Home Crime News ಬೀರೂರಿನಲ್ಲಿ ಗಾಂಜಾ ವಶ – ಆರೋಪಿ ಬಂಧನ
Crime NewsHomeKadurLatest Newsnamma chikmagalur

ಬೀರೂರಿನಲ್ಲಿ ಗಾಂಜಾ ವಶ – ಆರೋಪಿ ಬಂಧನ

Share
Share
ಬೀರೂರು: ಬೀರೂರು ಪಟ್ಟಣದ ಎಪಿಎಂಸಿ ಆವರಣದಲ್ಲಿ ಶನಿವಾರ ದಾಳಿ ನಡೆಸಿದ ಪೊಲೀಸರು, ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ಆತನಿಂದ ₹3 ಸಾವಿರ ಮೌಲ್ಯದ 240 ಗ್ರಾಂ. ಗಾಂಜಾ ವಶಪಡಿಸಿಕೊಂಡಿದ್ದಾರೆ.

ಅಪರಿಚಿತ ವ್ಯಕ್ತಿಯೊಬ್ಬ ಎಪಿಎಂಸಿ ಆವರಣದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಬೀರೂರು ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಡಿ.ವಿ. ತಿಪ್ಪೇಶ್‌ ಅವರು ಇಲಾಖೆಯ ಸಿಬ್ಬಂದಿ, ಪುರಸಭೆಯ ಇಬ್ಬರು ನೌಕರರು ಹಾಗೂ ಪಶು ವೈದ್ಯಾಧಿಕಾರಿಗಳ ತಂಡ ರಚಿಸಿ, ದಾಳಿ ನಡೆಸಿದಾಗ ತರೀಕೆರೆ ತಾಲ್ಲೂಕು ಮುಂಡ್ರೆ ತಾಂಡ್ಯ ವಾಸಿ ರಘು.ಎಂ ಎಂಬಾತ ಗಾಂಜಾ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ.

ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಂದ ವ್ಯಕ್ತಿಯಿಂದ ಈ ಸರಕು ಪಡೆದಿದ್ದು, ಹೆಚ್ಚಿನ ಆದಾಯ ಗಳಿಸಲು ಈ ಕಸುಬಿಗೆ ಬಂದಿದ್ದೇನೆ. ನನಗೆ ಗಾಂಜಾ ನೀಡಿದ ವ್ಯಕ್ತಿಯ ಪರಿಚಯ ಇಲ್ಲ ಎಂದು ಆರೋಪಿ ಹೇಳಿದ್ದ. ಆರೋಪಿಯಿಂದ 240 ಗ್ರಾ. ಗಾಂಜಾ, ಸ್ಕೂಟರ್‌ ಹಾಗೂ ₹500 ಹಣವನ್ನು ವಶಕ್ಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ಗಳಾದ ಶಿವಾನಂದ್‌, ಓಂಕಾರಸ್ವಾಮಿ, ಯತೀಶ್‌, ಜೀಪ್‌ ಚಾಲಕ ಚಂದ್ರನಾಯ್ಕ ಮತ್ತು ಪುರಸಭೆ ನೌಕರರಾದ ಕರಿಯಪ್ಪ, ಲೋಕೇಶಪ್ಪ ಹಾಗೂ ಪಶು ವೈದ್ಯಾಧಿಕಾರಿ ಮೋಹನ್‌ ಕುಮಾರ್‌ ಭಾಗವಹಿಸಿದ್ದರು.

Ganja seized in Birur – accused arrested

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...