Home namma chikmagalur chikamagalur ಫ್ರೀಲಾನ್ಸ್ ಕೆಲಸದ ಆಮಿಷ-9 ಲಕ್ಷ ರೂ. ವಂಚನೆ
chikamagalurHomeLatest Newsnamma chikmagalur

ಫ್ರೀಲಾನ್ಸ್ ಕೆಲಸದ ಆಮಿಷ-9 ಲಕ್ಷ ರೂ. ವಂಚನೆ

Share
Share

ಚಿಕ್ಕಮಗಳೂರು: ಫ್ರೀಲಾನ್ಸ್ ಕೆಲಸದ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 8,56,723 ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತ ಸೈಯದ್ ಅಂಜುಮ್ ಅವರು ಫೇಸ್‌ಬುಕ್‌ನಲ್ಲಿ ಪಾರ್ಟ್ ಟೈಮ್ ಉದ್ಯೋಗ ಹುಡುಕುತ್ತಿದ್ದಾಗ ‘ದ ರಿಟ್ಸ್ ಕಾರ್ಲ್ಟನ್’ ಹೆಸರಿನ ನಕಲಿ ಲಿಂಕ್ ಮೂಲಕ ವಂಚಕರ ಜಾಲಕ್ಕೆ ಸಿಲುಕಿದ್ದಾರೆ.

ಟೆಲಿಗ್ರಾಂನಲ್ಲಿ ಕೀರ್ತನಾ ಎಂಬ ಹೆಸರಿನಿಂದ ಪರಿಚಯಿಸಿಕೊಂಡ ವ್ಯಕ್ತಿಯು ಹೋಟೆಲ್ ರೂಮ್ ಬುಕಿಂಗ್ ಮಾಡಿದರೆ ಹೆಚ್ಚಿನ ಕಮಿಷನ್ ನೀಡುವುದಾಗಿ ನಂಬಿಸಿ, ಹಂತ ಹಂತವಾಗಿ ಹಣವನ್ನು ಡೆಪಾಸಿಟ್ ಮಾಡಿಸಿಕೊಂಡಿದ್ದಾರೆ.

ತಾನು ಹೂಡಿಕೆ ಮಾಡಿದ ಹಣವನ್ನು ಹಿಂಪಡೆಯಲು ಪ್ರಯತ್ನಿಸಿದಾಗ, ಖಾತೆಯ ಸೆಕ್ಯೂರಿಟಿ ಕಾರಣ ನೀಡಿ ಮತ್ತೆ 6,68,280 ರೂಪಾಯಿ ಪಾವತಿಸುವಂತೆ ವಂಚಕರು ಒತ್ತಾಯಿಸಿದ್ದಾರೆ. ಇದರಿಂದ ಅನುಮಾನಗೊಂಡ ಸಂತ್ರಸ್ತರು ತಾವು ಮೋಸ ಹೋಗಿರುವುದನ್ನು ಅರಿತು ತಕ್ಷಣ ಪೊಲೀಸರ ಮೊರೆ ಹೋಗಿದ್ದಾರೆ.

ಈ ಸಂಬಂಧ ಸೆನ್ ಪೊಲೀಸ್ ಠಾಣೆಯ ಅಧಿಕಾರಿಗಳು ದೂರು ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ. ಸಾರ್ವಜನಿಕರು ಇಂತಹ ಅಪರಿಚಿತ ಲಿಂಕ್‌ಗಳು ಹಾಗೂ ಅತಿಯಾದ ಲಾಭದ ಆಮಿಷ ತೋರಿಸುವ ಆನ್‌ಲೈನ್ ಕೆಲಸಗಳ ಬಗ್ಗೆ ಎಚ್ಚರದಿಂದಿರಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ.

Freelance work lured – Rs 9 lakh fraud

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....