ಅಂದರ್–ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ ನಾಲ್ವರನ್ನು ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

ಆ.25ರಂದು ಮಧ್ಯರಾತ್ರಿ ಯಗಟಿ ಠಾಣೆ ಪಿಎಸ್‌ಐ ಶಾಹಿದ್ ಅಫ್ರಿದಿ ಅವರಿಗೆ ಸೀತಾಪುರ ಗ್ರಾಮದ ತೋಟವೊಂದರಲ್ಲಿ 3–4 ಮಂದಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ಇಸ್ಪೀಟ್ ಆಡುತ್ತಿರುವ ಕುರಿತು ಖಚಿತ ಮಾಹಿತಿ ದೊರೆತಿತ್ತು. ಮಾಹಿತಿ ಆಧರಿಸಿ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದ ಪೊಲೀಸರು, ಪಂಚರ ಸಮ್ಮುಖದಲ್ಲಿ ತೋಟದ ಬಳಿ ಮರೆಯಲ್ಲಿ ನಿಂತು ಪರಿಶೀಲಿಸಿದಾಗ ನಾಲ್ವರು ಟಾರ್ಚ್ ಬೆಳಕಿನಲ್ಲಿ ಇಸ್ಪೀಟ್ ಆಟವಾಡುತ್ತಿರುವುದು ಕಂಡುಬಂದಿದೆ.

ಪೊಲೀಸರು ದಾಳಿ ನಡೆಸಿ ಸೀತಾಪುರ ಗ್ರಾಮದ ಮಹಲಿಂಗನಾಯ್ಕ (50), ಪ್ರದೀಪ (32), ಮುಗುಳಿಕಟ್ಟೆ ಗ್ರಾಮದ ರಂಗಪ್ಪ (32) ಹಾಗೂ ಸೀತಾಪುರ ಗ್ರಾಮದ ಚಂದನ್ (26) ಅವರನ್ನು ವಶಕ್ಕೆ ಪಡೆದಿದ್ದಾರೆ.

ಸ್ಥಳ ಪರಿಶೀಲನೆ ವೇಳೆ ಕಪ್ಪು ಬಣ್ಣದ ಪ್ಲಾಸ್ಟಿಕ್ ಟಾರ್ಪಲ್, ಟಾರ್ಚ್, ಇಸ್ಪೀಟ್ ಎಲೆಗಳು ಹಾಗೂ ನಗದು ಹಣ ಪತ್ತೆಯಾಗಿದೆ. ಆರೋಪಿಗಳ ಬಳಿಯಿಂದ ಒಟ್ಟು ₹35,590 ನಗದು, 52 ಇಸ್ಪೀಟ್ ಎಲೆಗಳು, ಒಂದು ಟಾರ್ಚ್ ಹಾಗೂ ಕಪ್ಪು ಬಣ್ಣದ ಪ್ಲಾಸ್ಟಿಕ್ ಟಾರ್ಪಲ್ ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಯಾವುದೇ ಪರವಾನಗಿ ಇಲ್ಲದೆ ಹಣವನ್ನು ಪಣವಾಗಿಟ್ಟು ಅಂದರ್–ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದುದಾಗಿ ಪೊಲೀಸರ ವಿಚಾರಣೆಯಲ್ಲಿ ತಿಳಿಸಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಪಂಚರ ಸಮಕ್ಷಮದಲ್ಲಿ ರಾತ್ರಿ 12.30ರಿಂದ 1.15ರವರೆಗೆ ಮಹಜರು ನಡೆಸಿ, ವಶಪಡಿಸಿಕೊಂಡ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಬಳಿಕ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿ, ವಶಪಡಿಸಿಕೊಂಡ ಮಾಲುಗಳೊಂದಿಗೆ ಪೊಲೀಸರು ಯಗಟಿ ಠಾಣೆಗೆ ಮರಳಿದ್ದಾರೆ.

ಈ ಸಂಬಂಧ ಯಗಟಿ ಪೊಲೀಸ್ ಠಾಣೆಯಲ್ಲಿ ಮೊ.ನಂ.100/2026, ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 87ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Four arrested in illegal ispeet gambling in Sitapur

Share

Leave a comment

Leave a Reply

Your email address will not be published. Required fields are marked *

Don't Miss

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 10ಕ್ಕೆ ಮುಂದೂಡಿದೆ. ​2023ರ...

ಮಾಲಿನ್ಯದಿಂದ ನಾರುತ್ತಿರುವ ಮುಳ್ಳಯ್ಯನಗಿರಿ–ಸೀತಾಳಯ್ಯನಗಿರಿ

ಚಿಕ್ಕಮಗಳೂರು: ಪುರಾಣ ಪ್ರಸಿದ್ಧ, ಧಾರ್ಮಿಕ ಹಾಗೂ ಪರಿಸರದ ದೃಷ್ಟಿಯಿಂದ ಮಹತ್ವ ಪಡೆದಿರುವ ಮುಳ್ಳಯ್ಯನಗಿರಿ–ಸೀತಾಳಯ್ಯನಗಿರಿ ಪ್ರದೇಶ ಪ್ರವಾಸಿಗರ ಅತಿಯಾದ ಹಾವಳಿಯಿಂದ ತ್ಯಾಜ್ಯಮಯವಾಗುತ್ತಿದ್ದು, ಪ್ಲಾಸ್ಟಿಕ್ ಮಾಲಿನ್ಯದಿಂದ ಗಿರಿ ಪ್ರದೇಶದ ನೈಸರ್ಗಿಕ ಸೌಂದರ್ಯಕ್ಕೆ ಧಕ್ಕೆ ಉಂಟಾಗಿದೆ....

Related Articles

ತರೀಕೆರೆಯಲ್ಲಿ ಅಪಾಚಿ ಬೈಕ್ ಕಳವು

ತರೀಕೆರೆ: ಪಟ್ಟಣದ ಎಂಎಸ್‌ಐಎಲ್ ಅಂಗಡಿ ಮುಂಭಾಗ ನಿಲ್ಲಿಸಿದ್ದ ಅಪಾಚಿ ಬೈಕ್ ಕಳುವಾಗಿರುವ ಕುರಿತು ತರೀಕೆರೆ ಪೊಲೀಸ್...

ಬಿಜೆಪಿ-ಕಾಂಗ್ರೆಸ್‌ನ 200ಕ್ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್‌ಗೆ ಸೇರ್ಪಡೆ

ಚಿಕ್ಕಮಗಳೂರು: ಚಿಕ್ಕಮಗಳೂರು ಹಾಗೂ ಮೂಡಿಗೆರೆ ಭಾಗದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಪ್ರಮುಖ ಮುಖಂಡರು ಹಾಗೂ...

ಸಾವಿರಾರು ಮಂದಿಯಿಂದ ಬೃಹತ್ ಈದ್‌ಮಿಲಾದ್ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಪೈಗಂಬರ್ ೧೫೦೧ನೇ ಜನ್ಮದಿನದ ಅಂಗವಾಗಿ ಆಚರಿಸಲಾದ ಈದ್‌ಮಿಲಾದ್ ಹಬ್ಬದ ಪ್ರಯುಕ್ತ ನಗರದಲ್ಲಿ...

ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಎಐಟಿಯುಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು:  ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯ ರು ಮತ್ತು ಸಹಾಯಕಿಯರ ಫೆಡೆರೇಷನ್‌ನ ಜಿಲ್ಲಾ...