Home namma chikmagalur chikamagalur ಜನವಸತಿ ಪ್ರದೇಶದಲ್ಲಿ ಗುಂಡು: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ವಿರುದ್ಧ ಸುಮೋಟೋ ಕೇಸ್
chikamagalurCrime NewsHomeLatest Newsnamma chikmagalur

ಜನವಸತಿ ಪ್ರದೇಶದಲ್ಲಿ ಗುಂಡು: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ವಿರುದ್ಧ ಸುಮೋಟೋ ಕೇಸ್

Share
Share

ಚಿಕ್ಕಮಗಳೂರು: ಆಯುಧ ಪೂಜೆಯಂದು ರಿವಾಲ್ವರ್‌, ಡಬಲ್ ಬ್ಯಾರಲ್ ಗನ್‌ನಿಂದ ಗುಂಡು ಹಾರಿಸಿದ ಆರೋಪ

ಚಿಕ್ಕಮಗಳೂರು: ನಗರದ ಕೋಟೆ ಬಡಾವಣೆಯ ಜನವಸತಿ ಪ್ರದೇಶದಲ್ಲಿ ಆಯುಧ ಪೂಜೆಯ ದಿನ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪದ ಮೇಲೆ ಬಿಜೆಪಿ ಯುವ ಮೋರ್ಚಾದ ನಗರ ಅಧ್ಯಕ್ಷ ಜೀವನ್ ಕೋಟೆ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದಾರೆ.

ಮನೆಯ ಮುಂಭಾಗದಲ್ಲಿ ಜೀವನ್ ಕೋಟೆ ಅವರು ರಿವಾಲ್ವರ್‌ನಿಂದ ಐದು ಸುತ್ತು ಹಾಗೂ ಡಬಲ್ ಬ್ಯಾರಲ್ ಗನ್‌ನಿಂದಲೂ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತವಾಗಿದೆ.

ಜನವಸತಿ ಪ್ರದೇಶದಲ್ಲಿ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿರುವ ಘಟನೆಗೆ ಸಂಬಂಧಿಸಿದಂತೆ ಕಾನೂನು ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿತ್ತು. ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮುಂದಿನ ಪೊಲೀಸ್ ತನಿಖೆ ಹಾಗೂ ಕಾನೂನು ಕ್ರಮಗಳ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Gunfire in a residential area: Suo motu case filed against BJP Yuva Morcha president

Share

Leave a comment

Leave a Reply

Your email address will not be published. Required fields are marked *

Don't Miss

ಆಶಾ ಕಾರ್ಯಕರ್ತೆಯರ ಕನಿಷ್ಠ ಗೌರವಧನ ₹15 ಸಾವಿರಕ್ಕೆ ಹೆಚ್ಚಿಸಲು ಆಗ್ರಹ

ಚಿಕ್ಕಮಗಳೂರು: ಆಶಾ ಕಾರ್ಯಕರ್ತೆಯರ ಮಾಸಿಕ ಕನಿಷ್ಠ ಗೌರವಧನವನ್ನು ₹10 ಸಾವಿರದಿಂದ ₹15 ಸಾವಿರಕ್ಕೆ ಹೆಚ್ಚಿಸಬೇಕು. ಅವರ ಸೇವೆಗೆ ತಕ್ಕ ಗೌರವ, ಆರ್ಥಿಕ ಭದ್ರತೆ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ವಿಧಾನಮಂಡಲದಲ್ಲಿ...

ಘನತ್ಯಾಜ್ಯ ನಿರ್ವಹಣೆಗೆ ಕಟ್ಟುನಿಟ್ಟಿನ ಉಪನಿಯಮ ಅಳವಡಿಸಿಕೊಳ್ಳಬೇಕು

ಚಿಕ್ಕಮಗಳೂರು:  ನಗರ ಸ್ಥಳೀಯ ಸಂಸ್ಥೆಗಳಿಗೆ ಘನತ್ಯಾಜ್ಯ ನಿರ್ವಹಣೆ ಎನ್ನುವುದು ಅತ್ಯಂತ ತುರ್ತು ಹಾಗೂ ಪ್ರಮುಖ ಆದ್ಯತೆಯ ವಿಷಯವಾಗಿದ್ದು, ಸಾರ್ವಜನಿಕ ಸೇವೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಪ್ರತಿಯೊಂದು ಸಂಸ್ಥೆಯೂ ಕಟ್ಟುನಿಟ್ಟಿನ ಉಪನಿಯಮಗಳನ್ನು ಅಳವಡಿಸಿಕೊಳ್ಳಬೇಕು ಎಂದು...

Related Articles

ಸಮಾನ ಆಚರಣಾ ಸಂಹಿತೆ, ಸಂಸ್ಕಾರ ಶಿಕ್ಷಣ ಇಂದಿನ ಅನಿವಾರ್ಯತೆ

*ಶೃಂಗೇರಿ:* ಭಾರತೀಯ ಮೂಲದ ಧಾರ್ಮಿಕ ಪರಂಪರೆಗಳಲ್ಲಿರುವ ಸಾಮಾನ್ಯ ಮೌಲ್ಯಗಳನ್ನು ಆಧರಿಸಿ ಸಮಾನ ಆಚರಣೆ ಸಂಹಿತೆ ಹಾಗೂ...

ಶಿಕ್ಷಣ ವಂಚಿತರು ಮುಂದೆ ಬರಲು ಸಂವಿಧಾನ ಅವಕಾಶ

ತರೀಕೆರೆ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಿಂದುಳಿದವರು, ಶಿಕ್ಷಣ ವಂಚಿತರು ಮುಂದೆ ಬರಲು ಬಾಬಾ ಸಾಹೇಬ ಅಂಬೇಡ್ಕರ್ ರಚಿಸಿರುವ...

ಬಡವರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಿ

ಚಿಕ್ಕಮಗಳೂರು: ಬಡವರು ತಮ್ಮ ಜೇಬಿನ ಹಣವನ್ನು ಖಾಸಗಿ ಆಸ್ಪತ್ರೆಗಳಿಗೆ ಸುರಿಯಬಾರದು ಎಂಬ ಉನ್ನತ ಉದ್ದೇಶದಿಂದ ಸರ್ಕಾರ...

ಎನ್‌ಸಿಡಿ ತಪಾಸಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ರಾಷ್ಟ್ರಮಟ್ಟದ ಗೌರವ

ಚಿಕ್ಕಮಗಳೂರು: ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿ ಕೈಗೊಂಡಿರುವ ಎನ್‌ಸಿಡಿ (ಸಾಂಕ್ರಾಮಿಕವಲ್ಲದ ಕಾಯಿಲೆಗಳ) ತಪಾಸಣಾ ಕಾರ್ಯಕ್ರಮಕ್ಕೆ ರಾಷ್ಟ್ರಮಟ್ಟದ ಪ್ರಶಸ್ತಿ...