Home namma chikmagalur chikamagalur ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಕೋಟ್ಯಂತರ ರೂಪಾಯಿ ವಂಚನೆ
chikamagalurCrime NewsHomeLatest Newsnamma chikmagalur

ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಕೋಟ್ಯಂತರ ರೂಪಾಯಿ ವಂಚನೆ

Share
Share

ಚಿಕ್ಕಮಗಳೂರು: ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೋಟ್ಯಂತರ ರೂಪಾಯಿ ವಂಚನೆ ನಡೆದಿರುವ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರದೀಪ್ ಹೆಚ್.ಇ ಎಂಬುವವರು ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದ್ದು, ತಮ್ಮದೇ ಕಂಪನಿಯ ಸಹ-ನಿರ್ದೇಶಕರಾದ ಸಿ.ಹೆಚ್. ಪ್ರದೀಪ್ ಮತ್ತು ಇತರರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ದೂರಿನ ಸಾರಾಂಶದ ಪ್ರಕಾರ, ‘i2e ರಿಟೇಲಿಂಗ್ ಪ್ರೈವೇಟ್ ಲಿಮಿಟೆಡ್’ ಕಂಪನಿಯ ಮೂಲಕ ಚಿಕ್ಕಮಗಳೂರಿನ ನೆಲ್ಲೂರು ಗ್ರಾಮದಲ್ಲಿ ‘ವೆಂಕಟಾದ್ರಿ ಎನ್‌ಪ್ಲೇವ್’ ಎಂಬ ಬಡಾವಣೆಯನ್ನು ನಿರ್ಮಿಸಲಾಗಿತ್ತು. ಕಂಪನಿಯಲ್ಲಿ ಶೇಕಡಾ 50ರಷ್ಟು ಪಾಲು ಹೊಂದಿದ್ದ ಸಿ.ಹೆಚ್. ಪ್ರದೀಪ್ ಅವರಿಗೆ ಬ್ಯಾಂಕ್ ವ್ಯವಹಾರಗಳ ಸಹಿ ಹಾಕುವ ಅಧಿಕಾರ ನೀಡಲಾಗಿತ್ತು.

ಈ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡ ಆರೋಪಿತರು, ಕಂಪನಿಯ ಖಾತೆಯಲ್ಲಿದ್ದ ಸುಮಾರು 2 ಕೋಟಿ 35 ಲಕ್ಷ ರೂಪಾಯಿಗಳನ್ನು ಕಾನೂನುಬಾಹಿರವಾಗಿ ತಮ್ಮ ಹಾಗೂ ತಮ್ಮ ಕುಟುಂಬದವರ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅಲ್ಲದೆ, ಕಂಪನಿಯ ಲೆಕ್ಕಪರಿಶೋಧಕರಾದ ಯಕ್ಕಾರ್ ಅಶ್ವತ್ ಶೇಣೈ ಮತ್ತು ಅಕೌಂಟೆಂಟ್ ಸುನಿಲ್ ಕುಮಾರ್ ಅವರು ಕೂಡ ಈ ವಂಚನೆಯಲ್ಲಿ ಕೈಜೋಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇವರು ಕಂಪನಿಯ ಲೆಕ್ಕಪತ್ರಗಳನ್ನು ತಿದ್ದಿ ಮೋಸ ಎಸಗಿದ್ದಾರೆ ಎಂಬ ವಿಚಾರ ಇತ್ತೀಚೆಗೆ ಬ್ಯಾಂಕ್ ಸ್ಟೇಟ್‌ಮೆಂಟ್ ಪರಿಶೀಲಿಸಿದಾಗ ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ನಂಬಿಕೆ ದ್ರೋಹ, ದಾಖಲೆಗಳ ತಿದ್ದುಪಡಿ ಹಾಗೂ ಹಣಕಾಸಿನ ವಂಚನೆ ಅಡಿಯಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Fraud of crores of rupees in real estate business

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...