ಚಿಕ್ಕಮಗಳೂರು- ಸಮಾಜಮುಖಿ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ ಮಕ್ಕಳ ಆರೋಗ್ಯವೇ ದೇಶದ ಭವಿಷ್ಯ ಎಂಬ ಗುರಿಯೊಂದಿಗೆ ಮಕ್ಕಳಿಗೆ ಉಚಿತ ಹೃದ್ರೋಗ ತಪಾಸಣಾ ಶಿಬಿರ ಆರೋಗ್ಯ ಮೇಳವನ್ನು ಮೇ. ೧೬ ರಂದು ಬೆಳಿಗ್ಗೆ ೧೧ ಗಂಟೆಗೆ ಕೀರ್ತಿ ಕೃಷ್ಣ ಕನ್ವೆಷನ್ ಹಾಲ್‌ನಲ್ಲಿ ಏರ್ಪಡಿಸಲಾಗಿದೆ ಎಂದು ಕಸಾಪ ನಗರ ಘಟಕದ ಅಧ್ಯಕ್ಷೆ ರೂಪನಾಯ್ಕ್ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ತಾಲ್ಲೂಕು ಕಸಾಪ ಮಹಿಳಾ ಘಟಕ, ನಗರ ಘಟಕ, ಕಸಬಾ ಹೋಬಳಿ ಘಟಕ, ಆಶಾಕಿರಣ ಅಂಧಮಕ್ಕಳ ಚಾರಿಟಬಲ್ ಟ್ರಸ್ಟ್ ಮತ್ತು ಆಶ್ರಯ ಫೌಂಡೇಶನ್ ಇವರುಗಳ ಸಂಯುಕ್ತಾಶ್ರಯದಲ್ಲಿ ಈ ಆರೋಗ್ಯ ಮೇಳವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಶಾಕಿರಣ ಅಂಧಮಕ್ಕಳ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಾ. ಜೆ.ಪಿ ಕೃಷ್ಣೇಗೌಡ ವಹಿಸುವರು, ಉದ್ಘಾಟನೆಯನ್ನು ಶಾಸಕ ಹೆಚ್.ಡಿ ತಮ್ಮಯ್ಯ ವಹಿಸುವರು, ಪ್ರಾಸ್ತಾವಿಕವಾಗಿ ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡುವರು, ಮುಖ್ಯ ಅತಿಥಿಗಳಾಗಿ ಜಿಪಂ ಸಿಇಓ ಹೆಚ್.ಎಸ್ ಕೀರ್ತನಾ, ಡಿಹೆಚ್‌ಓ ಡಾ, ಅಶ್ವಥ್ ಬಾಬು, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಮಂಜುನಾಥ್, ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಮ್ಮರಾಜು, ಕಸಾಪ ಪ್ರಧಾನ ಕಾರ್ಯದರ್ಶಿ ಎಸ್.ಎಸ್ ವೆಂಕಟೇಶ್, ನಗರಸಭಾ ಸದಸ್ಯೆ ಉಮಾದೇವಿ ಕೃಷ್ಣ, ವಿಜಯಲಕ್ಷ್ಮೀ ವಿಶ್ವನಾಥ್, ಲೋಕೇಶಪ್ಪ, ವೀಣಾಮಲ್ಲಿಕಾರ್ಜುನ್, ಶ್ರೀಮತಿ ವರ್ಷಾ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಮಕ್ಕಳ ಹೃದಯದ ಆರೋಗ್ಯದ ಬಗ್ಗೆ ಪೋಷಕರಲ್ಲಿ ಜಾಗೃತಿ ಮೂಡಿಸಲು ಹುಟ್ಟಿದ ಮಗುವಿನಿಂದ ೧೬ ವರ್ಷದ ಒಳಗಿನ ಮಕ್ಕಳ ವರೆಗೆ ಈ ಆರೋಗ್ಯ ಮೇಳದಲ್ಲಿ ಅಗತ್ಯ ವೈದ್ಯಕೀಯ ತಪಾಸಣೆಗಳನ್ನು ಉಚಿತವಾಗಿ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಮಕ್ಕಳಲ್ಲಿ ಕಂಡುಬರುವ ಹೃದಯ ಸಂಬಂದಿತ ಸಮಸ್ಯೆಗಳನ್ನು ಪ್ರಾಥಮಿಕ ಹಂತದಲ್ಲೆ ಪತ್ತೆ ಹಚ್ಚಿ ಪೋಷಕರಿಗೆ ಸರಿಯಾದ ಆರೋಗ್ಯ ಮಾಹಿತಿ ನೀಡಲಾಗುವುದು ಹಾಗೂ ಮಕ್ಕಳ ಆರೋಗ್ಯಕರ ಭವಿಷ್ಯ ನಿರ್ಮಾಣ ಮಾಡಲು ನೆರವಾಗುವುದು, ಈ ಶಿಬಿರದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ಸರ್ಕಾರಿ ಮಲ್ಲೇಗೌಡ ಜಿಲ್ಲಾಸ್ಪತ್ರೆಯ ಸಹಕಾರದೊಂದಿಗೆ ಏರ್ಪಡಿಸಲಾಗಿರುವ ಈ ಆರೋಗ್ಯ ಶಿಬಿರದಲ್ಲಿ ಬೆಂಗಳೂರಿನ ವೈದೇಹಿ ಆಸ್ಪತ್ರೆಯ ಖ್ಯಾತ ಮಕ್ಕಳ ತಜ್ಞ ಮತ್ತು ಹೃದ್ರೋಗ ತಜ್ಞರಾದ ಡಾ. ಗೋವಿಂದ ಮತ್ತು ತಂಡದವರು ಮಕ್ಕಳಿಗೆ ಉಚಿತ ತಪಾಸಣೆ ನೆಡೆಸಲಿದ್ದು, ಅಗತ್ಯ ಸಲಹೆ ಮತ್ತು ಮಾರ್ಗದರ್ಶನವನ್ನು ನೀಡಲಿದ್ದಾರೆ ಎಂದು ವಿವರಿಸಿದರು.
ಅಂದು ನೆಡೆಯಲಿರುವ ಉಚಿತ ಹೃದಯ ಆರೋಗ್ಯ ಶಿಬಿರದಲ್ಲಿ ಎಲ್ಲಾ ಪೋಷಕರು ತಮ್ಮ ಮಕ್ಕಳೊಂದಿಗೆ ಆಗಮಿಸಿ ಈ ಸೌಲಭ್ಯದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಮನವಿ ಮಾಡಿದರು. ಈ ಶಿಬಿರದಲ್ಲಿ ಖ್ಯಾತ ಮಕ್ಕಳ ಹೃದ್ರೋಗ ತಜ್ಞರಾದ ಡಾ. ಶ್ರೀಧರ್, ಡಾ ಅನಿಕೇತ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿಜಯಲಕ್ಷ್ಮೀ ವಿಶ್ವನಾಥ್, ಲೋಕೇಶಪ್ಪ, ವೀಣಾಮಲ್ಲಿಕಾರ್ಜುನ್, ರೇಣುಕಾ, ಸುರೇಶ್ ಉಪಸ್ಥಿತರಿದ್ದರು.
Free heart disease check-up camp for children on May 16
Leave a comment