Home Crime News ನೇಣು ಬಿಗಿದುಕೊಂಡು ಹೆಡ್ ಕಾನ್ಸ್‌ಟೇಬಲ್ ಆತ್ಮಹತ್ಯೆ
Crime NewschikamagalurHomeLatest Newsnamma chikmagalur

ನೇಣು ಬಿಗಿದುಕೊಂಡು ಹೆಡ್ ಕಾನ್ಸ್‌ಟೇಬಲ್ ಆತ್ಮಹತ್ಯೆ

Share
Share

ಚಿಕ್ಕಮಗಳೂರು: ನೇಣು ಬಿಗಿದುಕೊಂಡು ಹೆಡ್ ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ನಗರದ ಬಾರ್ ಲೈನ್ ರಸ್ತೆಯ ಪೊಲೀಸ್ ಕ್ವಾಟ್ರಸ್‌ನಲ್ಲಿ ಗುರುವಾರ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಹೆಡ್ ಕಾನ್ಸ್‌ಟೇಬಲ್ ಕಾಂತರಾಜ್ (೪೫) ಎಸ್ಪಿ ಕಚೇರಿಯಲ್ಲಿ ಕಂಪ್ಯೂಟರ್ ಸೆಕ್ಷನ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಪಘಾತದಲ್ಲಿ ಬಲಗಾಲು ಕಳೆದುಕೊಂಡು ಕೃತಕ ಕಾಲು ಜೋಡಣೆ ಮೂಲಕ ಕರ್ತವ್ಯ ನಿರ್ವಹಿಸುತ್ತಿದ್ದರು.

ಅಪಘಾತದಲ್ಲಿ ಕಾಲು ಕಳೆದು ಕೊಂಡಾಗಿನಿಂದ ಮಾನಸಿಕವಾಗಿ ಖಿನ್ನತೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ. ಈ ಹಿಂದೆ ನಕ್ಸಲ್ ನಿಗ್ರಹ ಪಡೆ ಹಾಗೂ ಕಳಸ ಠಾಣೆಯಲ್ಲಿ ಕಾಂತರಾಜ್ ಕರ್ತವ್ಯ ನಿರ್ವಹಿಸಿದ್ದು.

ಅವರ ಕುಟುಂಬಸ್ಥರು ಊರಿಗೆ ತೆರಳಿದ್ದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Head constable committed suicide by hanging himself

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...