Home namma chikmagalur chikamagalur ಪ್ರತ್ಯೇಕ ಅಪಘಾತದಲ್ಲಿ- ನಾಲ್ವರಿಗೆ ಗಾಯ
chikamagalurCrime NewsHomeLatest Newsnamma chikmagalur

ಪ್ರತ್ಯೇಕ ಅಪಘಾತದಲ್ಲಿ- ನಾಲ್ವರಿಗೆ ಗಾಯ

Share
Share

ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಬಾಲಕಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ವಾಹನಗಳು ಜಖಂಗೊಂಡಿವೆ. ಈ ಸಂಬಂಧ ಸಂಚಾರ, ಗ್ರಾಮಾಂತರ ಹಾಗೂ ನರಸಿಂಹರಾಜಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ಚಿಕ್ಕಮಗಳೂರು ನಗರದ ಮಲ್ಲಂದೂರು ರಸ್ತೆಯ ಬದ್ರಿಯಾ ಸರ್ಕಲ್ ಬಳಿ ಅ.31ರಂದು ಮಧ್ಯಾಹ್ನ ಬೈಕ್‌ಗೆ ಆಟೊ ಡಿಕ್ಕಿ ಹೊಡೆದ ಪರಿಣಾಮ ಮೊಹಮ್ಮದ್ ಜೈನ್ ಎಂಬುವರಿಗೆ ಎಡಗಣ್ಣು, ಕೆನ್ನೆ, ಕೈ ಹಾಗೂ ಕಾಲಿಗೆ ಗಾಯಗಳಾಗಿವೆ. ಗಾಯಾಳುವನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗ ರಾತ್ರಿ 11.58ರ ಸುಮಾರಿಗೆ ಕಾರು ಮತ್ತು ಟಾಟಾ ಇಂಟ್ರಾ ಗೂಡ್ಸ್ ವಾಹನದ ನಡುವೆ ಡಿಕ್ಕಿ ಸಂಭವಿಸಿದೆ. ಎರಡೂ ವಾಹನಗಳ ಮುಂಭಾಗ ಜಖಂಗೊಂಡಿದ್ದು, ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರೂ ಚಾಲಕರು ಪರಸ್ಪರ ದೂರು ನೀಡಿದ್ದು, ಸಂಚಾರ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ.

ನಗರದ ಕಲ್ಲುದೊಡ್ಡಿ ರಸ್ತೆಯ ವಾಜಪೇಯಿ ಬಡಾವಣೆ ಆರ್ಚ್ ಸಮೀಪ ಅ.30ರಂದು ರಾತ್ರಿ ಆಟೊ ಡಿಕ್ಕಿಯಾಗಿ ಹಿರೇಗೌಜ ಗ್ರಾಮದ ವೀರವೇಲು (48) ಗಾಯಗೊಂಡಿದ್ದಾರೆ. ಕೂಲಿ ಹಣ ಪಡೆಯಲು ರಸ್ತೆ ಬದಿ ನಿಂತಿದ್ದ ವೇಳೆ ಈ ಘಟನೆ ನಡೆದಿದೆ.

ನರಸಿಂಹರಾಜಪುರ ತಾಲ್ಲೂಕಿನ ಅಳಲಗೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಂಭಾಗ ಅ.29ರಂದು ಸಂಜೆ ಬೈಕ್ ಡಿಕ್ಕಿಯಾಗಿ 11 ವರ್ಷದ ವಿದ್ಯಾರ್ಥಿನಿ ವನಿತಾ ಗಾಯಗೊಂಡಿದ್ದಾಳೆ. ಆಕೆಯ ಬಲಗಾಲಿಗೆ ಗಾಯವಾಗಿದ್ದು, ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ನರಸಿಂಹರಾಜಪುರಕ್ಕೆ ಕರೆತರಲಾಗಿದೆ.

ಈ ಎಲ್ಲ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಯಾ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿಕೊಂಡು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Four injured in a separate accident

Share

Leave a comment

Leave a Reply

Your email address will not be published. Required fields are marked *

Don't Miss

ವಾಲ್ಮೀಕಿ ರಚಿತ ರಾಮಾಯಣ ಜಗತ್ತಿಗೆ  ಸನ್ಮಾರ್ಗದ ದಾರಿದೀಪ

ಚಿಕ್ಕಮಗಳೂರು:  ಶ್ರೀ ಮಹರ್ಷಿ ವಾಲ್ಮೀಕಿಯವರು ರಚಿಸಿದ ರಾಮಾಯಣ ಮಹಾಕಾವ್ಯವು ಇಡೀ ಜಗತ್ತಿಗೆ ಆದರ್ಶ ಜೀವನ ಮತ್ತು ಸನ್ಮಾರ್ಗದ ದಾರಿ ತೋರಿಸಿದೆ ಎಂದು  ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್. ಮಹೇಶ್...

‘ಪ್ರೇಮದ ಊರಲ್ಲಿ’ ಚಿತ್ರತಂಡಕ್ಕೆ ಚಿಕ್ಕಮಗಳೂರಿನ ಸನ್ಮಾನ

ಚಿಕ್ಕಮಗಳೂರು: ರೈತರ ಬದುಕು, ಕೃಷಿಕರ ಸಂಕಷ್ಟ ಹಾಗೂ ಗ್ರಾಮೀಣ ಬದುಕಿನ ಭಾವನೆಗಳನ್ನು ತೆರೆಮೇಲೆ ಕಟ್ಟಿಕೊಟ್ಟಿರುವ ‘ಪ್ರೇಮದ ಊರಲ್ಲಿ’ ಕನ್ನಡ ಚಲನಚಿತ್ರವು ಯಶಸ್ವಿಯಾಗಿ 25 ದಿನಗಳ ಪ್ರದರ್ಶನ ಪೂರೈಸಿದ್ದು, ಚಿತ್ರತಂಡಕ್ಕೆ ಸೋಮವಾರ ನಗರದ...

Related Articles

ರಾಜ್ಯೋತ್ಸವದಲ್ಲಿ ಕನ್ನಡಕ್ಕೆ ಗೌರವ ನೀಡುವ ಸಂಕಲ್ಪ ಮಾಡೋಣ

ಚಿಕ್ಕಮಗಳೂರು: ಕನ್ನಡ ರಾಜ್ಯೋತ್ಸವದಲ್ಲಿ ನಾವು ಕೆಲವು ಸಂಕಲ್ಪಗಳನ್ನು ಮಾಡೋಣ. ನಮ್ಮ ಮನೆಯಲ್ಲಿ, ಶಾಲೆಯಲ್ಲಿ, ಕಚೇರಿಯಲ್ಲಿ ಮತ್ತು...

ಕಾರು ಡಿಕ್ಕಿಗೆ ಬೈಕ್ ಸವಾರ ಸ್ಥಳದಲ್ಲೇ ಸಾವು

ಕಡೂರು: ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಡೂರು...

ಮಾಕೋನಹಳ್ಳಿ ಗ್ರಾಮದ ಶನೇಶ್ವರ ದೇವಸ್ಥಾನದಲ್ಲಿ ಕಳ್ಳತನ

ಮೂಡಿಗೆರೆ: ದೇವಸ್ಥಾನದ ಬೀಗ ಒಡೆದು ದೇವರ ಬೆಳ್ಳಿ ಆಭರಣಗಳು ಹಾಗೂ ಹುಂಡಿಗಳನ್ನು ಕಳ್ಳತನ ಮಾಡಿರುವ ಘಟನೆ...

ಕನ್ನಡ ರಾಜ್ಯೋತ್ಸವಕ್ಕೆ ಮೆರಗು ತಂದ 21 ಸ್ತಬ್ಧಚಿತ್ರಗಳ ಮೆರವಣಿಗೆ

ಚಿಕ್ಕಮಗಳೂರು: 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದಲ್ಲಿ ಹಮ್ಮಿಕೊಂಡಿದ್ದ ಸುಮಾರು 21 ಸ್ತಬ್ಧಚಿತ್ರಗಳ ಮೆರವಣಿಗೆ ಈ...