Home Latest News ಸರ್ಕಾರಿ ನೌಕರರ ಚುನಾವಣೆಯಲ್ಲಿ ರೆಸಾರ್ಟ್ ಪಾಲಿಟಿಕ್ಸ್
Latest News

ಸರ್ಕಾರಿ ನೌಕರರ ಚುನಾವಣೆಯಲ್ಲಿ ರೆಸಾರ್ಟ್ ಪಾಲಿಟಿಕ್ಸ್

Share
Share

ಚಿಕ್ಕಮಗಳೂರು : ರಾಜ್ಯ ಸರ್ಕಾರಿ ನೌಕರರ ಸಂಘ ದ ಜಿಲ್ಲಾ ಅಧ್ಯಕ್ಷ ಮತ್ತು ಖಜಾಂಚಿ ಹಾಗೂ ರಾಜ್ಯ ಸಮಿತಿಗೆ ಅಯ್ಕೆ ಮಾಡಲು 4_12_24ಕ್ಕೆ ಚುನಾವಣೆ ನಡೆಯಲಿದೆ.
ಚಿಕ್ಕಮಗಳೂರು ಸಂಘದ ಅಧ್ಯಕ್ಷರಾಗಲು ತೀವ್ರ ಪೈಪೋಟಿ ಶುರುವಾಗಿದ್ದು ರೆಸಾರ್ಟ್ನಲ್ಲಿ ಗುಂಡು ತುಂಡಿನ ಪಾರ್ಟಿಗಳು ನಡೆಯುತ್ತಿವೆ.

ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ದೇವೇಂದ್ರ ಖಜಾಂಚಿ ಸ್ಥಾನಕ್ಕೆ ಪೂರ್ಣೇಶ್ ನಾಮಪತ್ರ ಸಲ್ಲಿಸಿದ್ದಾರೆ ಇವರ ವಿರುದ್ದ ಕಂದಾಯ ಇಲಾಖೆಯ ಹೇಮಂತ್ ಅಧ್ಯಕ್ಷ ಸ್ಥಾನಕ್ಕೆ ಖಜಾಂಚಿಗೆ ಕೃಷ್ಣಮೂರ್ತಿ ರಾಜ್ ಅರಸ್,ಡಾ//ರಘು ಮತ್ತು ಶಿವಪ್ರಸಾದ್ ಹಾಗೂ ರಾಜ್ಯ ಸಮಿತಿಗೆ ಮಂಜುನಾಥ್ ಎಂಬುವವರು ನಾಮಪತ್ರ ಸಲ್ಲಿಸಿದ್ದಾರೆ.
ಹಾಲಿ ಅಧ್ಯಕ್ಷ ದೇವೇಂದ್ರ ತನ್ನ ಅವಧಿಯಲ್ಲಿ ಮಾಡಿದ ಕೆಲಸಗಳ ಪಟ್ಟಿ ಮಾಡಿಕೊಂಡು ಅಧ್ಯಕ್ಷರಾಗ ಬೇಕೆಂದು ಹಠಕ್ಕೆ ಬಿದಿದ್ದು ಗೆಲುವು ನನ್ನದು ಎನ್ನುತ್ತಿದ್ದಾರೆ. ನಲ್ಲೂರು ಸಮೀಪದ ರೆಸಾರ್ಟ್ ನಲ್ಲಿ ಗುಂಡು ತುಂಡಿನ ಪಾರ್ಟಿ ಮಾಡಿದ್ದಾರೆ.ನನ್ನನ್ನು ಸೋಲಿಸಲು ರಾಜಕಾರಣಿಯೊಬ್ಬರು ನೌಕರರನ್ನು ಹೆದರಿಸುತ್ತಿದ್ದಾರೆ ನಾನು ಮಾಡಿರುವ ಕೆಲಸ ನೌಕರರು ನೋಡಿದ್ದಾರೆ ಎಂದು ಎಲ್ಲಾ ಪಟ್ಟುಗಳನ್ನು ಬಳಸುತ್ತಿದ್ದಾರೆ.

ದೇವೇಂದ್ರ್ರ ವಿರುದ್ಧ ಅಖಾಡಕ್ಕೆ ಇಳಿದಿರುವ ಹೇಮಂತ್ ತನ್ನ ಪ್ಲಾನ್ ರೆಡಿಮಾಡಿಕೊಂಡು ಅಲ್ಲಂಪುರ ಬಳಿಯ ಬೈನರಿ ರೆಸಾರ್ಟ್ ನಲ್ಲಿ ಭರ್ಜರಿ ಪಾರ್ಟಿ ಮಾಡಿದ್ದಾರೆ.ದೇವೇಂದ್ರ ಮಾಡಿರುವ ಕೆಲಸಕ್ಕಿಂತ ಹೆಚ್ಚು ಕೆಲಸ ಮಾಡುವೆ ಎಂದು ತನ್ನೆಲ್ಲಾ ಶಕ್ತಿ ಬಳಸುತ್ತಿದ್ದು ಇವರಿಗೆ ವಿಧಾನ ಪರಿಷತ್ ಸದಸ್ಯರಾದ ಬೋಜೇಗೌಡರ ಬಹಿರಂಗ ಬೆಂಬಲವಿದೆ. ಇಬ್ಬರ ಪೈಪೋಟಿ ಮಧ್ಯೆ ಅಮಾಯಕ ಕೆಲ ನೌಕರರು ಗೋಳಾಡುತ್ತಿದ್ದಾರೆ.

ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ, ಪುರಸಭೆ,ನಗರಸಭೆ ಚುನಾವಣೆಯಲ್ಲಿ ಗುಂಡು ತುಂಡು ಮತ್ತು ಪ್ರವಾಸ ಕರೆದುಕೊಂಡು ಹೋಗಿ ಹೈಜಾಕ್ ಮಾಡುತ್ತಿದ್ದ ರಾಜಕಾರಣ ನೌಕರರ ಸಂಘದ ಚುನಾವಣೆಯಲ್ಲಿ ಕಾಣಿಸಿಕೊಂಡಿರುವುದಕ್ಕೆ ಕೆಲ ನೌಕರರು ಬೇಸರಿಸುತ್ತಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...