Home namma chikmagalur chikamagalur ಮರು ಮತ ಎಣಿಕೆಯಲ್ಲಿ ಗಾಯತ್ರಿ ಶಾಂತೇಗೌಡಗೆ 9 ಮತಗಳ ಗೆಲವು
chikamagalurHomeLatest Newsnamma chikmagalur

ಮರು ಮತ ಎಣಿಕೆಯಲ್ಲಿ ಗಾಯತ್ರಿ ಶಾಂತೇಗೌಡಗೆ 9 ಮತಗಳ ಗೆಲವು

Share
Share

ಚಿಕ್ಕಮಗಳೂರು:  ಚಿಕ್ಕಮಗಳೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದ ಮಹತ್ವದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದೆ. ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಅವರಿದ್ದ ಏಕಸದಸ್ಯ ಪೀಠ, ಮರು ಮತ ಎಣಿಕೆ ಫಲಿತಾಂಶವನ್ನು ಪ್ರಕಟಿಸಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರು 9 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಘೋಷಿಸಿದೆ.

2021ರ ಡಿಸೆಂಬರ್‌ನಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಎಂ.ಕೆ. ಪ್ರಾಣೇಶ್ ಅವರು 1,188 ಮತಗಳನ್ನು ಪಡೆದು, ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರನ್ನು ಕೇವಲ 6 ಮತಗಳ ಅಂತರದಿಂದ ಸೋಲಿಸಿದ್ದರು. ಗಾಯತ್ರಿ ಶಾಂತೇಗೌಡ ಅವರು 1,182 ಮತಗಳನ್ನು ಪಡೆದಿದ್ದರು.

ಆದರೆ, ಕೊಪ್ಪ, ನರಸಿಂಹರಾಜಪುರ, ಶೃಂಗೇರಿ ಹಾಗೂ ಮೂಡಿಗೆರೆ ಪಟ್ಟಣ ಪಂಚಾಯಿತಿಗಳ ನಾಮನಿರ್ದೇಶಿತ ಸದಸ್ಯರು ಮತದಾನಕ್ಕೆ ಅರ್ಹರಲ್ಲದಿದ್ದರೂ ಮತ ಚಲಾಯಿಸಿದ್ದಾರೆ ಎಂದು ಆರೋಪಿಸಿ ಗಾಯತ್ರಿ ಶಾಂತೇಗೌಡ ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಚುನಾವಣಾ ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ವೇಳೆ ಹೈಕೋರ್ಟ್ ಆದೇಶದಂತೆ ಮರು ಮತ ಎಣಿಕೆ ನಡೆಸಲಾಗಿತ್ತು. ಬಳಿಕ ಸುಪ್ರೀಂ ಕೋರ್ಟ್ ಕೂಡ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿತ್ತು. ಅಂತಿಮ ವಿಚಾರಣೆಯ ನಂತರ ಇಂದು ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಅವರು ಮರು ಮತ ಎಣಿಕೆ ಫಲಿತಾಂಶವನ್ನು ಪ್ರಕಟಿಸಿ, ಗಾಯತ್ರಿ ಶಾಂತೇಗೌಡ ಅವರು 9 ಮತಗಳ ಅಂತರದಿಂದ ವಿಜೇತರಾಗಿದ್ದಾರೆ ಎಂದು ಘೋಷಿಸಿದರು.

ಇದರೊಂದಿಗೆ ಎಂ.ಕೆ. ಪ್ರಾಣೇಶ್ ಅವರ ಆಯ್ಕೆಯನ್ನು ಅಮಾನ್ಯಗೊಳಿಸಿ, ಚಿಕ್ಕಮಗಳೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾಗಿ ಗಾಯತ್ರಿ ಶಾಂತೇಗೌಡ ಅವರನ್ನು ಹೈಕೋರ್ಟ್ ಘೋಷಿಸಿದೆ.

ಹೈಕೋರ್ಟ್ ತೀರ್ಪಿನಿಂದ ಜಿಲ್ಲೆಯ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಪ್ರತಿನಿಧಿತ್ವದಲ್ಲಿ ಬದಲಾವಣೆ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮಗಳತ್ತ ಈಗ ಎಲ್ಲರ ಗಮನ ನೆಟ್ಟಿದೆ.

Gayatri Shantegowda wins by 9 votes in recount

Share

Leave a comment

Leave a Reply

Your email address will not be published. Required fields are marked *

Don't Miss

ಇಂದಿನಿಂದ ಜಿಲ್ಲೆಯಲ್ಲಿ ಸಂಘಟನ್ ಸೃಜನ ಅಭಿಯಾನ

ಚಿಕ್ಕಮಗಳೂರು: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ತೀರ್ಮಾನದಂತೆ ದೇಶದಾದ್ಯಂತ ‘ಸಂಘಟನ್ ಸೃಜನ ಅಭಿಯಾನ’ ನಡೆಸುತ್ತಿದ್ದು, ಜಿಲ್ಲೆಯಲ್ಲೂ ಇಂದಿನಿಂದ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಎಐಸಿಸಿ ಮಾಜಿ ಕಾರ್ಯದರ್ಶಿ, ಗುಜರಾತ್ ಉಸ್ತುವಾರಿ ಬಿಶ್ವರಂಜನ್ ಮೊಹಾಂತಿ...

ಮುಂದುವರಿದ ಟಿ.ಡಿ.ರಾಜೇಗೌಡ-ಗೊಂದಲದಲ್ಲಿ ಗಾಯಿತ್ರಿ ?

ಚಿಕ್ಕಮಗಳೂರು: ಶಾಸಕ ಟಿ.ಡಿ.ರಾಜೇಗೌಡ v/s ಮಾಜಿ ಶಾಸಕ ಡಿ.ಎನ್.ಜೀವರಾಜ್ ಮಧ್ಯೆ ನಡೆದಿರುವ ಶಾಸಕ ಸ್ಥಾನನ ಪೈಪೋಟಿಯಲ್ಲಿ ಸದ್ಯಕ್ಕೆ ಟಿ.ಡಿ.ರಾಜೇಗೌಡರ ಕೈ ಮೇಲಾಗಿದೆ.ಸುಪ್ರೀಂ ಕೋರ್ಟ್ ಜುಲೈ ತಿಂಗಳವರೆಗೆ ರಾಜೇಗೌಡ ಶಾಸಕ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ...

Related Articles

ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ಗುಡ್ಡ ಕುಸಿತ

ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ತಪ್ಪಲು ಹಾಗೂ ರಾಜ್ಯದ ಅತಿ ಎತ್ತರದ ಶಿಖರ ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ...

ಜಿಲ್ಲೆಯಲ್ಲಿ SIR ಪರಿಷ್ಕರಣೆಯಲ್ಲಿ 8,54,852 ನಮೂನೆಗಳ ಡಿಜಿಟಲೀಕರಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲಾಧಿಕಾರಿ ಹಾಗೂ...

ಎನ್‌ಆರ್‌ಪುರ, ಶೃಂಗೇರಿ – ಕೊಪ್ಪ ತಾಲ್ಲೂಕಿನ ಶಾಲೆಗಳಿಗೆ ಇಂದು ರಜೆ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ, ಪ್ರವಾಹ ಹಾಗೂ ಭೂಕುಸಿತದ...

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂರು ಹಸುಗಳು ಸಾವು

ಕಳಸ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಮೂರು ಹಸುಗಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ...