Home namma chikmagalur best teacher award:ರಾಜ್ಯಮಟ್ಟದ ಉತ್ತಮ ಶಿಕ್ಷಕ/ಶಿಕ್ಷಕಿ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ಜನ ಶಿಕ್ಷಕರು ಭಾಜನ
namma chikmagalur

best teacher award:ರಾಜ್ಯಮಟ್ಟದ ಉತ್ತಮ ಶಿಕ್ಷಕ/ಶಿಕ್ಷಕಿ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ಜನ ಶಿಕ್ಷಕರು ಭಾಜನ

Share
ರಾಜ್ಯಮಟ್ಟದ ಉತ್ತಮ ಶಿಕ್ಷಕ/ಶಿಕ್ಷಕಿ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ಜನ ಶಿಕ್ಷಕರು ಭಾಜನ
ರಾಜ್ಯಮಟ್ಟದ ಉತ್ತಮ ಶಿಕ್ಷಕ/ಶಿಕ್ಷಕಿ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ಜನ ಶಿಕ್ಷಕರು ಭಾಜನ
Share

ಚಿಕ್ಕಮಗಳೂರು : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ರಾಜ್ಯ ಘಟಕ ಮತ್ತು ವಿಜಯಪುರ ಜಿಲ್ಲಾ ಘಟಕದ ಸಹಯೋಗದಲ್ಲಿ, ಅಕ್ಷರದ ಹರಿಕಾರರಾದ ಸಾವಿತ್ರಿಬಾಯಿ ಫುಲೆ ಮತ್ತು ಜ್ಯೋತಿಬಾ ಪುಲೆ ಹೆಸರಿನಲ್ಲಿ ಕೊಡ ಮಾಡುವ 2024 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ/ಕಿ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ *ರಾಜೇಶ್ವರಿ* ಮತ್ತು ಎನ್ ಆರ್ ಪುರ ಮೋಹಲ್ಲಾ ಕ್ಯಾಂಪಿನ ಉರ್ದು ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ *ಮಹಾ ಜಬೀನಾ* ಅವರು ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಭಾಜನರಾದರು.

ಕಡೂರು ತಾಲೂಕಿನ ದೊಡ್ಡ ಪಟ್ಟಣಗೆರೆ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ *ಸಿ.ಆರ್. ಜಯಣ್ಣ* ಮತ್ತು ಕರೆ ಕಲ್ಲಹಳ್ಳಿ ಕಿರಿಯ ಪ್ರಾರ್ಥಮಿಕ ಶಾಲೆಯ *ಯೋಗೇಶ್ ಹೆಚ್.ಪಿ* ಅವರು ಜ್ಯೋತಿ ಬಾಪುಲೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುರಸ್ಕೃತರಾದರು. ಇತ್ತೀಚಿಗೆ ಉತ್ತರ ಕರ್ನಾಟಕದ ವಿಜಯಪುರದಲ್ಲಿ ಎಕ್ಸಲೆಂಟ್ ಪಿಯು ಕಾಲೇಜ್ ಸಭಾಂಗಣದಲ್ಲಿ ಈ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು, ರಾಜ್ಯದಾದ್ಯಂತ ಒಟ್ಟು ಐವತ್ತು ಶಿಕ್ಷಕ/ ಶಿಕ್ಷಕಿಯರು ಈ ಪ್ರಶಸ್ತಿಗೆ ಭಾಜನರಾಗಿದ್ದು, ಇದರಲ್ಲಿ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ಜನ ಶಿಕ್ಷಕರು ಈ ಗೌರವವನ್ನು ಸ್ವೀಕರಿಸಿದ್ದಾರೆ.

ವಿಜಯಪುರ ಜಿಲ್ಲಾ ಕೆಜೆವಿಎಸ್ ಘಟಕದ ಅಧ್ಯಕ್ಷರಾದ ಜಿ.ಎಸ್.ಕಾಂಬ್ಳೆ ಮತ್ತು ಕಾರ್ಯದರ್ಶಿ ರಮೇಶ್ ನಾಯಕ್ ಹಾಗೂ ಉಪನ್ಯಾಸಕ ಪ್ರೊ. ಶಿವಾನಂದ್ ಕಲ್ಯಾಣಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಈ ಎಲ್ಲ ಪ್ರಶಸ್ತಿ ಪುರಸ್ಕೃತರಿಗೆ ಮತ್ತು ಆಯೋಜಕರಿಗೆ ಚಿಕ್ಕಮಗಳೂರು ಜಿಲ್ಲಾ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಿ.ಎಂ ಮಂಜುನಾಥಸ್ವಾಮಿ ಈ ಮೂಲಕ ಅಭಿನಂದನೆಗಳನ್ನು ತಿಳಿಸಿದ್ದಾರೆ .

Four teachers from Chikkamagaluru district win state-level best teacher award

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...