Home Latest News ಪೊಲೀಸ್ ಸ್ಟೇಷನ್ ನ ಆವರಣದಲ್ಲಿದ್ದ ಕಾರಿನಲ್ಲೇ ಅರ್ಧಕೆಜಿ ಚಿನ್ನಪತ್ತೆ
Latest NewschikamagalurCrime NewsHomenamma chikmagalur

ಪೊಲೀಸ್ ಸ್ಟೇಷನ್ ನ ಆವರಣದಲ್ಲಿದ್ದ ಕಾರಿನಲ್ಲೇ ಅರ್ಧಕೆಜಿ ಚಿನ್ನಪತ್ತೆ

Share
Share

ಚಿಕ್ಕಮಗಳೂರು:  ಕೊಪ್ಪ ತಾಲೂಕು ಹರಂದೂರು ಗ್ರಾಮದಲ್ಲಿರುವ ಮಲೆನಾಡ ಗಾಂಧಿ ಮಾಜಿ ಸಚಿವ ದಿ. ಗೋವಿಂದೇಗೌಡರವರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣದಲ್ಲಿ ಅಚ್ಚರಿ ಘಟನೆ ನಡೆದಿದೆ. 2 ತಿಂಗಳು ಪೊಲೀಸ್ ಸ್ಟೇಷನ್ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಕಾರಿನಲ್ಲೇ ಅರ್ಧ ಕೆಜಿ ಚಿನ್ನ ಪತ್ತೆಯಾಗಿದೆ.

ಕಳ್ಳತನ ನಡೆಯುವ ಹದಿನೈದು ದಿನದ ಹಿಂದೆಯಷ್ಟೇ ನೇಪಾಳ ಮೂಲದ ಮೂವರು ಗೋವಿಂದೇಗೌಡರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಕೆಲಸಕ್ಕೆ ಸೇರಿ ಕೇವಲ ಹದಿನೈದು ದಿನದಲ್ಲಿ ಚಿನ್ನಾಭರಣ, ಹಣ ದೋಚಿ ಪರಾರಿಯಾಗಿದ್ದ ಗ್ಯಾಂಗ್. ಈ ಬಗ್ಗೆ ಕೊಪ್ಪ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಚುರುಕು ಕಾರ್ಯಾಚರಣೆ ನಡೆಸಿದ ಪೊಲೀಸರು, ಮಹಾರಾಷ್ಟ್ರದ ಬಳಿ ಎರಡು ಕಾರಿನ ಸಮೇತ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಪೊಲೀಸ್ ಸೀಜ್ ಮಾಡಿದ್ದ ಕಾರುಗಳನ್ನ ಪೊಲೀಸ್ ಠಾಣೆಯ ಕಾಂಪೌಂಡ್‌ನಲ್ಲಿ ನಿಲ್ಲಿಸಲಾಗಿತ್ತು. ಇತ್ತು ಆರೋಪಿಗಳ ವಿಚಾರಣೆ ನಡೆಸಿದ್ದ ಪೊಲೀಸರು. ವಿಚಾರಣೆ ವೇಳೆ ಚಿನ್ನ ನಗದು ಹಣ ಇರುವ ಬಗ್ಗೆ ಮೊದಲು ಬಾಯಿಬಿಟ್ಟಿರಲಿಲ್ಲ ಖದೀಮರು. ಪೊಲೀಸರು ತೀವ್ರ ವಿಚಾರಣೆ ಬಳಿಕ ಕಾರಿನಲ್ಲಿರುವ ಬಗ್ಗೆ ಆರೋಪಿಗಳು ಬಾಯಿಬಿಟ್ಟಿದ್ದಾರೆ.

ಎರಡು ತಿಂಗಳ ಕಾಂಪೌಂಡ್ ಒಳಗೆ ನಿಂತಿದ್ದ ಕಾರಿನಲ್ಲೇ ಚಿನ್ನಾಭರಣ, ಹಣ ಇಟ್ಟಿರುವುದಾಗಿ ಒಪ್ಪಿಕೊಂಡ ಖದೀಮರು, ಪೊಲೀಸರು ಕಾರು ಪರಿಶೀಲನೆ ನಡೆಸಿದಾಗ ಕಾರಿನ ಸ್ಟೆಪ್ಪಿ ಜಾಗದಲ್ಲಿ 600 ಗ್ರಾಂ ಚಿನ್ನ, 600 ಗ್ರಾಂ ಬೆಳ್ಳಿ, 3 ಲಕ್ಷ 41 ಸಾವಿರ ರೂಪಾಯಿಯ ದುಡ್ಡಿನ ಚೀಲ ಪತ್ತೆಯಾಗಿದೆ.

ಈ ಪ್ರಕರಣದಿಂದಾಗಿ ಮಲೆನಾಡ ಪ್ರದೇಶದಲ್ಲಿ ಆಘಾತ ಮೂಡಿಸಿದೆ. ಮನೆ ಕೆಲಸದವರ ಹಿನ್ನೆಲೆ ಪರಿಶೀಲಿಸದೆ ಕೆಲಸಕ್ಕೆ ಸೇರಿಸಿಕೊಂಡರೆ ಏನಾಗುತ್ತದೆ ಎಂಬುದಕ್ಕೆ ಈ ಪ್ರಕರಣ ತಾಜಾ ನಿದರ್ಶನವಾಗಿದೆ.

Half a kg of gold found in a car in the police station premises

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...