Home namma chikmagalur chikamagalur ಮನೆಯ ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು
chikamagalurCrime NewsHomeLatest Newsnamma chikmagalur

ಮನೆಯ ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

Share
Share

ಕಡೂರು: ಹಗಲು ಹೊತ್ತಿನಲ್ಲೇ ಬೀಗ ಹಾಕಿದ್ದ ಮನೆಯ ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಮತ್ತು ನಗದನ್ನು ದೋಚಿರುವ ಘಟನೆ ಕಡೂರು ತಾಲೂಕಿನ ಕಸವನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ವ್ಯಾಪಾರಸ್ಥರಾದ ಚೇತನ್ ಬಿ ಎಂಬುವವರ ಪತ್ನಿ ಲತಾ ಅವರು ಮಧ್ಯಾಹ್ನ ಮನೆಗೆ ಬೀಗ ಹಾಕಿ ಪಕ್ಕದ ಮನೆಗೆ ಹೋಗಿದ್ದ ಕೇವಲ ಒಂದು ಗಂಟೆಯ ಅವಧಿಯಲ್ಲಿ ಈ ಕಳ್ಳತನ ನಡೆದಿದೆ. ಕಳ್ಳರು ಯಾವುದೋ ಆಯುಧದಿಂದ ಮುಂಭಾಗದ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ್ದಾರೆ.

ರೂಮಿನಲ್ಲಿದ್ದ ಬೀರುವಿನ ಇಂಟರ್ ಲಾಕ್ ಒಡೆದು ಬಟ್ಟೆಗಳ ನಡುವೆ ಇದ್ದ 11 ಗ್ರಾಂ ತೂಕದ ಚಿನ್ನದ ಕಿವಿಯೋಲೆ ಹಾಗೂ ಉಂಗುರ (ಮೌಲ್ಯ ₹77,000), 70 ಗ್ರಾಂ ತೂಕದ ಬೆಳ್ಳಿಯ ಕೊರಳು ಮತ್ತು ಕಾಲು ಸರಗಳು (ಮೌಲ್ಯ ₹6,300) ಹಾಗೂ 11,700 ರೂಪಾಯಿ ನಗದು ಹಣ ಸೇರಿ ಒಟ್ಟು 95,000 ರೂಪಾಯಿ ಮೌಲ್ಯದ ಸ್ವತ್ತನ್ನು ಕಳವು ಮಾಡಿದ್ದಾರೆ.

ಈ ಕುರಿತು ಸಿಂಗಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Gold jewellery worth lakhs of rupees stolen after breaking down house door

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...