Home namma chikmagalur chikamagalur ಮನೆಗೆ ಕನ್ನಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು
chikamagalurCrime NewsHomeLatest Newsnamma chikmagalur

ಮನೆಗೆ ಕನ್ನಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

Share
Share

ಕೊಪ್ಪ: ಮಗಳ ಸಾಂಸ್ಕೃತಿಕ ಕಾರ್ಯಕ್ರಮ ಕಣ್ಣುಂಬಿಕೊಳ್ಳಲು ಇಡೀ ಕುಟುಂಬವೇ ಸಂಭ್ರಮದಿಂದ ಶಾಲೆಗೆ ತೆರಳಿದ್ದ ವೇಳೆ, ಖದೀಮರು ಮನೆಗೆ ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕೊಪ್ಪ ತಾಲೂಕಿನ ಕುಂದೂರು ಎಲೆಮಡಿಲು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಗ್ರಾಮದ ನಿವಾಸಿ ವೀಣಾ ಎಂಬುವವರು ತಮ್ಮ ಮಗಳ ಶಾಲೆಯಲ್ಲಿ ಆಯೋಜಿಸಲಾಗಿದ್ದ ಗಣೇಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಲು ಸೆಪ್ಟೆಂಬರ್ 14ರ ಸಂಜೆ ಮನೆಗೆ ಬೀಗ ಹಾಕಿ ಕುಟುಂಬ ಸಮೇತ ತೆರಳಿದ್ದರು. ಸಂಭ್ರಮ ಮುಗಿಸಿ ರಾತ್ರಿ ಮನೆಗೆ ಮರಳಿದಾಗ ಮನೆಯ ಹಿಂಬಾಗಿಲಿನ ಬೀಗ ಮುರಿದಿರುವುದು ಕಂಡುಬಂದಿದ್ದು, ಒಳಗೆ ತೆರಳಿ ನೋಡಿದಾಗ ಕಳ್ಳರ ಕೈಚಳಕ ಬಯಲಾಗಿದೆ.

ಕೊಠಡಿಯಲ್ಲಿದ್ದ ಗಾರ್ಡೇಜ್ ಬೀರುವಿನಲ್ಲಿದ್ದ ಸುಮಾರು 24 ಗ್ರಾಂ ತೂಕದ ಒಂದು ಜೊತೆ ಚಿನ್ನದ ಬಳೆಗಳು ಹಾಗೂ 8 ಗ್ರಾಂ ತೂಕದ ಚಿನ್ನದ ಓಲೆಗಳು ನಾಪತ್ತೆಯಾಗಿದ್ದು, ಕಳವಾದ ಆಭರಣಗಳ ಒಟ್ಟು ಮೌಲ್ಯ ಅಂದಾಜು 5 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

ಯಾರೂ ಇಲ್ಲದ ಸಮಯ ಸಾಧಿಸಿ ಹಿಂಬಾಗಿಲಿನ ಮೂಲಕ ಒಳನುಗ್ಗಿದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಸಂತ್ರಸ್ತರು ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

Gold jewelry worth lakhs of rupees stolen after breaking into a house.

Share

Leave a comment

Leave a Reply

Your email address will not be published. Required fields are marked *

Don't Miss

ಕೆಎಸ್‌ಆರ್‌ಟಿಸಿ ಬಸ್‌ಗಾಗಿ ರಸ್ತೆಗಿಳಿದ ವಿದ್ಯಾರ್ಥಿಗಳು-ಗ್ರಾಮಸ್ಥರು

ಕಡೂರು: ಗ್ರಾಮೀಣ ಭಾಗದ ಕುಗ್ರಾಮಗಳಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಗ್ರಾಮಸ್ಥರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ ಘಟನೆ ಕಡೂರು ತಾಲೂಕಿನ ಕಬ್ಬಳ್ಳಿ ಗೇಟ್ ಬಳಿ...

ವಿಶೇಷ ಅಧಿವೇಶನದಲ್ಲಿ ಪಕ್ಷಭೇದ ಮರೆತು ಮಲೆನಾಡಿನ ಸಮಸ್ಯೆ ಚರ್ಚಿಸಲು ಒತ್ತಾಯ

ಚಿಕ್ಕಮಗಳೂರು: ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ರಾಜ್ಯ ಸರ್ಕಾರ ಸೆ.21, 22 ಮತ್ತು 23ರಂದು ಮೂರು ದಿನಗಳ ವಿಶೇಷ ಅಧಿವೇಶನ ಕರೆದಿರುವುದನ್ನು ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ ಸ್ವಾಗತಿಸಿದೆ....

Related Articles

ಪೌರ ಕಾರ್ಮಿಕರಿಗೆ ಸವಲತ್ತು ಕಲ್ಪಿಸಿ

ಚಿಕ್ಕಮಗಳೂರು:  ಪೌರಕಾರ್ಮಿಕರಿಗೆ ವಸತಿ ಸೌಲಭ್ಯ, ರಜೆ, ಮಕ್ಕಳ ಶಿಕ್ಷಣ ಸೇರಿದಂತೆ ಅವರ ಕಲ್ಯಾಣಕ್ಕೆ ಅಗತ್ಯ ಸೌಕರ್ಯಗಳನ್ನು...

ಗ್ರೌಂಡ್ ಸರ್ವೇ ಅಗತ್ಯ-’ಕಾರ್ಬನ್ ಕ್ರೆಡಿಟ್ ನಿಗಮ’ ಸ್ಥಾಪನೆಗೆ ಪ್ರಸ್ತಾಪ

ಚಿಕ್ಕಮಗಳೂರು:  ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯಕ್ಕೆ  ಸಂಬಂಧಿಸಿದಂತೆ ಉಪಗ್ರಹ ಆಧಾರಿತ ಚಿತ್ರಣವನ್ನು...

ಮಾಂಸ ಮಾರಾಟ- ಮೂವರ ಬಂಧನ

ಎನ್.ಆ‌ರ್. ಪುರ: ಕಾಡಿನಲ್ಲಿ ಮೇಯುತ್ತಿದ್ದ ಜಾನುವಾರನ್ನು ಹಿಡಿದು ತಂದು ಎಸ್ಟೇಟ್‌ ನ ಕೂಲಿಲೈನ್ ಬಳಿ ಬರ್ಬರವಾಗಿ...

ನಕಲಿ ಬೀಗದ ಕೈ ಬಳಸಿ ಮನೆಯಲ್ಲಿದ್ದ ನಗ-ನಗದು ಕಳವು

ಚಿಕ್ಕಮಗಳೂರು: ಮನೆಯ ಯಜಮಾನರು ಹಬ್ಬದ ಸಂಭ್ರಮಕ್ಕೆಂದು ಊರಿಗೆ ತೆರಳಿದ್ದ ಸಮಯವನ್ನೇ ಹೊಂಚು ಹಾಕಿ ಕಾದು, ನಕಲಿ...