Home namma chikmagalur chikamagalur ವಿದ್ಯುತ್ ಸ್ಪರ್ಶ-ನಾಲ್ಕು ಹಸುಗಳು ಸ್ಥಳದಲ್ಲೇ ಸಾವು
chikamagalurCrime NewsHomeLatest News

ವಿದ್ಯುತ್ ಸ್ಪರ್ಶ-ನಾಲ್ಕು ಹಸುಗಳು ಸ್ಥಳದಲ್ಲೇ ಸಾವು

Share
Share

ಚಿಕ್ಕಮಗಳೂರು: ಮೆಸ್ಕಾಂ ನಿರ್ಲಕ್ಷ್ಯಕ್ಕೆ ನಾಲ್ಕು ಮೂಕ ಪ್ರಾಣಿಗಳು ಬಲಿಯಾಗಿರುವ ಘಟನೆಯೊಂದು ಚಿಕ್ಕಮಗಳೂರು ಸಮೀಪದ ಇಂದಾವರ ಗ್ರಾಮದಲ್ಲಿ ಸಂಭವಿಸಿದೆ. ಹಳೆಯ ಕಬ್ಬಿಣದ ವಿದ್ಯುತ್ ಕಂಬದ ವಿದ್ಯುತ್ ಸ್ಪರ್ಶಕ್ಕೆ ಸಿಲುಕಿ, ಮೇಯಲು ತೆರಳಿದ್ದ ನಾಲ್ಕು ಹಸುಗಳು ಸ್ಥಳದಲ್ಲೇ ಸಾವನ್ನಪ್ಪಿವೆ.

ಗ್ರಾಮದ ರೈತ ಚೆನ್ನಪ್ಪ ಎಂಬುವರಿಗೆ ಸೇರಿದ ಈ ಹಸುಗಳು ಎಂದಿನಂತೆ ಮೇವು ಅರಸಿ ತೆರಳಿದ್ದಾಗ ಈ ಘಟನೆ ಸಂಭವಿಸಿದೆ. ಕಷ್ಟಪಟ್ಟು ಸಾಕಿದ ಹಸುಗಳು ಪ್ರಾಣಬಿಟ್ಟಿರುವುದನ್ನು ಕಂಡ ರೈತ ಚನ್ನಪ್ಪ ಕಂಗಾಲಾಗಿದ್ದು, ತಮ್ಮ ಜೀವನೋಪಾಯಕ್ಕೆ ಆಸರೆಯಾಗಿದ್ದ ಜಾನುವಾರುಗಳನ್ನು ಕಳೆದುಕೊಂಡು ಕಣ್ಣೀರು ಹಾಕಿದ್ದಾರೆ.

ಈ ಘಟನೆಯ ಬೆನ್ನಲ್ಲೇ ಮೆಸ್ಕಾಂ ಅಧಿಕಾರಿಗಳ ವಿರುದ್ಧ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದು ಹಳೆಯ ಕಬ್ಬಿಣದ ವಿದ್ಯುತ್ ಕಂಬಗಳನ್ನು ಬದಲಾಯಿಸಬೇಕೆಂಬ ನಿಯಮಗಳಿದ್ದರೂ, ಅಧಿಕಾರಿಗಳ ಬೇಜವಾಬ್ದಾರಿತನದಿಂದಲೇ ಈ ಸಾವುಗಳು ಸಂಭವಿಸಿವೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಘಟನಾ ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ನಾಲ್ಕು ಜಾನುವಾರುಗಳನ್ನು ಕಳೆದುಕೊಂಡ ರೈತನಿಗೆ ತಕ್ಷಣವೇ ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Four cows electrocuted by electric pole – died on the spot

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....