Home Crime News ಭಾರೀ ಮಳೆ ಎರಡು ಪ್ರತ್ಯೇಕ ಅಪಘಾತ 13 ಜನರಿಗೆ ಗಾಯ
Crime Newsnamma chikmagalur

ಭಾರೀ ಮಳೆ ಎರಡು ಪ್ರತ್ಯೇಕ ಅಪಘಾತ 13 ಜನರಿಗೆ ಗಾಯ

Share
Share

ಚಿಕ್ಕಮಗಳೂರು :

ಜಿಲ್ಲೆಯಲ್ಲಿ ಮಳೆಯ ಅವಾಂತರಗಳು ಹೆಚ್ಚುತ್ತಿವೆ. ಅದರಲ್ಲೂ ವಾಹನ ಅಪಘಾತಗಳು ತೀವ್ರವಾಗುತ್ತಿದ್ದು ಮೂಡಿಗೆರೆ ತಾಲೂಕಿನಲ್ಲಿ ಎರಡು ಪ್ರತ್ಯೇಕ ಆಕ್ಸಿಡೆಂಟ್ ಗಳಲ್ಲಿ 13 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು ವಿವಿಧ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೂಡಿಗೆರೆ ತಾಲೂಕಿನಲ್ಲಿ ಇಂದು ಎರಡು ಅಪಘಾತಗಳು ಸಂಭವಿಸಿವೆ. ಒಂದೆಡೆ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಒಂದು ಪಲ್ಟಿ ಹೊಡೆದಿದ್ದು, ಜೀಪಿನಲ್ಲಿದ್ದ ನಾಲ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಬಣಕಲ್ ಸಮೀಪದ ಕೋಗಿಲೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಜೀಪ್ ನಲ್ಲಿದ್ದವರು ಪ್ರಾಣಾಪಾಯ ದಿಂದ ಪಾರಾಗಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದು. ಮತ್ತೊಂದೆಡೆ
ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಟಿ.ಟಿ ವಾಹನ ಪಲ್ಟಿ ಆಗಿದೆ. ಮಳೆ ಹಿನ್ನೆಲೆಯಲ್ಲಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ಪಲ್ಟಿಯಾಗಿದೆ. ಈ ಘಟನೆ ಮೂಡಿಗೆರೆ ತಾಲೂಕಿನ ಸಂಪಿಗೆಖಾನ್ ಬಳಿ ನಡೆದಿದ್ದು
ಬೆಂಗಳೂರಿನಿಂದ ಹೊರನಾಡಿಗೆ ಬಂದಿದ್ದ ಟಿಟಿ ವಾಹನ
ಅನ್ನಪೂರ್ಣೇಶ್ವರಿ ದರ್ಶನ ಮುಗಿಸಿ ವಾಪಸ್ ಹೊರಟಾಗ ಅವಘಡ ಸಂಭವಿಸಿವೆ.‌ ಟಿ.ಟಿಯಲ್ಲಿದ್ದ 15 ಜನ ಪ್ರಯಾಣಿಕರಲ್ಲಿ 9 ಜನರಿಗೆ ಗಾಯಗಳಾಗಿದ್ದು ಕಳಸ ಮೂಡಿಗೆರೆ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಮಳೆ ಹಾಗೂ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...

Related Articles

ಕೋಟ್ಯಂತರ ರೂಪಾಯಿ ವಂಚಿಸಿದ ನಕಲಿ ಲೇಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಚಿನ್ನ, ಹಣ, ಮೊಬೈಲ್ ಹಾಗೂ ಕಾರು...

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ...

2ಬಿ ಮೀಸಲಾತಿ ಮರುಸ್ಥಾಪನೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಕೂಡಲೇ...