Home Latest News ಜಮೀರ್ ಅಹ್ಮದ್ ನನ್ನು ಆಲದ ಮರಕ್ಕೆ ನೇಣು ಹಾಕಿ : ಪ್ರಮೋದ್ ಮುತಾಲಿಕ್ ಕೆಂಡಾಮಂಡಲ
Latest News

ಜಮೀರ್ ಅಹ್ಮದ್ ನನ್ನು ಆಲದ ಮರಕ್ಕೆ ನೇಣು ಹಾಕಿ : ಪ್ರಮೋದ್ ಮುತಾಲಿಕ್ ಕೆಂಡಾಮಂಡಲ

Share
Share

ಚಿಕ್ಕಮಗಳೂರು :

ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕೆಂಡಾಮಂಡಲರಾಗಿ ವಾಗ್ದಾಳಿ ನಡೆಸಿದ್ದಾರೆ. ಜಮೀನ್ ನನ್ನು ಆಲದ ಮರಕ್ಕೆ ನೇಣು ಹಾಕಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಚಿಕ್ಕಮಗಳೂರಿನ ದತ್ತಮಾಲಾ ಅಭಿಯಾನದ ಕೊನೆ ದಿನವಾದ ಇಂದು ನಗರದ ಶಂಕರ ಮಠ ಬಳಿ ಧರ್ಮಸಭೆ ವೇಳೆ ದಿಕ್ಸೂಚಿ ಭಾಷಣದ ಮಾಡುತ್ತಾ ಆಕ್ರೋಶ ಹೊರಹಾಕಿದ್ದಾರೆ.

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಚಿವ ಜಮೀರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ ಜಮೀರ್ ಅಹಮದ್ ನನ್ನು ಔರಂಗಜೇಬ್ ಗೆ ಹೋಲಿಸಿದ ಅವರು ಬೆಂಗಳೂರಿನ ಚಾಮರಾಜ ಪೇಟೆಯಲ್ಲಿ 25 ಸಾವಿರ ಬಾಂಗ್ಲಾದೇಶಿ ಮುಸ್ಲಿಮರಿದ್ದಾರೆ
ಅವರನ್ನ ಜಮೀರ್ ಸಾಕಿದ್ದಾನೆ ಸಾಕ್ತಿದ್ದಾನೆ ಓಟರ್ ಲೀಸ್ಟ್ ತಯಾರು ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಇದೇ ವೇಳೆ ಮಾತನಾಡಿದ ಅವರು ಈ ರೀತಿ ಅನೇಕ ಬ್ಲಂಡರ್ ಗಳನ್ನ ಸನ್ಮಾನ್ಯ ಔರಂಗಜೇಬ್ ಮಾಡಿದ್ದಾನೆ ಅದೇ ರೀತಿ ಇವನು ಮಾಡುತ್ತಿದ್ದು ಬಿಜೆಪಿ ಯವರು ಜಮೀರ್ ನನ್ನ ಗಡಿಪಾರು, ಮಾಡಿ ಕಿತ್ತಾಕಿ, ಸಸ್ಪೆಂಡ್ ಮಾಡಿ ಅಂತಿದ್ದಾರೆ ಆದರೆ ಗಡಿಪಾರು, ಸಸ್ಪೆಂಡ್ ಬೇಡ ಅವನನ್ನು ಯಾವುದಾರೂ ಆಲದಮರಕ್ಕೆ ನೇಣು ಹಾಕಿ ಎಂದು ಮುತಾಲಿಕ್ ರೋಷಾವೇಶದಿಂದ ಹೇಳಿದ್ದಾರೆ

  1. ಜಮೀರ್ ಈ ದೇಶದಲ್ಲಿ ಇರಲು ಲಾಯಕ್ಕಿಲ್ಲ, ನಾಲಾಯಕ್ ಇದ್ದಾನೆ ಎಂದ ಅವರು ಯಾರದ್ದು ಜಮೀನು, ಭೂಮಿ, ಕಟ್ಟಡ ನುಂಗಿ ನೀರು ಕುಡಿಯೋಕೆ ನಿಮ್ಮ ಅಪ್ಪಂದ ಎಂದು ಪ್ರಶ್ನಿಸಿರುವ ಮುತಾಲಿಕ್ ಯಾವುದೇ ಆಸ್ತಿಯನ್ನು ವಕ್ಫ್ ಕಬಳಿಸಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....