ಚಿಕ್ಕಮಗಳೂರು: ಕುವೆಂಪು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಶನಿವಾರ ಐಡಿ ಎಸ್‌ಜಿ ಕಾಲೇಜಿನಲ್ಲಿ ನಡೆದ ಅಂತರ ಕಾಲೇಜು ಕಬಡ್ಡಿ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಕುವೆಂಪು ಯೂ ನಿವರ್ಸಿಟಿ ಜ್ಞಾನ ಸಹ್ಯಾದ್ರಿ ಶಂಕರಘಟ್ಟ ತಂಡವು ಪ್ರಥಮ ಸ್ಥಾನ ಗಳಿಸುವ ಮೂಲಕ ವಿಜಯಮಾಲೆ ಮುಡಿ ಗೇರಿಸಿಕೊಂಡಿತು.
ಸಾಗರದ ಎಲ್.ಬಿ ಮತ್ತು ಎಸ್.ಬಿ.ಎಸ್. ತಂಡ ದ್ವಿತೀಯ ಹಾಗೂ ಶಿವಮೊಗ್ಗ ಯು.ಸಿ.ಪಿ.ಇ. ಶಂ ಕರಘಟ್ಟ ತಂಡವು ತೃತೀಯ ಪಡೆದುಕೊಂಡಿತು. ಕುವೆಂಪು ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಎನ್. ಡಿ.ವಿರೂಪಾಕ್ಷ ಹಾಗೂ ಐಡಿಎಸ್‌ಜಿ ಪ್ರಾಂಶುಪಾಲೆ ತಸನಿಮ್ ಕೌಸರ್ ಮನಿಯಾರ್ ವಿಜೇತ ತಂಡ ಗಳಿಗೆ ಬಹುಮಾನ ವಿತರಿಸಿದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಬೋಜೇಗೌಡ ಮಾತನಾಡಿ ಕ್ರೀಡೆಯನ್ನು ಪ್ರತಿನಿತ್ಯ ಅಭ್ಯಾಸ ಮಾಡುವುದರ ಜೊತೆಗೆ ಜಾಗರೂಕತೆಯಿಂದ ಆಟವಾಡಿ ತಮ್ಮ ಗುರಿ ಮುಟ್ಟಬೇಕೆಂದು ತಿಳಿಸಿ, ಇತ್ತೀಚಿನ ಒತ್ತಡದ ಬದುಕಿನಲ್ಲಿ ಮನುಷ್ಯನ ಮಾನಸಿಕ ಆರೋಗ್ಯ ಬಹಳ ಮುಖ್ಯವಾಗಿ ಬೇಕಾಗಿದೆ ದೇಹದ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ಓದು ಇನ್ನಿತರೆ ಕೆಲಸಗಳಲ್ಲಿ ನಿರೀಕ್ಷಿತ ಫಲಿತಾಂಶ ಪಡೆಯಲು ಒತ್ತಡದಿಂದ ಹೊರ ಬರುವುದು ಮುಖ್ಯ ಎಂದ ಅವರು ಕ್ರೀಡಾ ಚಟುವಟಿಕೆಗಳಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ಮಾನಸಿಕ ಒತ್ತಡಗಳಿಂದ ಹೊರಬಂದು ದೇಹದ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಸಹಕಾರಿಯಾಗಲಿದೆ ಎಂದರು.
ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಶರತ್ ಅನಂತ್ ಮೂರ್ತಿ ಮಾತನಾಡಿ ನಮ್ಮ ನಾಡಿನ ಕ್ರೀಡೆಗಳಲ್ಲಿ ಒಂದಾದ ಕಬ್ಬಡಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ, ಎಲ್ಲಾ ಆಟಗಳಿಗಿಂತ ಮುಂಚೂಣಿಯಲ್ಲಿರುವ ಕಬ್ಬಡಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ದೋರೆಯುತ್ತಿರುವುದು ಸಂತೋಷದ ವಿಷಯವಾಗಿದೆ ಎಂದ ಅವರು ಕ್ರೀಡೆಯಲ್ಲಿ ಭಾಗವಹಿಸುತ್ತಿರುವ ಎಲ್ಲಾ ಕ್ರೀಡಾಪಟುಗಳಿಗೆ ಅಭಿನಂಧನೆ ಸಲ್ಲಿಸಿದರು.
ಬಳಿಕ ಕುವೆಂಪು ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಎನ್.ಡಿ.ವಿರೂಪಾಕ್ಷ ಮಾತನಾಡಿ ಎರಡು ದಿನಗಳ ಕಬಡ್ಡಿ ಪಂದ್ಯಾವಳಿ ಕಾಲೇಜು ಆಡಳಿತ ಅಚ್ಚುಕಟ್ಟಿನಿಂದ ಸುವ್ಯವಸ್ಥಿತವಾಗಿ ನಡೆಸಿದೆ. ಕಾ ರ್ಯಕ್ರಮ ನಡೆಸುವುದು ಸುಲಭದ ಮಾತಲ್ಲ. ಸಕಲ ಜವಾಬ್ದಾರಿಯುತ ಹಾಗೂ ಆಟಗಾರರಿಗೆ ಅನುಕೂಲ ವಾಗುವುದು ಮುಖ್ಯ. ಆ ನಿಟ್ಟಿನಲ್ಲಿ ಕಾಲೇಜು ಸಕಾತ್ಮಕವಾಗಿ ಸ್ಪಂದಿಸಿದೆ ಎಂದರು.
ಕ್ರೀಡಾ ಚಟುವಟಿಕೆ ಜೊತೆಗೆ ಶೈಕ್ಷಣಿಕ ಅರ್ಹತೆಯನ್ನು ವಿದ್ಯಾರ್ಥಿಗಳು ಹೊಂದಿರಬೇಕು. ಅರ್ಹತೆಯಿ ಲ್ಲದಿದ್ದರೆ ಸಮಾಜದಲ್ಲಿ ಬದುಕುವುದು ಕಷ್ಟವಾಗಲಿದೆ. ಉತ್ತರ ಭಾರತದ ಓರ್ವ ಕ್ರೀಡಾಪಟು ಕ್ರೀಡೆಯಲ್ಲಿ ಸಾಧನೆ ಮಾಡಿದ್ದರು. ಆದರೆ ಶೈಕ್ಷಣಿಕ ಅರ್ಹತೆ ಹೊಂದಿರದ ಕಾರಣ ಅವರ ಜೀವನ ಬೀದಿಗಾಡಿಗಳಲ್ಲಿ ವ್ಯಾಪಾರ ನಡೆಸುವಂತಾಗಿದೆ ಎಂದು ತಿಳಿಸಿದರು.
ಕ್ರೀಡೆ ಹಾಗೂ ವ್ಯಾಸಂಗದ ವೇಳೆ ವಿದ್ಯಾರ್ಥಿಗಳು ಸಮಯ ವ್ಯರ್ಥಗೊಳಿಸದಿರಿ. ಕ್ಷಣಕಾಲದ ಶ್ರೀಮ ಂತಿಕೆ, ವ್ಯಾಮೋಹಕ್ಕೆ ಒಳಗಾಗದೇ, ದೀರ್ಘಕಾಲದ ಜೀವನಕ್ಕೆ ಮೊದಲು ಆದ್ಯತೆ ನೀಡಬೇಕು. ಹರ್ಷದ ಕೂ ಳಿಗಿಂತ, ವರ್ಷದ ಕೂಳು ಮುಖ್ಯ. ಹಾಗಾಗಿ ಬದುಕನ್ನು ಆತ್ಮಸ್ಥೈರ್ಯದಿಂದ ಎದುರಿಸಬೇಕು ಎಂದರು.
ಕಾಲೇಜು ಅಧ್ಯಾಪಕ ಡಾ. ಕೆ.ಎನ್.ಲಕ್ಷ್ಮೀಕಾಂತ್ ಮಾತನಾಡಿ ಎರಡು ದಿನದಲ್ಲಿ ೨೮ ತಂಡಗಳು ತೀಪು ಗಾರರ ನಿರ್ಧಾರಕ್ಕೆ ಮರುಪ್ರಶ್ನಿಸದೇ ಹಾಗೂ ಕಪ್ಪುಚುಕ್ಕೆಯಿಲ್ಲದಂತೆ ಸುಲಲಿತವಾಗಿ ಪಂದ್ಯಾವಳಿ ಯಶಸ್ವಿ ಗೊಳಿಸಿದ್ದಾರೆ. ಕ್ರೀಕೇಟ್, ವಾಲಿಬಾಲ್ ಹೊರತಾಗಿ ಕಬಡ್ಡಿ ಏಷ್ಯಾ ಖಂಡದಲ್ಲೇ ಅತ್ಯಂತ ಪ್ರಚಲಿತವಿರುವ ಮೂರನೇ ಅತಿದೊಡ್ಡ ಕ್ರೀಡೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಐಡಿಎಸ್‌ಜಿ ಸರ್ಕಾರಿ ಕಾಲೇಜು ದೈಹಿಕ ಶಿಕ್ಷಕ ಕೆ.ಸಿ.ಕುಮಾರಸ್ವಾಮಿ, ಪ್ರಾಧ್ಯಾಪಕ ಎಸ್.ವಿ.ನಾಗರಾಜ್, ಕ್ರೀಡಾ ಸಮಿತಿ ಸದಸ್ಯರಾದ ಡಾ.ಎಸ್.ಮಹೇಶ್, ಡಾ.ಸೋಮಶೇಖರ್, ಡಾ.ಮೋಹ ನ್‌ಕುಮಾರ್, ಸುಧಾ, ದೈಹಿಕ ಶಿಕ್ಷಕ ರವೀಂದ್ರೇಗೌಡ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Gnana Sahadri Sankaraghatta team first in Kabaddi tournament
Leave a comment