Home namma chikmagalur chikamagalur ಜು.5ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ
chikamagalurHomeLatest Newsnamma chikmagalur

ಜು.5ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

Share
Share

ಚಿಕ್ಕಮಗಳೂರು: ಮಲೆನಾಡಿನ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ತಲುಪಿಸುವ ಉದ್ದೇಶದಿಂದ ಆರ್‌ವಿಆರ್ ಹೆಲ್ತ್‌ಕೇರ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜುಲೈ ೫ರಂದು ಆಯೋಜಿಸಲಾಗಿದೆ.

ಶಿಬಿರವು ಬೆಳಿಗ್ಗೆ ೯ ಗಂಟೆಯಿಂದ ನಗರದ ಹಿರೇಮಗಳೂರು ವೃತ್ತದ ಸಮೀಪ, ಕಲ್ಯಾಣ ಮಂಟಪದ ಎದುರು, ಬೆಲೂರು ರಸ್ತೆಯಲ್ಲಿರುವ ಆರ್‌ಸಿ ಕಂಫರ್ಟ್ಸ್ ಕಟ್ಟಡದಲ್ಲಿ ನಡೆಯಲಿದೆ.

ಕರಾವಳಿ ಕರ್ನಾಟಕದಾದ್ಯಂತ ಸಾವಿರಾರು ರೋಗಿಗಳ ವಿಶ್ವಾಸ ಗಳಿಸಿರುವ ಆರ್‌ವಿಆರ್ ಹೆಲ್ತ್‌ಕೇರ್ ತಜ್ಞ ವೈದ್ಯರ ತಂಡ ಈ ಶಿಬಿರದಲ್ಲಿ ಭಾಗವಹಿಸಲಿದ್ದು, ಹಿರಿಯ ನರರೋಗ ತಜ್ಞ ಹಾಗೂ ಸಂಸ್ಥೆಯ ನಿರ್ದೇಶಕರಾದ ಡಾ. (ಪ್ರೊ.) ರಾಘವೇಂದ್ರ ಬಿ.ಎಸ್. ಅವರ ನೇತೃತ್ವದಲ್ಲಿ ವಿವಿಧ ತಜ್ಞ ವೈದ್ಯರು ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ, ವೈದ್ಯಕೀಯ ಸಲಹೆ ಹಾಗೂ ಅಗತ್ಯ ಮಾರ್ಗದರ್ಶನ ನೀಡಲಿದ್ದಾರೆ.
ಶಿಬಿರದಲ್ಲಿ ಕ್ಯಾನ್ಸರ್, ನರರೋಗ ಹಾಗೂ ಸಂಧಿವಾತ ಸಂಬಂಧಿತ ಆರೋಗ್ಯ ಸಮಸ್ಯೆಗಳ ಕುರಿತು ಉಚಿತ ತಪಾಸಣೆ ನಡೆಸಲಾಗುತ್ತದೆ. ಜೊತೆಗೆ ರೋಗದ ಆರಂಭಿಕ ಲಕ್ಷಣಗಳ ಪತ್ತೆ, ಸೂಕ್ತ ಚಿಕಿತ್ಸೆ, ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಜೀವನಶೈಲಿ ಸಂಬಂಧಿತ ಸಲಹೆಗಳನ್ನು ವೈದ್ಯರು ನೀಡಲಿದ್ದಾರೆ.

ಮಲೆನಾಡು ಭಾಗದ ಸಾರ್ವಜನಿಕರು ಈ ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಆರ್‌ವಿಆರ್ ಹೆಲ್ತ್‌ಕೇರ್ ಪ್ರಕಟಣೆಯಲ್ಲಿ ಮನವಿ ಮಾಡಿದೆ.

Free health check-up camp on July 5th

Share

Leave a comment

Leave a Reply

Your email address will not be published. Required fields are marked *

Don't Miss

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ ಕತ್ತರಿಸುತ್ತಿರುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆಗೆ ಒಳಪಡಿಸಿ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೆ.21ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ...

Related Articles

ಪೂನಾ ಒಪ್ಪಂದ ಯಥಾವತ್ತಾಗಿ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಚಿಕ್ಕಮಗಳೂರು:  ದಲಿತ ಸಮುದಾಯದ ಪ್ರಾತಿನಿಧ್ಯ ಹಾಗೂ ಹಕ್ಕುಗಳನ್ನು ಸಂರಕ್ಷಿಸುವ ಉ ದ್ದೇಶದಿಂದ ಪೂನಾ ಒಪ್ಪಂದ ಯಥಾವತ್ತಾಗಿ...

ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಚಿಕ್ಕಮಗಳೂರು ಜಿಲ್ಲಾ ಘಟಕದ ವತಿಯಿಂದ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ...

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ...