Home namma chikmagalur chikamagalur ಗಾಣದಾಳು ವಿದ್ಯುತ್ ಉಪಕೇಂದ್ರ ಕಾಮಗಾರಿ ಪೂರ್ಣ
chikamagalurHomeLatest Newsnamma chikmagalur

ಗಾಣದಾಳು ವಿದ್ಯುತ್ ಉಪಕೇಂದ್ರ ಕಾಮಗಾರಿ ಪೂರ್ಣ

Share
Share

ಚಿಕ್ಕಮಗಳೂರು: ತಾಲೂಕಿನ ಗಾಣದಾಳು ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ನಿರ್ಮಿಸಲಾಗಿರುವ ವಿದ್ಯುತ್ ಉಪಕೇಂದ್ರದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಪರೀಕ್ಷಾರ್ಥ ಕಾರ್ಯಾಚರಣೆ ನಡೆಯುತ್ತಿದೆ. ಶೀಘ್ರದಲ್ಲೇ ಜಿಲ್ಲಾ ಉಸ್ತುವಾರಿ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಂದ ಉಪಕೇಂದ್ರವನ್ನು ಲೋಕಾರ್ಪಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಬುಧವಾರ ಗಾಣದಾಳು ಉಪಕೇಂದ್ರಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, 2023ರ ಡಿಸೆಂಬರ್‌ನಲ್ಲಿ ಕಾಮಗಾರಿಗೆ ಎಲ್‌ಒಇ ನೀಡಲಾಗಿದ್ದು, 20 ತಿಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿತ್ತು. ಭೂಮಿ ಸ್ವಾಧೀನ, ವಿದ್ಯುತ್ ಮಾರ್ಗ ನಿರ್ಮಾಣಕ್ಕೆ ರೈತರ ಸಹಕಾರ ಪಡೆಯುವುದು ಸೇರಿದಂತೆ ವಿವಿಧ ಕಾರಣಗಳಿಂದ ಕಾಮಗಾರಿ ವಿಳಂಬವಾಗಿತ್ತು ಎಂದು ತಿಳಿಸಿದರು.

ರೈತರ ಮನವೊಲಿಸಿ, ಸರ್ಕಾರ ನಿಗದಿಪಡಿಸಿದ ನಿಯಮಾನುಸಾರ ಪರಿಹಾರ ನೀಡಲಾಗಿದೆ. ಅರಣ್ಯ ಇಲಾಖೆಯಿಂದ ಪಡೆಯಬೇಕಿದ್ದ ಅನುಮತಿಯೂ ದೊರೆತಿದ್ದು, ಇದೀಗ ಉಪಕೇಂದ್ರದ ಅಂತಿಮ ಹಂತದ ಕಾಮಗಾರಿಗಳು ಹಾಗೂ ಪರೀಕ್ಷಾರ್ಥ ಕಾರ್ಯಾಚರಣೆ ನಡೆಯುತ್ತಿವೆ ಎಂದು ಹೇಳಿದರು.

ಗಾಣದಾಳು ಉಪಕೇಂದ್ರ ನಿರ್ಮಾಣಕ್ಕೆ ಸುಮಾರು ₹14 ಕೋಟಿ ವೆಚ್ಚವಾಗಿದ್ದು, ಇದು ಈ ಭಾಗದ ವಿದ್ಯುತ್ ಸಮಸ್ಯೆ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಗಾಣದಾಳು ಮತ್ತು ಬೆಳವಾಡಿ ಭಾಗದಲ್ಲಿ ಮತ್ತಷ್ಟು ವಿದ್ಯುತ್ ಮೂಲಸೌಕರ್ಯ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.

ಮಲ್ಲಂದೂರು ಭಾಗದಲ್ಲಿ ಸುಮಾರು ₹24 ಕೋಟಿ ವೆಚ್ಚದ ವಿದ್ಯುತ್ ಕಾಮಗಾರಿಗೆ ಈಗಾಗಲೇ ಗುದ್ದಲಿಪೂಜೆ ನೆರವೇರಿಸಲಾಗಿದ್ದು, ಸುಮಾರು ಆರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಉದ್ದೇಶವಿದೆ. ಬೆಳವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋವಿಂದಪುರದಲ್ಲಿ ಎರಡು ಎಕರೆ ಜಾಗದಲ್ಲಿ ಮತ್ತೊಂದು ಉಪಕೇಂದ್ರ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು, ಶೀಘ್ರದಲ್ಲೇ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.

ನಿಡಗಲ್ ಹಾಗೂ ಕಳಸಾಪುರ ಭಾಗದಲ್ಲಿಯೂ ವಿದ್ಯುತ್ ವ್ಯವಸ್ಥೆ ಬಲಪಡಿಸಲು ಸುಮಾರು ₹18 ಕೋಟಿ ವೆಚ್ಚದ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗಿದೆ. ಈ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಚಿಕ್ಕಮಗಳೂರು ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ವಿದ್ಯುತ್ ಸಮಸ್ಯೆ ಮತ್ತಷ್ಟು ಸುಧಾರಿಸಲಿದೆ ಎಂದರು.

ಸಕ್ಕರಪಟ್ಟಣ ಹೋಬಳಿಗೆ 200 ಮೆಗಾವ್ಯಾಟ್ ಉಪಕೇಂದ್ರ

ಸಕ್ಕರಪಟ್ಟಣ ಹೋಬಳಿಯ ಹೊಸಹಳ್ಳಿ ಭಾಗದಲ್ಲಿ 200 ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಸುಮಾರು ₹75 ಕೋಟಿ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಶೀಘ್ರದಲ್ಲೇ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದು ಎಂದು ಶಾಸಕ ತಮ್ಮಯ್ಯ ಹೇಳಿದರು.

ರೈತರಿಗೆ ಯಾವುದೇ ಪಕ್ಷ ಅಥವಾ ಜಾತಿಯ ಭೇದವಿಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲಿ ಮಂಜೂರಾದ ಯೋಜನೆಗಳಾಗಿದ್ದರೂ, ಅವುಗಳನ್ನು ಪೂರ್ಣಗೊಳಿಸಿ ಜನರಿಗೆ ಸೇವೆ ನೀಡುವುದು ಜನಪ್ರತಿನಿಧಿಗಳ ಕರ್ತವ್ಯ. ಯೋಜನೆ ಯಾವಾಗ ಮಂಜೂರಾಯಿತು ಎಂಬುದಕ್ಕಿಂತ ಅದು ಯಾವಾಗ ಜನರಿಗೆ ಉಪಯೋಗವಾಗುತ್ತದೆ ಎಂಬುದು ಮುಖ್ಯ ಎಂದು ಅವರು ಹೇಳಿದರು.

ಬರಗಾಲ ಎದುರಿಸಲು ಸಿದ್ಧತೆ

ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದೆ. ಮಲೆನಾಡಿನಲ್ಲಿಯೇ ಕೆರೆಗಳು ತುಂಬದ ಪರಿಸ್ಥಿತಿ ನಿರ್ಮಾಣವಾಗಿರುವುದು ಆತಂಕಕಾರಿ. ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಸಮಸ್ಯೆ ಉಂಟಾಗದಂತೆ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲಾ ಉಸ್ತುವಾರಿ ಸಚಿವರು ಬರ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಟಾಸ್ಕ್‌ಫೋರ್ಸ್ ಸಭೆಯನ್ನೂ ನಡೆಸಲಾಗಿದೆ. ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಶಾಸಕ ತಮ್ಮಯ್ಯ ಹೇಳಿದರು.

ರಾಜ್ಯದಲ್ಲಿ ವಿದ್ಯುತ್ ಕೊರತೆ ನಿವಾರಣೆಗೆ ವಿವಿಧ ರಾಜ್ಯಗಳೊಂದಿಗೆ ಮಾಡಿಕೊಂಡಿರುವ ವಿದ್ಯುತ್ ವಿನಿಮಯ ವ್ಯವಸ್ಥೆಯ ಅವಧಿ ಸೆಪ್ಟೆಂಬರ್ 30ಕ್ಕೆ ಮುಕ್ತಾಯವಾಗಲಿದೆ. ಬಳಿಕ ಜಾರ್ಖಂಡ್ ಹಾಗೂ ಹರಿಯಾಣದಿಂದ ರಾಜ್ಯಕ್ಕೆ ವಿದ್ಯುತ್ ಲಭ್ಯವಾಗುವ ವ್ಯವಸ್ಥೆ ಇರುವುದರಿಂದ ರಾಜ್ಯದ ವಿದ್ಯುತ್ ಸಮಸ್ಯೆ ಸುಧಾರಿಸುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದರು.

ಭದ್ರಾ ಉಪಕಣಿವೆ, ರಣಘಟ್ಟ ಯೋಜನೆಗೂ ವೇಗ

ಭದ್ರಾ ಉಪಕಣಿವೆ ಯೋಜನೆಯ ಮೂರನೇ ಹಂತಕ್ಕೆ ಆಡಳಿತಾತ್ಮಕ ಅನುಮೋದನೆ ಮತ್ತು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿ ನಡೆಯುತ್ತಿದೆ. ರಣಘಟ್ಟ ಯೋಜನೆಯನ್ನೂ ಸಾಧ್ಯವಾದಷ್ಟು ಶೀಘ್ರ ಪೂರ್ಣಗೊಳಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಮ್ಮಯ್ಯ ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ಗಾಣದಾಳು ಉಪಕೇಂದ್ರ ನಿರ್ಮಾಣದಿಂದ ಈ ಭಾಗದ ರೈತರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ವಿದ್ಯುತ್ ಕಡಿತದ ಸಮಸ್ಯೆ ಎದುರಿಸುತ್ತಿದ್ದ ಪ್ರದೇಶಗಳಿಗೆ ಉಪಕೇಂದ್ರದಿಂದ ಪರಿಹಾರ ದೊರೆಯಲಿದೆ ಎಂದರು.

ಮಲ್ಲೇನಹಳ್ಳಿ, ಕಳಸಾಪುರ ಸೇರಿದಂತೆ ವಿವಿಧ ಭಾಗಗಳಲ್ಲಿ ವಿದ್ಯುತ್ ಮೂಲಸೌಕರ್ಯ ಬಲಪಡಿಸುವ ಕಾಮಗಾರಿಗಳು ನಡೆಯುತ್ತಿವೆ. ಹಿಂದಿನ ಸರ್ಕಾರವಾಗಲಿ, ಈಗಿನ ಸರ್ಕಾರವಾಗಲಿ ಜನರಿಗಾಗಿ ಮಂಜೂರು ಮಾಡಿದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವುದು ಎಲ್ಲರ ಜವಾಬ್ದಾರಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ. ಮಂಜೇಗೌಡ, ಸ್ಥಳೀಯ ಮುಖಂಡರು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Ganadalu power substation work is complete

Share

Leave a comment

Leave a Reply

Your email address will not be published. Required fields are marked *

Don't Miss

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಮನಕಲಕುವ ಘಟನೆ ನಡೆದಿದೆ. ಮೂಡಿಗೆರೆ ಕಡೆಗೆ ತೆರಳುತ್ತಿದ್ದ...

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಚಿನ್ನದ ಸರ ಕನ್ನತನ

ಚಿಕ್ಕಮಗಳೂರು: ಸಂಭ್ರಮದಿಂದ ಬಂಧುಗಳ ಮದುವೆ ಮುಗಿಸಿಕೊಂಡು ನೆಮ್ಮದಿಯಾಗಿ ಮನೆ ಕಡೆ ಹೆಜ್ಜೆ ಹಾಕುತ್ತಿದ್ದ ಮಹಿಳೆಯೊಬ್ಬರಿಗೆ ಮಾರ್ಗಮಧ್ಯದಲ್ಲೇ ಕಳ್ಳರು ಬಿಗ್ ಶಾಕ್ ನೀಡಿದ್ದಾರೆ. ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬೈಕ್‌ನಲ್ಲಿ ಬಂದ...

Related Articles

ಚುನಾವಣಾ ಆಯೋಗದ ವಿರುದ್ಧ ಪ್ರಜಾಪ್ರಭುತ್ವದ ಹಿತದೃಷ್ಟಿಯಿಂದ ಜವಾಬ್ದಾರಿಯುತ ನಡೆ ಅಗತ್ಯ

ಚಿಕ್ಕಮಗಳೂರು: ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳು ಮಾಡುತ್ತಿರುವ ಆರೋಪಗಳು ಮತ್ತು ಟೀಕೆಗಳು...

ಮತದಾರರ ಮತಪಟ್ಟಿಯಿಂದ ಹೊರಗಿಡುವವರ ವಿರುದ್ಧ ಕ್ರಮ ಕೈಗೊಳ್ಳಿ

ಚಿಕ್ಕಮಗಳೂರು: ಮತದಾರರ ಪಟ್ಟಿಯಿಂದ ಮತದಾರರನ್ನು ಕೈ ಬಿಡುವ ಚಟುವಟಿಕೆ ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ನಡೆಯುತ್ತಿದ್ದು, ಇಂಥ ದು?ತ್ಯ...

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ-ನಗದು ಕಳವು

ಕೊಪ್ಪ: ಮನೆ ಮಾಲೀಕರು ಇಲ್ಲದ ಸಮಯ ನೋಡಿ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಖದೀಮರು ಲಕ್ಷಾಂತರ...

ಮೊಬೈಲ್ ಫೋನ್ ಹೈಕ್‌ – ಲಕ್ಷಾಂತರ ರೂಪಾಯಿ ಹಣ ವಂಚನೆ

ಚಿಕ್ಕಮಗಳೂರು: ಬಸ್‌ನಲ್ಲಿ ಪ್ರಯಾಣಿಸುವ ವೇಳೆ ಕಳೆದುಹೋದ ಮೊಬೈಲ್ ಫೋನ್ ದುರುಪಯೋಗಪಡಿಸಿಕೊಂಡು, ಬ್ಯಾಂಕ್ ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿ...