Home namma chikmagalur ದೇವಿರಮ್ಮ ಜಾತ್ರೋತ್ಸವದಲ್ಲಿ ವಾಹನ ನಿಲುಗಡೆಗೆ ಮಾರ್ಗಸೂಚಿ
namma chikmagalurchikamagalurHomeLatest News

ದೇವಿರಮ್ಮ ಜಾತ್ರೋತ್ಸವದಲ್ಲಿ ವಾಹನ ನಿಲುಗಡೆಗೆ ಮಾರ್ಗಸೂಚಿ

Share
Share

ಚಿಕ್ಕಮಗಳೂರು: ಬಿಂಡಿಗಾ ಆದಿಶಕ್ತಿ ಶ್ರೀ ದೇವೀರಮ್ಮ ಜಾತ್ರೆ ಹಾಗೂ ದೀಪೋತ್ಸವದ ಹಿನ್ನೆಲೆಯಲ್ಲಿ ವಾಹನಗಳ ಸಂಚಾರ ಹಾಗೂ ನಿಲುಗಡೆ ವ್ಯವಸ್ಥೆಯನ್ನು ಕ್ರಮಬದ್ಧಗೊಳಿಸಿ ಆದೇಶ ಹೊರಡಿಸಿರುವ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಸಿ.ಎನ್.ಮೀನಾ ನಾಗರಾಜ್ ಅವರು ಅಕ್ಟೋಬರ್ ೧೯ರ ಬೆಳಿಗ್ಗೆ ೬ ಗಂಟೆಯಿಂದ ೨೦ರ ರಾತ್ರಿ ೧೦ ಗಂಟೆಯವರೆಗೆ ಸ್ಥಳೀಯರು ಹಾಗೂ ಭಕ್ತಾದಿಗಳ ವಾಹನಗಳನ್ನು ಹೊರತುಪಡಿಸಿ ತರೀಕೆರೆಯಿಂದ ಚಿಕ್ಕಮಗಳೂರು ಕಡೆಗೆ ಬರುವ ಇತರ ಎಲ್ಲಾ ವಾಹನಗಳು ಕಡ್ಡಾಯವಾಗಿ ಕಡೂರು ಮಾರ್ಗವಾಗಿ ಚಲಿಸುವಂತೆ ಸೂಚಿಸಿದ್ದಾರೆ.

ಬಿಂಡಿಗಾ ಹಾಗೂ ಮಲ್ಲೇನಹಳ್ಳಿ ಗ್ರಾಮದಲ್ಲಿ ಅಕ್ಟೋಬರ್ ೧೯ ರಿಂದ ೨೩ರವರೆಗೆ ನಡೆಯಲಿರುವ ಶ್ರೀ ದೇವೀರಮ್ಮನವರ ಜಾತ್ರೆ ಹಾಗೂ ದೀಪೋತ್ಸವದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಸಲ್ಲಿಸಿರುವ ವರದಿಯನ್ನು ಆಧರಿಸಿ ಅವರು ವಾಹನ ಸಂಚಾರ ಹಾಗೂ ನಿಲುಗಡೆ ಬಗ್ಗೆ ಅಗತ್ಯ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಅಕ್ಟೋಬರ್ ೧೯ ಮತ್ತು ೨೦ ರಂದು ಚಿಕ್ಕಮಗಳೂರು-ಮಲ್ಲೇನಹಳ್ಳಿ ಮತ್ತು ತರೀಕೆರೆ-ಲಿಂಗದಹಳ್ಳಿ-ಮಲ್ಲೇನಹಳ್ಳಿ ಮಾರ್ಗದಲ್ಲಿ ಅನುಮತಿ ಇಲ್ಲದೆ ಸಂಚರಿಸುವ ಖಾಸಗಿ ಬಸ್‌ಗಳ ಸಂಚಾರವನ್ನು ನಿಷೇಧಿಸಲಾಗಿದೆ. ಅ.೧೯ ಮತ್ತು ೨೦ ರಂದು ತರೀಕೆರೆ-ಲಿಂಗದಹಳ್ಳಿ-ಸಂತವೇರಿ ಮಾರ್ಗವಾಗಿ ಬರುವ ಭಕ್ತಾದಿಗಳ ವಾಹನಗಳನ್ನು ಕುಮಾರಗಿರಿಯಲ್ಲಿ ಪಾರ್ಕಿಂಗ್ ಮಾಡುವುದು ಹಾಗೂ ಚಿಕ್ಕಮಗಳೂರು-ಕೈಮರಾ ಮಾರ್ಗವಾಗಿ ಬಿಂಡಿಗ ಮಲ್ಲೇನಹಳ್ಳಿಗೆ ಬರುವ ವಾಹನಗಳನ್ನು ನಿಗದಿಪಡಿಸಿರುವ ಮಲ್ಲೇನಹಳ್ಳಿ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಾತ್ರ ಪಾರ್ಕಿಂಗ್ ಮಾಡುವುದು ಹಾಗೂ ಯಾವುದೇ ಕಾರಣಕ್ಕೂ ರಸ್ತೆಯ ಬದಿಯಲ್ಲಿ ವಾಹನ ನಿಲುಗಡೆ ಮಾಡುವುದನ್ನು ನಿಷೇಧಿಸಲಾಗಿದೆ. ಅಲ್ಲದೆ, ಮಲ್ಲೇನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಗೇಟ್‌ನಿಂದ ಕುಮಾರಗಿರಿ ಗೋಪುರದವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಯಾವುದೇ ರೀತಿಯ ವಾಹನಗಳನ್ನು ಪಾರ್ಕಿಂಗ್ ಮಾಡದಂತೆ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ದೇವಿ ದರ್ಶನಕ್ಕೆ ಸಮಯ ನಿಗದಿ: ಪ್ರತೀ ವರ್ಷ ದೀಪಾವಳಿ ಹಬ್ಬದ ಮುನ್ನಾದಿನ (ನರಕ ಚತುರ್ದಶಿ) ಬೆಟ್ಟಕ್ಕೆ ತೆರಳಿ ದರ್ಶನ ಪಡೆಯುತ್ತಿದ್ದು, ಈ ವರ್ಷದಿಂದ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಮತ್ತು ಜನಸಮೂಹ ನಿಯಂತ್ರಣ ಮಾಡುವ ದೃಷ್ಟಿಯಿಂದ ಅಕ್ಟೋಬರ್ ೧೯ರ ಬೆಳಿಗ್ಗೆ ೮ ಗಂಟೆಯಿಂದ ಸಂಜೆ ೪ ಗಂಟೆಯವರೆಗೆ ಹಾಗೂ ೨೦ ರಂದು ಬೆಳಿಗ್ಗೆ ೮ ಗಂಟೆಯಿಂದ ಮಧ್ಯಾಹ್ನ ೨ ಗಂಟೆಯವರೆಗೆ ಮಾತ್ರ ದೇವಿಯ ದರ್ಶನಕ್ಕೆ ಸಮಯ ನಿಗದಿಪಡಿಸಿದ್ದು, ಈ ಸಂದರ್ಭದಲ್ಲಿ ಶ್ರೀ ದೇವೀರಮ್ಮ ಬೆಟ್ಟದಲ್ಲಿ ಅಭಿಷೇಕ, ನಂತರ ಪೂಜಾ ವಿಧಿ-ವಿಧಾನಗಳು ನೆರವೇರಲಿವೆ.

ಈ ಎರಡು ದಿವಸಗಳಲ್ಲಿ ಸುಮಾರು ೮೦,೦೦೦ ದಿಂದ ೯೦,೦೦೦ ಭಕ್ತಾದಿಗಳು ವಿವಿಧ ಮಾರ್ಗಗಳಿಂದ ಬೆಟ್ಟ ಹತ್ತಿ ಶ್ರೀ ದೇವೀರಮ್ಮನ ದರ್ಶನ ಪಡೆಯಲಿದ್ದಾರೆ. ಈ ಸಂದರ್ಭದಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲುಗಡೆಗೊಳಿಸುವುದರಿಂದ ವಾಹನಗಳ ಸುಗಮ ಸಂಚಾರಕ್ಕೆ ಧಕ್ಕೆ ಉಂಟು ಮಾಡುವ ಸಾಧ್ಯತೆ ಇದೆ. ಜೊತೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವುದು ಅನಿವಾರ್ಯ ssಎಂದು ಅವರು ಮಾಹಿತಿ ನೀಡಿದ್ದಾರೆ.

Guidelines for vehicle parking during Deviramma Jatrotsav

Share

Leave a comment

Leave a Reply

Your email address will not be published. Required fields are marked *

Don't Miss

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು. ಶೃಂಗೇರಿ ತಾಲೂಕಿನ ಬುಕ್ಕಡಿಬೈಲು ಗ್ರಾಮದ ನಿವಾಸಿಯಾಗಿರುವ ಬಿ.ಜಿ. ಕೃಷ್ಣಮೂರ್ತಿ ವಿರುದ್ಧ ಕರ್ನಾಟಕದಲ್ಲಿ ಒಟ್ಟು 54...

ವಾಹನಗಳ ಮಿರರ್ ತಗುಲಿ-ಕತ್ತಿ-ಬಂದೂಕು ಝಳಪಿಸಿದ ಗಲಾಟೆ

ಚಿಕ್ಕಮಗಳೂರು: ವಾಹನಗಳ ಮಿರರ್ ಪರಸ್ಪರ ತಗುಲಿದ ಸಣ್ಣ ವಿಚಾರ ಕತ್ತಿ-ಬಂದೂಕು ಝಳಪಿಸುವ ಹಂತಕ್ಕೆ ತಲುಪಿರುವ ಆರೋಪವೊಂದು ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಸರವಳ್ಳಿ ಗ್ರಾಮದಲ್ಲಿ ಜುಲೈ 2...

Related Articles

ಮಹಿಳೆ ಗಮನ ಬೇರೆಡೆ ಸೆಳೆದು ₹ 3.90 ಲಕ್ಷ ವಂಚನೆ

ಕಡೂರು: ಕಳೆದ ಜೂನ್‌ನಲ್ಲಿ ಗಮನ ಬೇರೆಡೆಗೆ ಸೆಳೆದು ಗ್ರಾಹಕರೋರ್ವರ ಖಾತೆಯಿಂದ ₹3.90 ಲಕ್ಷಡ್ರಾ ಮಾಡಿರುವ ಪ್ರಕರಣ...

ಶಿವಮೊಗ್ಗ-ಶೃಂಗೇರಿ ಮಾರ್ಗ ಪರಿಗಣಿಸಿ

ಚಿಕ್ಕಮಗಳೂರು: ನೂತನ ರೈಲ್ವೆ ಯೋಜನೆಗೆ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ಮಾಡುವ ವೇಳೆ ಶಿವಮೊಗ್ಗ, ಭದ್ರಾವತಿ,...

ಕವಿಕಲ್ ಮಠದ ರಸ್ತೆಯಲ್ಲಿ ಹುಲಿ ದಿಢೀರನೆ ಪ್ರತ್ಯಕ್ಷ

ಚಿಕ್ಕಮಗಳೂರು: ಕಾಫಿನಾಡಿನ ಹಸಿರು ಕಾಡುಗಳ ನಡುವೆ ಸಂಚರಿಸುತ್ತಿದ್ದ ಪ್ರವಾಸಿಗರಿಗೆ ಮರೆಯಲಾಗದ ಅನುಭವವೊಂದು ಎದುರಾಗಿದೆ. ಚಿಕ್ಕಮಗಳೂರು ತಾಲೂಕಿನ...

ಭದ್ರಾ ಜಲಾಶಯದ ನೀರು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲು ಸೂಚನೆ

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದ್ದು,...