Home namma chikmagalur chikamagalur ಇಂದು ಆರ್‌ಟಿಒ ರಾಕೇಶ್ ಕುಮಾರ್ ವಿರುದ್ಧ ವಿಚಾರಣೆ
chikamagalurHomeLatest Newsnamma chikmagalur

ಇಂದು ಆರ್‌ಟಿಒ ರಾಕೇಶ್ ಕುಮಾರ್ ವಿರುದ್ಧ ವಿಚಾರಣೆ

Share
Share

ಚಿಕ್ಕಮಗಳೂರು: ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಭ್ರಷ್ಟಾಚಾರ ಹಾಗೂ ಹಣಕಾಸು ಅಕ್ರಮಗಳ ಆರೋಪ ಕೇಳಿಬಂದಿರುವ ಬೆನ್ನಲ್ಲೇ ಆರ್‌ಟಿಒ ರಾಕೇಶ್ ಕುಮಾರ್ ವಿರುದ್ಧ ಮತ್ತೊಂದು ಪ್ರಕರಣದಲ್ಲಿ ಸಹಕಾರ ಇಲಾಖೆಯಿಂದ ವಿಚಾರಣಾ ನೋಟಿಸ್ ಜಾರಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆಯ ಚಿಕ್ಕಮಗಳೂರು ಜಿಲ್ಲಾ ಘಟಕದ ವತಿಯಿಂದ ಏಪ್ರಿಲ್ ೩೦, ೨೦೨೬ರಂದು ಸಾರಿಗೆ ಸಚಿವರಿಗೆ ಸಲ್ಲಿಸಿರುವ ದೂರಿನಲ್ಲಿ, ಚಿಕ್ಕಮಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಕೇಶ್ ಕುಮಾರ್ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಲಾಗಿದೆ. ಅಧಿಕಾರ ವಹಿಸಿಕೊಂಡ ಬಳಿಕ ಕಚೇರಿಯ ವಿವಿಧ ಕೆಲಸಗಳು ಮತ್ತು ದಾಖಲೆಗಳಿಗಾಗಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಆನ್‌ಲೈನ್ ವ್ಯವಸ್ಥೆ ಜಾರಿಯಲ್ಲಿದ್ದರೂ ಕಚೇರಿ ಮಟ್ಟದಲ್ಲಿ ಹಣ ಪಡೆಯಲಾಗುತ್ತಿದೆ. ಮೋಟಾರು ವಾಹನ ನಿರೀಕ್ಷಕರು, ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ನೌಕರರಿಗೆ ಮಾಸಿಕ ಹಣ ನೀಡುವಂತೆ ನಿಗದಿ ಮಾಡಲಾಗಿದೆ. ಹಣ ನೀಡದೆ ದಾಖಲೆಗಳಿಗೆ ಸಹಿ ಮಾಡಲಾಗುತ್ತಿಲ್ಲ ಎಂಬ ಆರೋಪವನ್ನೂ ಮಾಡಲಾಗಿದೆ.

ಶಿವಮೊಗ್ಗದ ಜಂಟಿ ಸಾರಿಗೆ ಆಯುಕ್ತರ ವಿರುದ್ಧವೂ ಆರೋಪ ಮಾಡಿರುವ ದೂರುದಾರರು, ಅವರ ವ್ಯಾಪ್ತಿಯಲ್ಲಿರುವ ಆರ್‌ಟಿಒ ಕಚೇರಿಗಳಿಂದ ಹಣ ಸಂಗ್ರಹಿಸಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪ್ರತಿ ಆರ್‌ಟಿಒ ಕಚೇರಿಯಿಂದ ಸುಮಾರು ೩ ಲಕ್ಷ ರೂ. ಹಣ ಪಡೆಯಲಾಗುತ್ತಿದೆ ಹಾಗೂ ಒಟ್ಟು ೧೩ ಪ್ರಾದೇಶಿಕ ಸಾರಿಗೆ ಕಚೇರಿಗಳಿಂದ ಹಣ ಸಂಗ್ರಹಿಸಲಾಗುತ್ತಿದೆ ಎಂಬ ಆರೋಪವನ್ನು ಮಾಡಿದ್ದಾರೆ.

ಚಿಕ್ಕಮಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಕೇಶ್ ಕುಮಾರ್ ಭ್ರಷ್ಟಾಚಾರ ಆರೋಪದ ದೂರು ದಾಖಲಾದ ಹಿನ್ನೆಲೆಯಲ್ಲಿ ಆ. ೧೦ರಂದು ಚಿಕ್ಕಮಗಳೂರು ಆರ್ ಟಿ ಓ ಕಚೇರಿಯಲ್ಲಿ ದೂರಿನ ವಿಚಾರಣೆ ನಡೆಯದೆ. ಈ ಕುರಿತು ಸಾರಿಗೆ ಆಯುಕ್ತರು ದೂರುದಾರರು ಹಾಗೂ ಆರ್‌ಟಿಓ ಅಧಿಕಾರಿಗಳಿಗೆ ವಿಚಾರಣಾ ನೋಟೀಸ್ ಜಾರಿ ಮಾಡಿದ್ದಾರೆ.

ಆ. ೧೦ರಂದು ಬೆಳಗ್ಗೆ ೧೧ ಗಂಟೆಗೆ ಅಪರ ಸಾರಿಗೆ ಆಯುಕ್ತರು ದೂರುದಾರ ನೂರುಲ್ಲಾ ಖಾನ್, ಆರ್ ಟಿಓ ರಾಕೇಶ್ ಕುಮಾರ್, ಶಿವಮೊಗ್ಗ ವಿಭಾಗದ ಜಂಟಿ ಸಾರಿಗೆ ಆಯುಕ್ತ ಭೀಮನಗೌಡ ಪಾಟೀಲ್ ಅವರ ವಿಚಾರಣೆ ನಡೆಸಲಿದ್ದಾರೆ. ಈ ವೇಳೆ ವಿಚಾರಣೆಗೆ ಪೂರಕವಾದ ದಾಖಲೆಗಳೊಂದಿಗೆ ಹಾಜರಾಗುವಂತೆ ನೋಟೀಸಿನಲ್ಲಿ ತಿಳಿಸಲಾಗಿದೆ.

Hearing against RTO Rakesh Kumar today

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...