Home Crime News ಗೂಡ್ಸ್ ವಾಹನ ಪಲ್ಟಿ: ಮಹಿಳೆ ಸಾವು
Crime NewsHomeKadurLatest Newsnamma chikmagalur

ಗೂಡ್ಸ್ ವಾಹನ ಪಲ್ಟಿ: ಮಹಿಳೆ ಸಾವು

Share
Share
ಕಡೂರು: ತಾಲ್ಲೂಕಿನ ಕಬ್ಬಳ್ಳಿ ಗೇಟ್‌ ಬಳಿ ವೇದಾವತಿ ನದಿಯ ಕಿರು ಸೇತುವೆ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಪಲ್ಟಿಯಾಗಿ, ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.
ಬಿ.ಎಂ. ಕೊಪ್ಪಲಿನ ಈಶ್ವರಮ್ಮ (55) ಮೃತರು. ತಾಲ್ಲೂಕಿನ ಬಿ.ಎಂ. ಕೊಪ್ಪಲು ನಿವಾಸಿಗಳಾದ ಇವರು, ದೇವನೂರು ಸಮೀಪದ ಶಿವಪುರ ಬಳಿಯ ಸಂಬಂಧಿಕರ ಮನೆಯ ನಾಮಕರಣಕ್ಕೆಂದು ತೆರಳಿದ್ದರು.
ವಾಪಸಾಗುವ ವೇಳೆ ದುರಂತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ನಾಗಮ್ಮ, ಸುಧಾ ಮತ್ತು ಕಲ್ಲೇಶ್‌ ಎಂಬುವರಿಗೆ ಕಡೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕಳುಹಿಸಲಾಗಿದೆ.
ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Goods vehicle overturns: Woman dies
Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...