Home namma chikmagalur chikamagalur ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು
chikamagalurCrime NewsHomeLatest Newsnamma chikmagalur

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

Share
Share

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು ಕಳುವಾಗಿರುವ ಘಟನೆ ತಾಲ್ಲೂಕಿನ ಮಳಲೂರು ಗ್ರಾಮದಲ್ಲಿ ನಡೆದಿದೆ.
ಮಳಲೂರು ಗ್ರಾಮದ ಕೃಷಿಕ ಮೋಹನ್ (೪೩) ಅವರು ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮೋಹನ್ ಅವರ ಕುಟುಂಬವು ಮನೆಯಲ್ಲಿ ವಾಸವಾಗಿದ್ದು, ಸುಮಾರು ೨೫೦ ಗ್ರಾಂನಷ್ಟು ಚಿನ್ನಾಭರಣಗಳನ್ನು ಬೀರುವಿನಲ್ಲಿ ಇಟ್ಟುಕೊಂಡಿದ್ದರು. ಕುಟುಂಬದ ಕಾರ್ಯಕ್ರಮವೊಂದಕ್ಕೆ ತೆರಳಲು ಆಭರಣಗಳನ್ನು ತೆಗೆದುಕೊಳ್ಳಲು ಬೀರು ತೆರೆದಾಗ ಕೆಲವು ಒಡವೆಗಳು ಕಾಣೆಯಾಗಿರುವುದು ಗಮನಕ್ಕೆ ಬಂದಿದೆ.

ಪರಿಶೀಲಿಸಿದಾಗ ತಲಾ ೧೦ ಗ್ರಾಂ ತೂಕದ ಎರಡು ಚಿನ್ನದ ಸರಗಳು, ಸುಮಾರು ೫ ಗ್ರಾಂ ತೂಕದ ಒಂದು ಜೊತೆ ಒಲೆ ಜುಮುಕಿ ಹಾಗೂ ೩ ಗ್ರಾಂ ತೂಕದ ಉಂಗುರ ಸೇರಿ ಒಟ್ಟು ಸುಮಾರು ೨೮ ಗ್ರಾಂ ಚಿನ್ನಾಭರಣ ಕಳುವಾಗಿರುವುದು ಗೊತ್ತಾಗಿದೆ. ಇದರ ಅಂದಾಜು ಮೌಲ್ಯ ?೧.೬೮ ಲಕ್ಷ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದರ ಜೊತೆಗೆ ಬೀರುವಿನಲ್ಲಿದ್ದ ?೨೦ ಸಾವಿರ ನಗದೂ ಕಾಣೆಯಾಗಿತ್ತು.

ಪ್ರಕರಣವನ್ನು ದಾಖಲಿಸಿಕೊಂಡಿರುವ ಗ್ರಾಮಾಂತರ ಪೊಲೀಸರು, ಕಳವು ಮಾಡಿದವರ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.

Gold jewellery and Rs 20000 cash stolen from home

 

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...