Home namma chikmagalur chikamagalur ಜ.19 ರಿಂದ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
chikamagalurHomeLatest Newsnamma chikmagalur

ಜ.19 ರಿಂದ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Share
Share

ಚಿಕ್ಕಮಗಳೂರು: – ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜನವರಿ ೧೯ ರಿಂದ ೧೩ ದಿನಗಳ ಕಾಲ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರಿಗೆ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಸ್ವಯಂ ಉದ್ಯೋಗಿಗಳಾಗಲು ಬಯಸುವ ೧೮ ರಿಂದ ೫೦ ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳನ್ನು ಶಿಬಿರಾರ್ಥಿಗಳಿಗೆ ಉಚಿತವಾಗಿ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಜನವರಿ ೯ರ ಬೆಳಿಗ್ಗೆ ೧೦ ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವಂತೆ ಸೂಚಿಸಲಾಗಿದೆ. ಸಂದರ್ಶನಕ್ಕೆ ಹಾಜರಾUಲು ಅಸಾಧ್ಯವಾದಲ್ಲಿ ಜ.೯ ರೊಳಗೆ ಸಂಸ್ಥೆಯ ದೂರವಾಣಿ ಸಂಖ್ಯೆ (೮೯೭೦೪೭೬೦೫೦, ೯೫೯೧೫೧೪೧೫೪) ಗಳಿಗೆ ಸಂಪರ್ಕಿಸಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Free sheep and goat farming training from Jan. 19

Share

Leave a comment

Leave a Reply

Your email address will not be published. Required fields are marked *

Don't Miss

ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ ಪತ್ತೆ

ಚಿಕ್ಕಮಗಳೂರು:  ಭದ್ರಾ ಹುಲಿ ಸಂರಕ್ಷಿತ ಪ್ರದೇಶದ,ಹೆಬ್ಬೆ ವಲಯದ ಗಂಗೆಗಿರಿ ಸರ್ವೇ ನಂಬರ್ 15 ರ ಶಿರಗುಳ ಮೀಸಲು ಅರಣ್ಯದಲ್ಲಿ ದಿನಾಂಕ 6ನೆ ತಾರೀಕು ಬೆಳಿಗ್ಗೆ ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ...

ಕಾಫಿ ಕಳ್ಳತನ : ಆರೋಪಿಗಳ ಸೆರೆ- 2 ಕಾರು ವಶ

ಮೂಡಿಗೆರೆ: ತಾಲೂಕಿನ ಗೋಣಿಬೀಡು ಸಮೀಪ ರಂಗಸ್ವಾಮಿ ಅವರ ಕಾಫಿ ತೋಟದಲ್ಲಿ ಕಾಫಿ ಕಳ್ಳತನ ಮಾಡಿದ್ದ ೬ ಮಂದಿ ಆರೋಪಿಗಳನ್ನು ಗೋಣಿಬೀಡು ಪೊಲೀಸರು ಬಂಧಿಸಿ, ಸುಮಾರು ೩.೫೦ ಲಕ್ಷ ರೂ ಮೌಲ್ಯದ ಕಾಫಿ...

Related Articles

ವಾಯುಭಾರ ಕುಸಿತದ ಪರಿಣಾಮ ಜಿಲ್ಲೆಯಲ್ಲಿ ಸಾಧಾರಣ ಮಳೆ ಸಾಧ್ಯತೆ

ಚಿಕ್ಕಮಗಳೂರು: ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಮೋಡಕವಿದ ವಾತಾವರಣವಿದ್ದು, ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ...

ಕಾಫಿನಾಡಿನ ಗಿರಿಭಾಗದಲ್ಲಿ ದಟ್ಟ ಮಂಜು

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸೂರ್ಯನ ದರ್ಶನವೇ ಇಲ್ಲದಂತಾಗಿದ್ದು, ಥಂಡಿ ವಾತಾವರಣ ಉಂಟಾಗಿದ್ದು,...

ಜಿಎಸ್‌ಬಿ ಯಿಂದ ಸಂಕ್ರಾಂತಿ ಸಂಭ್ರಮ

ಚಿಕ್ಕಮಗಳೂರು: ಸಂಕ್ರಾಂತಿ ಹಿನ್ನೆಲೆಯಲ್ಲಿ ಗೌಡಸಾರಸ್ವತ ಬ್ರಾಹ್ಮಣ ಸಮಾಜದಿಂದ ನಡೆಯುವ ಕೇಳ್ ಮೇಳ್ ಸಾಂಸ್ಕೃತಿಕ ಕಾರ್ಯಕ್ರಮ ನಗರದಲ್ಲಿ...

ಗಾಳಿಪಟ ಹಾರಾಟಕ್ಕೆ ಮನಸೋತ ಜನ

ಚಿಕ್ಕಮಗಳೂರು: ಆಕಾಶದಲ್ಲಿ ಹಾರುತ್ತಿದ್ದ ಹುಲಿ, ಜಿಂಕೆ, ಆನೆ, ಸಿಂಹ, ಚಿಟ್ಟೆಗಳು, ಪಕ್ಷಿಗಳು, ಗಿಡಮರಗಳು ಸೇರಿದಂತೆ ವಿವಿಧ...