Home namma chikmagalur chikamagalur ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್
chikamagalurCrime NewsHomeLatest Newsnamma chikmagalur

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

Share
Share

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ.

ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ ಹಾಗೂ ಅರುಣ್ ನಡುವೆ ತೀವ್ರ ಗಲಾಟೆ ನಡೆದಿದೆ ಈ ಜಗಳ ವಿಕೋಪಕ್ಕೆ ತಿರುಗಿದಾಗ ಶೇಷಗಿರಿ ಎಂಬಾತ ಅರುಣ್‌ನ ಮೇಲೆ ಏಕಾಏಕಿ ಲಾಂಗ್‌ನಿಂದ ದಾಳಿ ನಡೆಸಿದ್ದಾನೆ. ಶೇಷಗಿರಿ ಬೀಸಿದ ಲಾಂಗ್‌ನಿಂದ ತಪ್ಪಿಸಿಕೊಳ್ಳಲು ಅರುಣ್ ತನ್ನ ಕೈಯನ್ನು ಅಡ್ಡ ಕೊಟ್ಟಿದ್ದು, ಈ ವೇಳೆ ಅರುಣ್‌ನ ಹಸ್ತ ಸಂಪೂರ್ಣವಾಗಿ ಕತ್ತರಿಸಿ ತುಂಡಾಗಿದೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳು ಅರುಣ್‌ನನ್ನು ತಕ್ಷಣವೇ ಚಿಕ್ಕಮಗಳೂರಿನ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಆದರೆ ಗಾಯ ಅತ್ಯಂತ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಮಂಗಳೂರಿಗೆ ರವಾನಿಸಲಾಗಿದೆ.

ಈ ಭೀಕರ ಕೃತ್ಯಕ್ಕೆ ಸಂಬಂಧಿಸಿದಂತೆ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Hand cut in fight over married woman

Share

Leave a comment

Leave a Reply

Your email address will not be published. Required fields are marked *

Don't Miss

ರಸ್ತೆಯಲ್ಲಿ ದುಡುಕಿನಿಂದ ಚಾಲನೆ – ಪ್ರಕರಣ ದಾಖಲು

ಮೂಡಿಗೆರೆ: ಇನ್‌ಸ್ಟಾಗ್ರಾಮ್‌ನಲ್ಲಿ ಲೈಕ್ಸ್ ಮತ್ತು ಕಾಮೆಂಟ್ಸ್ಗಾಗಿ ಸಾರ್ವಜನಿಕ ರಸ್ತೆಯಲ್ಲಿ ಅಪಾಯಕಾರಿಯಾಗಿ ರೀಲ್ಸ್ ಮಾಡಿದ್ದ ಮೂಡಿಗೆರೆ ಮೂಲದ ವ್ಯಕ್ತಿಯೊಬ್ಬರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮದ ರಾಜು ಪಿ.ಕೆ...

ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯ ವರ್ತನೆ: ಯುವಕ ಬಂಧನ

ಶೃಂಗೇರಿ:  ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಯುವಕನೊಬ್ಬನನ್ನು ಶೃಂಗೇರಿ ಪೊಲೀಸರು ಬಂಧಿಸಿದ್ದಾರೆ. ಪಟ್ಟಣದಲ್ಲಿ ಕುಷನ್ ಅಂಗಡಿ ನಡೆಸುತ್ತಿದ್ದ ಶಬೀರ್ ಎಂಬಾತ ತನ್ನ ಅಂಗಡಿ ಬಳಿ ಬಂದಿದ್ದ ಅಪ್ರಾಪ್ತ ಬಾಲಕಿಯ ಖಾಸಗಿ...

Related Articles

ಆರ್.ಎಸ್.ಎಸ್. ಲೆಕ್ಕ ಕೇಳಲು ನೀವ್ಯಾರು ?

ಮೂಡಿಗೆರೆ: ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಣಿ ಹಾಗೂ ಲೆಕ್ಕ ಕೇಳಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರ...

ಕಳ್ಳತನ ಆರೋಪಿ ಬಂಧನ-₹12.50 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಅಲ್ಲೂರು: ಬಸರವಳ್ಳಿ ಗ್ರಾಮದ ಮಂಜುನಾಥ್ ಅವರ ಮನೆಯಲ್ಲಿ ಕಳ್ಳತನ ನಡೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್...

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು...