Home namma chikmagalur ಹಡಪದ ಅಪ್ಪಣ್ಣ ಒಂದು ಸಮುದಾಯಕ್ಕೆ ಸೀಮಿತರಾಗಬಾರದು
namma chikmagalurchikamagalurHomeLatest News

ಹಡಪದ ಅಪ್ಪಣ್ಣ ಒಂದು ಸಮುದಾಯಕ್ಕೆ ಸೀಮಿತರಾಗಬಾರದು

Share
Share

ಚಿಕ್ಕಮಗಳೂರು: ಶಿವಶರಣ ಹಡಪದ ಅಪ್ಪಣ್ಣನವರಂತಹ ಮಹಾನುಭಾವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು. ಇವರು ಎಲ್ಲಾ ಸಮಾಜದ ಮಾತ್ರವಲ್ಲ, ಇಡೀ ರಾಷ್ಟ್ರದ ಆಸ್ತಿ. ಇವರ ವಿಚಾರಧಾರೆಗಳನ್ನು ನಾವು ನಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅವರು ಹೇಳಿದರು.

ಜಿಲ್ಲಾಡಳಿತ ವತಿಯಿಂದ ಇಂದು ನಗರದ ಕುವೆಂಪು ಕಲಾಮಂದಿರದ ಹೇಮಾಂಗಣದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಶಿವಶರಣ ಹಡಪದ ಅಪ್ಪಣ್ಣನವರು ಬಸವಣ್ಣನವರ ಬಾಲ್ಯದ ಒಡನಾಡಿಗಳಾಗಿ ಬಸವಣ್ಣನವರ ಬಲಗೈ ಭಂಟನೆಂದೇ ಪ್ರಸಿದ್ಧರಾದವರು ಎಂದು ಬಣ್ಣಿಸಿದರು.

೧೨ನೇ ಶತಮಾನದಲ್ಲಿ ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ ಅನುಭವ ಮಂಟಪದಲ್ಲೂ ಬಸವಣ್ಣನವರಿಗೆ ಆಪ್ತ ಕಾರ್ಯದರ್ಶಿಗಳಾಗಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಕಾರ್ಯ ನಿರ್ವಹಿಸಿದ ಹೆಗ್ಗಳಿಕೆ ಹೊಂದಿದ್ದರು. ಬಸವಣ್ಣನವರ ಆಸ್ಥಾನದಲ್ಲಿ ಅವರು ಪ್ರಾಮಾಣಿಕತೆ, ಸ್ವಾಮಿನಿಷ್ಠೆಯೊಂದಿಗೆ ಕರ್ತವ್ಯ ಪರಿಪಾಲನೆ ಮಾಡಿದ್ದರು. ಇವರು ಸುಮಾರು ೨೫೦ಕ್ಕೂ ಹೆಚ್ಚು ವಚನಗಳನ್ನು ರಚಿಸಿದ್ದಾರೆ. ಹಿಂದಿನ ಕಾಲದಲ್ಲಿ ನಮ್ಮ ಹಿರಿಯರಿಗೆ ಯಾವುದೇ ವಿದ್ಯೆ ಇರಲಿಲ್ಲ; ಆದರೆ ಅಪಾರವಾದ ಜ್ಞಾನ ಶಕ್ತಿ, ತಿಳುವಳಿಕೆ ಮುಖಾಂತರ ಸಮಾಜವನ್ನು ಎಚ್ಚರಿಸಿದರು ಉತ್ತಮವಾದ ಸಮಾಜವನ್ನು ಕಟ್ಟಿದರು ಎಂದು ಹೇಳಿದರು.

ಸಾಹಿತಿ ಬಿ.ತಿಪ್ಪೇರುದ್ರಪ್ಪ ಉಪನ್ಯಾಸ ನೀಡಿ, ಅಪ್ಪಣ್ಣನವರ ಜನ್ಮಸ್ಥಳವು ಕೂಡ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಸಬಿಹಾಳ ಗ್ರಾಮ ಎಂಬ ಪ್ರತೀತಿ ಇದೆ. ಇದು ಬಸವಣ್ಣನವರ ಜನ್ಮಸ್ಥಳವಾದ ಇಂಗಳೇಶ್ವರದಿಂದ ೬ ಕಿ.ಮೀ. ದೂರದಲ್ಲಿದೆ. ಹಡಪದ ಅಪ್ಪಣ್ಣ ಎಂದೇ ಇವರು ಖ್ಯಾತರು/ ಶರಣರ ಕಾಯಕವಾದ ಹಡಪದಕ್ಕೆ ಎರಡು ಅರ್ಥವಿದೆ, ಹಡಪ ಎಂದರೆ ಡಬ್ಬೆ, ಅದು ವೀಳ್ಯದ ಡಬ್ಬಿ ಹಾಗೂ ಕ್ಷೌರ ಸಾಮಗ್ರ್ರಿಯ ಡಬ್ಬಿ, ಎರಡಕ್ಕೂ ಹಡಪ ಎಂಬ ಹೆಸರಿದೆ.

ಅಪಾರ ಭಕ್ತಿ ಜ್ಞಾನವುಳ್ಳವರಾಗಿದ್ದ ಅಪ್ಪಣ್ಣನವರು ಕಾಯಕ ಜೀವಿಗಳಾಗಿ ಕ್ಷೌರ ವೃತ್ತಿಯನ್ನು ನಡೆಸಿಕೊಂಡು ಹೋಗುತ್ತಿದ್ದ ಶರಣರು. ಮಾಡುವ ಕಾಯಕ ಯಾವುದಾದರೂ ಅದು ಮೇಲೂ ಅಲ್ಲ, ಕೀಳೂ ಅಲ್ಲ, ತನು, ಮನ, ಧನವೆಂಬ ತ್ರಿಕರಣ ಶುದ್ಧವಾಗಿ ಮಾಡುವುದೇ ಕಾಯಕ ಎಂದು ಭಾವಿಸಿದ್ದರು.

ಅವರು ವಿವಾಹವಾದ ಶರಣೆ ಲಿಂಗಮ್ಮ ಕೂಡ ಅಪಾರ ಜ್ಞಾನವನ್ನು ಹೊಂದಿದವರಾಗಿದ್ದರು. ಆಗಿನ ಕಾಲದ ಜಾತಿ ವ್ಯವಸ್ಥೆಯಲ್ಲಿ ಭೌತಿಕವಾಗಿ ಈ ದಂಪತಿ ಹಿಂದುಳಿದಿದ್ದರೂ ಅತ್ಯಂತ ಸದೃಢ ಮನಸ್ಸಿನವರಾಗಿ ಮೇರು ಜ್ಞಾನವನ್ನು ಹೊಂದಿದ್ದರು. ಬಸವಣ್ಣನವರಿಗೆ ಅಪ್ಪಣ್ಣನವರು ಆಪ್ತಕಾರ್ಯದರ್ಶಿ ಮಾತ್ರವಲ್ಲ, ತಮ್ಮ ಜೀವದ ಒಡನಾಡಿಯಾಗಿದ್ದರು. ಪ್ರತಿ ಕ್ಷಣದಲ್ಲೂ ಬಸವಣ್ಣನವರಿಗೆ ಪ್ರತಿಯೊಂದು ಮಾಹಿತಿಯನ್ನೂ ಮೊದಲು ತಿಳಿಸುತ್ತಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ನಗರಸಭೆ ಅಧ್ಯಕ್ಷೆ ಬಿ.ಶೀಲಾ ದಿನೇಶ್ ಮಾತನಾಡಿದರು. ಉಪತಹಸೀಲ್ದಾರ್ ರಾಮ್‌ರಾವ್ ದೇಸಾಯಿ, ಸವಿತಾ ಸಮಾಜದ ಜಿಲ್ಲಾಧ್ಯಕ್ಷ ವಿಶ್ವನಾಥ್ ಸಂಕಲ್ಪ, ಕರ್ನಾಟಕ ರಾಜ್ಯ ಸವಿತಾ ಸಮಾಜ  ಜಿಲ್ಲಾಧ್ಯಕ್ಷ ಎಸ್.ಎನ್ ಮಹಾಲಿಂಗಪ್ಪ, ತಾಲ್ಲೂಕು ಸವಿತಾ ಸಮಾಜದ ಅಧ್ಯಕ್ಷ ಸತ್ಯನಾರಾಯಣ, ಗೌರವಾಧ್ಯಕ್ಷ ಎನ್.ಸತೀಶ್, ಉಪಾಧ್ಯಕ್ಷ ಟಿ.ಪಿ.ವಿಜಯ್ ಕುಮಾರ್, ಆರ್ಯ ನಯನ ಕ್ಷತ್ರಿಯ ಶ್ರೀ ರಾಮ ಮಂದಿರ ಸವಿತಾ ಸಮಾಜದ ಅಧ್ಯಕ್ಷ ಯೋಗೀಶ್ ಹಾಗೂ ಮುಖಂಡರು ಮತ್ತಿತರರು ಭಾಗವಹಿಸಿದ್ದರು.

Hadapada Appanna should not be limited to one community

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...