Home namma chikmagalur chikamagalur ₹1.16 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದು ಕಳವು
chikamagalurHomeLatest Newsnamma chikmagalur

₹1.16 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದು ಕಳವು

Share
Share

ಚಿಕ್ಕಮಗಳೂರು: ಮನೆಯ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು ₹80 ಸಾವಿರ ಮೌಲ್ಯದ ಚಿನ್ನಾಭರಣ, ₹20 ಸಾವಿರ ಮೌಲ್ಯದ ಬೆಳ್ಳಿ ವಸ್ತುಗಳು ಹಾಗೂ ₹16 ಸಾವಿರ ನಗದು ಸೇರಿದಂತೆ ಒಟ್ಟು ಅಂದಾಜು ₹1.16 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಳಸಾಪುರ ಗ್ರಾಮದಲ್ಲಿ ನಡೆದಿದೆ.

ಕಳಸಾಪುರ ಗ್ರಾಮದ 65 ವರ್ಷದ ಸೋಮಶೇಖರ್ ಅವರು ನೀಡಿದ ದೂರಿನ ಆಧಾರದ ಮೇಲೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ದೂರಿನ ಪ್ರಕಾರ, ಸೋಮಶೇಖರ್ ಹಾಗೂ ಅವರ ಪತ್ನಿ ತುಂಗಮ್ಮ ಅವರು ಆ.12ರಂದು ಬೆಂಗಳೂರಿನಲ್ಲಿರುವ ಹಿರಿಯ ಪುತ್ರ ಕಿರಣ್ ಅವರ ಮನೆಗೆ ತೆರಳಿದ್ದರು. ಮನೆಯಲ್ಲಿ ಕಿರಿಯ ಪುತ್ರ ಅರುಣ್ ಹಾಗೂ ಸೊಸೆ ಇದ್ದರು. ಅವರು ಆ.18ರಂದು ಬೆಳಗ್ಗೆ ಶೃಂಗೇರಿಗೆ ತೆರಳಿದ್ದರು. ಸೋಮಶೇಖರ್ ದಂಪತಿ ಅದೇ ದಿನ ಸಂಜೆ ಚಿಕ್ಕಮಗಳೂರಿಗೆ ಬಂದು ಮಗಳ ಮನೆಯಲ್ಲಿ ಉಳಿದುಕೊಂಡಿದ್ದರು.

ಆ.19ರಂದು ಮಧ್ಯಾಹ್ನ ಸುಮಾರು 4.30ಕ್ಕೆ ಮನೆಗೆ ಹಿಂದಿರುಗಿದಾಗ ಮನೆಯ ಬಾಗಿಲು ತೆರೆದ ಸ್ಥಿತಿಯಲ್ಲಿದ್ದು, ಬೀಗವನ್ನು ಯಾವುದೋ ಆಯುಧದಿಂದ ಮೀಟಿ ಮುರಿದಿರುವುದು ಕಂಡುಬಂದಿದೆ. ಒಳಗೆ ಪರಿಶೀಲಿಸಿದಾಗ ಕಬೋರ್ಡ್‌ಗಳನ್ನು ತೆರೆದು ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಲಾಗಿತ್ತು. ಹಾಲ್‌ನಲ್ಲಿದ್ದ ಕಬ್ಬಿಣದ ಬೀರುವಿನ ಬೀಗವನ್ನೂ ಮುರಿದು ಅದರಲ್ಲಿದ್ದ ವಸ್ತುಗಳನ್ನು ಎಳೆದಾಡಲಾಗಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಬೀರುವಿನಲ್ಲಿದ್ದ 6 ಗ್ರಾಂ ತೂಕದ ಒಂದು ಜೊತೆ ಚಿನ್ನದ ಓಲೆ, 4 ಗ್ರಾಂ ಚಿನ್ನದ ಉಂಗುರ ಹಾಗೂ 4 ಗ್ರಾಂ ಚಿನ್ನದ ಮಾಟಿ ಸೇರಿದಂತೆ ಒಟ್ಟು 14 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಇದರ ಅಂದಾಜು ಮೌಲ್ಯ ₹80 ಸಾವಿರ ಎನ್ನಲಾಗಿದೆ.

ಇದಲ್ಲದೆ ಸುಮಾರು 200 ಗ್ರಾಂ ತೂಕದ ಬೆಳ್ಳಿ ವಸ್ತುಗಳಾದ ಕುಂಕುಮದ ಬಟ್ಟಲುಗಳು, ಬೆಳ್ಳಿ ಗಣಪತಿ ಹಾಗೂ ಕಾಲು ಚೈನು ಸೇರಿದಂತೆ ಅಂದಾಜು ₹20 ಸಾವಿರ ಮೌಲ್ಯದ ಬೆಳ್ಳಿ ವಸ್ತುಗಳು ಮತ್ತು ₹16 ಸಾವಿರ ನಗದು ಕಳವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆ.18ರ ರಾತ್ರಿ ಮನೆಯೊಳಗೆ ನುಗ್ಗಿದ ಕಳ್ಳರು ಕಳವು ಮಾಡಿರುವ ಶಂಕೆ ವ್ಯಕ್ತಪಡಿಸಿರುವ ಸೋಮಶೇಖರ್, ಕಳ್ಳರನ್ನು ಪತ್ತೆಹಚ್ಚಿ ಕಳವಾದ ವಸ್ತುಗಳನ್ನು ವಾಪಸ್ ಕೊಡಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Gold silver and cash worth Rs 1.16 lakh stolen

Share

Leave a comment

Leave a Reply

Your email address will not be published. Required fields are marked *

Don't Miss

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ, ದೇಶದ ಸಾಧನೆಗಳನ್ನು ಸ್ಮರಿಸುವ, ಸ್ವಾತಂತ್ರ್ಯದ ಮೌಲ್ಯಗಳನ್ನು ಅರಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಸಂಕಲ್ಪದ ದಿನವಾಗಬೇಕು...

ಕಸ್ತೂರಿ ರಂಗನ್ ವರದಿ ಮರುಪರಿಶೀಲಿಸಲು ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಂಗಾರು ವೈಫಲ್ಯದಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ತಕ್ಷಣವೇ ಬರಗಾಲವೆಂದು ಘೋಷಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು. ಮಲೆನಾಡಿನ 137 ಗ್ರಾಮಗಳಿಗೆ ಕಂಟಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ಪುನಃ ಪರಿಶೀಲಿಸಿ ಜನವಸತಿ...

Related Articles

ಅಧಿಕಾರ ಎಂಬ ಮಾಯಾ ಜಿಂಕೆ ಮರೆಯಾಗಿದ್ದು ಏಕೆ ?

ಚಿಕ್ಕಮಗಳೂರು: ಕಳೆದ ನಾಲ್ಕು ವರೆ ವರ್ಷಗಳ ಹಿಂದೆಯೇ ವಿಧಾನ ಪರಿಷತ್ ಸದಸ್ಯರಾಗ ಬೇಕಿದ್ದ ಗಾಯಿತ್ರಿ ಶಾಂತೇಗೌಡ...

ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ-ಲೂಟಿಗಾಗಿ ಪೈಪೋಟಿ

ಚಿಕ್ಕಮಗಳೂರು: ಬಿಜೆಪಿ ಸರ್ಕಾರದಲ್ಲಿ ಶಾಸಕರ ನಡುವೆ ಕ್ಷೇತ್ರದ ಅಭಿವೃದ್ಧಿಗೆ ಪೈಪೋಟಿ ನಡೆದರೆ, ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ,ಲೂಟಿಗಾಗಿ...

ಸ್ವಾವಲಂಬನೆ-ಸಮಾಜ ಅವಕಾಶವೇ ಸಹಕಾರಿ ಚಳುವಳಿ ಉದ್ದೇಶ

ಚಿಕ್ಕಮಗಳೂರು: ಸಹಕಾರಿ ಚಳುವಳಿಯ ಮೂಲತತ್ವವೇ ಸ್ವಾವಲಂಬನೆ, ಪರಸ್ಪರ ಸಹ ಕಾರ, ಸಮಾನ ಅವಕಾಶ ಹಾಗೂ ಸಾಮಾಜಿಕ...

ಅಕ್ರಮ ಮರಳು ಸಾಗಾಟ: 407 ಲಾರಿ ವಶ, ಚಾಲಕ ಪೊಲೀಸ್ ವಶಕ್ಕೆ

ಶೃಂಗೇರಿ: ಪರವಾನಗಿ ಇಲ್ಲದೆ 407 ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಆರೋಪದ ಮೇಲೆ ಶೃಂಗೇರಿ ಪೊಲೀಸರು...